Kiccha Sudeep Tweet On Max Update: ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್‌ 'ಮ್ಯಾಕ್ಸ್' ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು 'ಮ್ಯಾಕ್ಸ್' ಸಿನಿಮಾ ಅಪ್‌ಡೇಟ್ ಕೇಳುತ್ತಲೇ ಇದ್ದಾರೆ. ಸುಮಾರು ಒಂದು ವರ್ಷದ ಬಳಿಕ 'ಮ್ಯಾಕ್ಸ್' ಸಿನಿಮಾ ಘೋಷಣೆ ಮಾಡಿದ್ದು, ಇದೀಗ ಅಭಿಮಾನಿಗಳಿಗೆ ಇದರ ಬಗ್ಗೆ ಈ ನಟ ಉತ್ತರಿಸಿ ಸಾಕಾಗಿದ್ದಾರೆ. ಅಭಿಮಾನಿಗಳ ಪ್ರೀತಿಯನ್ನು ಕಾತುರತೆಯನ್ನು ಅರ್ಥ ಮಾಡಿಕೊಂಡಿರುವ ಅಭಿನಯ ಚಕ್ರವತಿ ಬೆಳ್ಳಂಬೆಳಗ್ಗೆ X ಖಾತೆ(ಟ್ವಿಟ್ಟರ್)ಯ ಮೂಲಕ ಪ್ರತಿಕ್ರಿಯಿಸಿದ್ದಾರೆ. 


COMMERCIAL BREAK
SCROLL TO CONTINUE READING

ನಟ ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ "ಎಲ್ಲಾ ಸ್ನೇಹಿತರಿಗೆ ಶುಭೋದಯ, ಪ್ರೀತಿ ತುಂಬಿದ ಅಪ್ಪುಗೆ. ಅಪ್‌ಡೇಟ್ಸ್ ಬಗ್ಗೆ ಹರಿದುಬರುತ್ತಿರುವ ಟ್ವೀಟ್‌ಗಳನ್ನು ನೋಡಿ ಖುಷಿಯಾಗುತ್ತದೆ. ಆದರೆ ಬೇರೆ ನಟರ ಸಿನಿಮಾಗಳು ಬಿಡುಗಡೆ ಆಗಿದೆ ಎಂದು ಅಥವಾ ಬೇರೆ ನಟರಿಗೆ ಪೈಪೋಟಿ ಕೊಡಬೇಕೆಂದು ಅಪ್‌ಡೇಟ್ ಕೊಡುವುದಕ್ಕೆ ಸಾಧ್ಯವಿಲ್ಲ. ಚಿತ್ರತಂಡ ಏನಾದರೂ ರಿಲೀಸ್ ಮಾಡಲು ಅಥವಾ ಘೋಷಿಸಲು ಸಿದ್ಧವಿದ್ದಾಗ ಮಾತ್ರ ಅಪ್‌ಡೇಟ್ ಕೊಡಲು ಸಾಧ್ಯ" ಎಂದು ಮ್ಯಾಕ್ಸ್‌ ಚಿತ್ರದ ಅಪ್‌ಡೇಟ್‌ ಬಗ್ಗೆ ಮಾತನಾಡಿದ್ದಾರೆ. 


Martain Update: ಮಾರ್ಟಿನ್‌ ಅಂತಿಮ ಹಂತಕ್ಕೆ ಚಿತ್ರೀಕರಣದಲ್ಲಿ ಧ್ರುವ ಸರ್ಜಾ ಭಾಗಿ!


ಇನ್ನೂ ಸುದೀಪ್‌ "ನನ್ನ ಕೆಲಸದ ಮೇಲೆ ನೀವು ಅಭಿಮಾನಿಗಳು ತೋರುತ್ತಿರುವ ಪ್ರೀತಿಗೆ ಖುಷಿಯಾಗುತ್ತದೆ. ಆದರೆ ಬಿಗ್‌ಬಾಸ್ ಅಥವಾ ಸಿಸಿಎಲ್‌ ಮೇಲಿನ ವ್ಯಂಗ್ಯ ಸರಿಯಲ್ಲ. ಇದು ಚಿತ್ರದ ಕಡೆಗೆ ಒಬ್ಬರ ಆಸಕ್ತಿ, ಕುತೂಹಲವನ್ನು ಪ್ರದರ್ಶಿಸುವ ಮಾರ್ಗವಲ್ಲ. 'ಮ್ಯಾಕ್ಸ್' ಸಿನಿಮಾ ಚೆನ್ನಾಗಿ ರೂಪುಗೊಳುತ್ತಿದೆ. ನಾವು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ನಿಮ್ಮನ್ನು ರಂಜಿಸಲು ಪ್ರಯತ್ನಿಸುತ್ತಿದ್ದೇನೆ. ಅದಕ್ಕೆ ನಮ್ಮ ಮೊದಲ ಆದ್ಯತೆ" ಎಂದು ಟ್ವೀಟ್ ಮಾಡಿದ್ದಾರೆ. 


ಸದ್ಯ ಕಿಚ್ಚನ ಟ್ವೀಟ್ ನೋಡಿ ಅಭಿಮಾನಿಗಳು ಖುಷಿಯಾಗಿ, ಸರಿ ಸರ್, ಇನ್ನು ಮುಂದೆ 'ಮ್ಯಾಕ್ಸ್' ಅಪ್‌ಡೇಟ್ ಕೇಳಿ ಕಾಟ ಕೊಡಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ. 'ಮ್ಯಾಕ್ಸ್' ಸಿನಿಮಾ ವಿಚಾರಕ್ಕೆ ಬಂದರೆ ದೊಡ್ಡಮಟ್ಟದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಈಗಾಗಲೇ ಚಿತ್ರದ ಟೀಸರ್ ನೋಡಿ ಅಭಿಮಾನಿಗಳು ಥ್ರಿಲ್ಲಾಗಿದ್ದಾರೆ. 'ಮಹಾಬಲಿಪುರಂ' ಭಾರೀ ಸೆಟ್‌ಗಳನ್ನು ನಿರ್ಮಿಸಿ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದ್ದು, ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುದೀಪ್ ಚಿತ್ರದಲ್ಲಿ ಅರ್ಜುನ್ ಮಹಾಕ್ಷಯ್ ಎನ್ನುವ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ  ಬಣ್ಣ ಹಚ್ಚಿದ್ದಾರೆ. 
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.