ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಯಾಂಡಲ್ವುಡ್, ಬಾಲಿವುಡ್ ಅಷ್ಟೇ ಅಲ್ಲ, ಹಾಲಿವುಡ್'ನಲ್ಲೂ ಫೇಮಸ್ ಆಗಿರೋದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ ಇದೀಗ ಕಿಚ್ಚ ಸುದೀಪ್ ಹಾಲಿವುಡ್ ಸೂಪರ್ ಸ್ಟಂಟ್ ಮಾಸ್ಟರ್ Greg Powell ಅವರೊಂದಿಗೆ ಕಾಣಿಸಿಕೊಂಡಿದ್ದು, ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 


COMMERCIAL BREAK
SCROLL TO CONTINUE READING

"ಲಂಡನ್ ಮೂಲದ ಸೂಪರ್ ಸ್ಟಂಟ್ ಕೊರಿಯಾಗ್ರಫೆರ್ Greg Powell ಹಾಲಿವುಡ್'ನಲ್ಲಿ 'ಸ್ಕೈ ಫಾಲ್', 'ಹ್ಯಾರಿ ಪೋಟರ್', 'ಫಾಸ್ಟ್ ಅಂಡ್ ಫ್ಯೂರಿಯಸ್ 6 ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಅದ್ಭುತ ಕೆಲಸ ಮಾಡಿದ್ದಾರೆ. ಕನ್ನಡದ 'ವಿಲನ್' ಚಿತ್ರಕ್ಕೆ ಅವರು ಕೆಲಸ ಮಾಡಬೇಕಿತ್ತು. ಆದರೆ ಅವರೊಂದಿಗೆ ಕೆಲಸ ಮಾಡುವ ಅವಕಾಶ ಕೈತಪ್ಪಿತ್ತು. ಈಗ 'ಸೈರಾ' ಸಿನಿಮಾದಲ್ಲಿ ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ" ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. 



ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ 151ನೇ ಸಿನಿಮಾ 'ಸೈರಾ ನರಸಿಂಹ ರೆಡ್ಡಿ' ದ್ವಿಭಾಷಾ ಚಿತ್ರದಲ್ಲಿ ಸುದೀಪ್ ಅಭಿನಯ ಮಾಡುತ್ತಿದ್ದು, ಈ ಚಿತ್ರಕ್ಕೆ ಸ್ಟಂಟ್ ಮಾಸ್ಟರ್ ಆಗಿ Greg Powell ಕೆಲಸ ಮಾಡಿದ್ದಾರೆ. ಈಗಾಗಲೇ 'ದಿ ವಿಲನ್', 'ಕೋಟಿಗೊಬ್ಬ 3', 'ಪೈಲ್ವಾನ್' ಚಿತ್ರಗಳಲ್ಲಿ ಸುದೀಪ್ ಬ್ಯುಸಿ ಆಗಿದ್ದು, ತೆಲುಗಿನ 'ಸೈರಾ' ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ.