ಶಿವಣ್ಣನ 60ನೇ ಹುಟ್ಟುಹಬ್ಬಕ್ಕೆ ‘ಗೋಸ್ಟ್’! ಪೊಸ್ಟರ್ ರಿಲೀಸ್ ಮಾಡಲಿರುವ ಕಿಚ್ಚ ಸುದೀಪ್

‘ಕಿಂಗ್ ಆಫ್ ಆಲ್ ಮಾಸಸ್’ ಎಂಬ ಈ ವಿಭಿನ್ನ ಪೋಸ್ಟರ್ ಅನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Jul 10, 2022, 05:03 PM IST
  • ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ ಕಿಚ್ಚ ಸುದೀಪ್
  • ಶಿವಣ್ಣನ 60ನೇ ಹುಟ್ಟುಹಬ್ಬಕ್ಕೆ ಚಿತ್ರತಂಡದಿಂದ ಪ್ರೀತಿಯ ಉಡುಗೊರೆ
  • ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ನಟ ಶ್ರೀನಿ ಆಕ್ಷನ್ ಕಟ್
ಶಿವಣ್ಣನ 60ನೇ ಹುಟ್ಟುಹಬ್ಬಕ್ಕೆ ‘ಗೋಸ್ಟ್’! ಪೊಸ್ಟರ್ ರಿಲೀಸ್ ಮಾಡಲಿರುವ ಕಿಚ್ಚ ಸುದೀಪ್ title=
‘ಘೋಸ್ಟ್’ ಚಿತ್ರದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಜುಲೈ 12ರ ಮಂಗಳವಾರ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ 60ನೇ ಹುಟ್ಟುಹಬ್ಬ. ಶಿವಣ್ಣನ ಹುಟ್ಟುಹಬ್ಬಕ್ಕೆ ಅವರ ಸಾವಿರಾರು ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಖ್ಯಾತ ನಟ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ‘ಘೋಸ್ಟ್’ ಚಿತ್ರದ ಪೋಸ್ಟರ್ ಬಿಡುಗಡೆಯಾಗಲಿದೆ.

ಇದನ್ನೂ ಓದಿ: 777 charlie Deleted Scene: ಚಾರ್ಲಿ ಸಿನಿಮಾದಲ್ಲಿ ಡಿಲೀಟ್‌ ಮಾಡಿದ ಸೀನ್‌ ಇದೇ ನೋಡಿ!!

‘ಕಿಂಗ್ ಆಫ್ ಆಲ್ ಮಾಸಸ್’ ಎಂಬ ಈ ವಿಭಿನ್ನ ಪೋಸ್ಟರ್ ಅನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ 29ನೇ ಚಿತ್ರವಿದು. ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುತ್ತಿರುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Vikrant Rona: ಆಪರೇಷನ್‌ ಥಿಯೇಟರ್‌ನಲ್ಲೂ ರಕ್ಕಮ್ಮನದ್ದೇ ಹವಾ!

‘ಗೋಸ್ಟ್’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಮಹೇಂದ್ರ ಸಿಂಹ ಈ ಚಿತ್ರದ ಛಾಯಾಗ್ರಾಹಕರಾಗಿದ್ದಾರೆ. ಆಗಸ್ಟ್ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News