ಫ್ಯಾಂಟಸಿ ಸಾಹಸಮಯ ವಿಕ್ರಾಂತ್ ರೋಣ ಸಿನಿಮಾ ನಾಳೆ ಎಲ್ಲೆಡೆ ಬಿಡುಗಡೆಯಾಗುತ್ತಿದೆ. ಕಿಚ್ಚ ಸುದೀಪ್ ಭಾರತದಾದ್ಯಂತ ಪ್ರೇಕ್ಷಕರನ್ನು ಸೆಳೆಯಲು ಸಿದ್ಧರಾಗಿದ್ದಾರೆ. ಜುಲೈ 28 ರಂದು ಬಿಡುಗಡೆಯಾಗಲಿರುವ ಚಿತ್ರದಲ್ಲಿ ತನ್ನ ಶತ್ರುಗಳನ್ನು ಭಯಭೀತಗೊಳಿಸುವ ವಿಕ್ರಾಂತ್ ಎಂದು ಕರೆಯಲ್ಪಡುವ ಸುದೀಪ್ ಪಾತ್ರವನ್ನು ತೋರಿಸಿದ್ದಾರೆ. ನಿರ್ದೇಶಕ ಅನುಪ್ ಭಂಡಾರಿ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಕೂಡ ನಟಿಸಿದ್ದಾರೆ.
ಇದನ್ನೂ ಓದಿ: Vikrant Rona Movie Review : ವಿಕ್ರಾಂತ್ ರೋಣ ಪೈಸಾ ವಸೂಲ್ ಎಂಟರ್ಟೈನರ್ ಸಿನಿಮಾ!
ವಿಕ್ರಾಂತ್ ರೋಣ ದೊಡ್ಡ ಬಜೆಟ್ ಕನ್ನಡ ಚಿತ್ರವಾಗಿದ್ದು, ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್‌ನಲ್ಲಿಯೂ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಹಿಂದಿಯಲ್ಲಿ ಸಲ್ಮಾನ್ ಖಾನ್ ಪ್ರಸ್ತುತಪಡಿಸಿದ್ದಾರೆ ಮತ್ತು ಪಿವಿಆರ್ ಎಲ್ಲೆಡೆ ಬಿಡುಗಡೆ ಮಾಡಿದೆ.
ಪಿವಿಆರ್ ಮತ್ತು ಐನಾಕ್ಸ್ ಎರಡೂ ಕೆಲವು ದಿನಗಳ ಹಿಂದೆ ವಿಲೀನಗೊಂಡವು ಮತ್ತು ಇದು ಭಾರತದಲ್ಲಿ ಅತಿದೊಡ್ಡ ಮಲ್ಟಿಪ್ಲೆಕ್ಸ್ ಸರಣಿಯನ್ನು ರೂಪಿಸಿತು ಎಂಬುದು ತಿಳಿದಿರುವ ಸತ್ಯ. ಡಿಸ್ಟ್ರಿಬ್ಯುಷನ್ ಸ್ಟಾಟರ್ಜಿಯನ್ನು ವಿಕ್ರಾಂತ್ ರೋಣ ಸಿನಿಮಾ ಚೆನ್ನಾಗಿ ಬಳಸಿಕೊಂಡಿದೆ. ಉತ್ತರ ಭಾರತದಲ್ಲಿ ಸಲ್ಮಾನ್ ಖಾನ್ ಫಿಲ್ಮ್ಸ್, ಜೀ ಸ್ಟುಡಿಯೋಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವು ಜುಲೈ 28 ರಂದು 3D ನಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಇದನ್ನು ಜಾಕ್ ಮಂಜುನಾಥ್ ಅವರು ತಮ್ಮ ನಿರ್ಮಾಣದ ಶಾಲಿನಿ ಆರ್ಟ್ಸ್ ಅಡಿಯಲ್ಲಿ ನಿರ್ಮಿಸಿದ್ದಾರೆ ಮತ್ತು ಇನ್ವೆನಿಯೊದ ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡಿದ್ದಾರೆ.
ಇದನ್ನೂ ಓದಿ: 'Vikrant Rona' ಬಿಡುಗಡೆಗೆ ವಿಶ್ವಾದ್ಯಂತ ಕೌಂಟ್ ಡೌನ್ ಶುರು..!
ಸಖತ್ ಕ್ಯೂರಿಯಾಸಿಟಿ ಹುಟ್ಟುಹಾಕಿರುವ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಈ ಸಿನಿಮಾ ನೋಡಲು ಜನ ತುದಿಗಾಲಿನಲ್ಲಿ ಕಾದು ಕುಳಿತಿದ್ದಾರೆ. ಬಿಗ್ ಬಜೆಟ್ನಲ್ಲಿ ಬೃಹತ್ ಸೆಟ್ಗಳನ್ನು ಹಾಕಿ ಈ ಚಿತ್ರದ ಶೂಟಿಂಗ್ ಮಾಡಲಾಗಿದೆ. ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ಸುದೀಪ್ ಹೆಜ್ಜೆ ಹಾಕಿರುವ ರಾ ರಾ ರಕ್ಮಮ್ಮ.. ಹಾಡನ್ನು ದೊಡ್ಡ ಪರದೆಯಲ್ಲಿ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ವಿಶೇಷ ಎಂದರೆ 3ಡಿ ವರ್ಷನ್ನಲ್ಲಿ ಈ ಚಿತ್ರ ಮೂಡಿಬಂದಿರುವುದರಿಂದ ಹೈಪ್ ಹೆಚ್ಚಾಗಿದೆ.
ವಿಕ್ರಾಂತ್ ರೋಣ ಸಿನಿಮಾದ ಮೊದಲ ದಿನದ ಬಹುತೇಕ ಎಲ್ಲಾ ಟಿಕೆಟ್ಗಳು ಸೇಲ್ ಆಗಿವೆ. ಬಹುತೇಕ ಶೋಗಳು ಹೌಸ್‌ಫುಲ್ ಆಗುವುದು ಪಕ್ಕಾ ಆಗಿದೆ. 3ಡಿಯಲ್ಲಿ ಸಿನಿಮಾ ನೋಡಲು ಪ್ರೇಕ್ಷಕರು ಹೆಚ್ಚು ಆಸಕ್ತಿ ತೋರುತ್ತಿರುವುದು ವಿಶೇಷ. ಈ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಳ್ಳುವುದು ಪಕ್ಕಾ ಆಗಿದೆ. ಅಲ್ಲದೇ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆಹೊಡೆಯಲಿದೆ ಮತ್ತು ಹಲವು ದಾಖಲೆಗಳನ್ನು ಉಡೀಸ್ ಮಾಡುವ ಎಲ್ಲ ಲಕ್ಷಣಗಳು ಕಾಣುತ್ತಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.