ಎನ್‌ಎಫ್‌ಟಿಯಿಂದ ಕಿಚ್ಚನ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್: ಕಿಚ್ಚ ವರ್ಸ್ ಲಾಂಚ್

ಕಿಚ್ಚ ವರ್ಸ್ ಕಿಚ್ಚನ ಜಗತ್ತಾಗಿದ್ದು ಈ ಲೋಕದಲ್ಲಿ ನೀವು ಕಿಚ್ಚನ ಜೊತೆ ಮಾತನಾಡಬಹುದು. ಅವರ ಜೊತೆ ಸಮಯ ಕಳೆಯಬಹುದು. ಹೀಗೆ ನಿಮ್ಮ ನೆಚ್ಚಿನ ನಟನೊಂದಿಗೆ ಕಾಲ ಕಳೆಯಲು ಕಿಚ್ಚ ವರ್ಸ್ ಅವಕಾಶ ಮಾಡಲಿದ್ದು, ಕಿಚ್ಚನ ಅಭಿಮಾನಿಗಳಿಗೆ ಇದು ತುಂಬಾನೇ ಖುಷಿ ಕೊಡಲಿದೆ. ಕಿಚ್ಚ ವರ್ಸ್ ಲೋಕವನ್ನು ಪ್ರವೇಶಿಸಲು ಎನ್‌ಎಫ್‌ಟಿ ಮೆಂಬರ್ ಶಿಪ್ ಕಾರ್ಡ್ ಪ್ರತಿಯೊಬ್ಬರು ಹೊಂದಿರಬೇಕು ಎಂದು ಕಾಫಿ ಆಂಡ್ ಬನ್ ಇನೋವೇಷನ್ಸ್ ಸಂಸ್ಥೆ ಸ್ಥಾಪಕಿ ಪ್ರಿಯಾ ಸುದೀಪ್ ಕಿಚ್ಚ ವರ್ಸ್ ಬಗ್ಗೆ ತಿಳಿಸಿದ್ದಾರೆ.

Written by - YASHODHA POOJARI | Edited by - Bhavishya Shetty | Last Updated : Jul 18, 2022, 12:47 PM IST
  • ಅಭಿಮಾನಿ ಬಳಗಕ್ಕೆ ಕಿಚ್ಚನ ಅಂಗಳದಿಂದ ಮತ್ತೊಂದು ಸೂಪರ್ ಡೂಪರ್ ಸರ್ಪ್ರೈಸ್
  • ಎನ್‌ಎಫ್‌ಟಿ ಸಂಸ್ಥೆ ‘ಕಿಚ್ಚ ವರ್ಸ್’ ಮೂಲಕ ವಿಕ್ರಾಂತ್ ರೋಣವನ್ನು ಪ್ರಸ್ತುತ ಪಡಿಸಲಿದೆ
  • ನಟ ಕಿಚ್ಚ ಸುದೀಪ್‌ ಕಿಚ್ಚ ವರ್ಸ್ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ
ಎನ್‌ಎಫ್‌ಟಿಯಿಂದ ಕಿಚ್ಚನ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್: ಕಿಚ್ಚ ವರ್ಸ್ ಲಾಂಚ್  title=
NFT

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಇನ್ನೇನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ರಾ ರಾ ರಕ್ಕಮ್ಮ, ಟ್ರೇಲರ್ ವಿಕ್ರಾಂತ್ ರೋಣ ಪ್ರಪಂಚದ ಅದ್ಭುತ ಲೋಕವನ್ನು ಸಿನಿಪ್ರಿಯರಿಗೆ ಪರಿಚಯಿಸಿದೆ. ಜುಲೈ 28ಕ್ಕೆ ಸಿನಿಮಾ ನೋಡಿ ಕಣ್ತುಂಬಿಕೊಳ್ಳೊದೊಂದು ಬಾಕಿ ಎನ್ನುತ್ತಿದ್ದ ಅಭಿಮಾನಿ ಬಳಗಕ್ಕೆ ಕಿಚ್ಚನ ಅಂಗಳದಿಂದ ಮತ್ತೊಂದು ಸೂಪರ್ ಡೂಪರ್ ಸರ್ಪ್ರೈಸ್ ಸಿಕ್ಕಿದೆ. ವಿಕ್ರಾಂತ್ ರೋಣ ಸಿನಿಮಾ ಕೂಡ ಮೆಟಾ ವರ್ಸ್ ಲೋಕಕ್ಕೆ ಕಾಲಿಟ್ಟಿದ್ದು, ಎನ್‌ಎಫ್‌ಟಿ ಸಂಸ್ಥೆ ‘ಕಿಚ್ಚ ವರ್ಸ್’ ಮೂಲಕ ವಿಕ್ರಾಂತ್ ರೋಣವನ್ನು ಪ್ರಸ್ತುತ ಪಡಿಸಲಿದೆ. 

ಇದನ್ನೂ ಓದಿ: ಶ್ರಾವಣದಲ್ಲಿ ರೂಪುಗೊಳ್ಳಲಿರುವ ಗಜ ಕೇಸರಿ ಯೋಗದಿಂದ ಈ ಐದು ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ

ಈ ಕುರಿತು ಎನ್‌ಎಫ್‌ಟಿ ಸಂಸ್ಥೆ ಕಿಚ್ಚ ಸುದೀಪ್‌ ಒಳಗೊಂಡಂತೆ ವಿಕ್ರಾಂತ್ ರೋಣ ತಂಡದೊಂದಿಗೆ ಬಂದು ‘ಕಿಚ್ಚ ವರ್ಸ್’ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ನಿನ್ನೆ ‘ಕಿಚ್ಚ ವರ್ಸ್’ ಅನ್ನು ಎನ್‌ಎಫ್‌ಟಿ ಸಂಸ್ಥೆ ವಿಕ್ರಾಂತ್ ರೋಣ ಚಿತ್ರ ತಂಡದೊಂದಿಗೆ ಲಾಂಚ್ ಮಾಡಿದೆ. ಎನ್‌ಎಫ್‌ಟಿ ಸಂಸ್ಥೆ ಸೃಷ್ಟಿಸಿರುವ ಕಿಚ್ಚ ವರ್ಸ್ ಜಗತ್ತು ಕಿಚ್ಚನಿಗೂ ಸಖತ್ ಸರ್ಪ್ರೈಸ್ ಆಗಿದ್ದು "ಮೊದಲ ಬಾರಿ ಇದರ ಬಗ್ಗೆ ಕೇಳಿದಾಗ ಹೇಗಿರುತ್ತೋ ಎಂಬ ಕಾಲ್ಪನಿಕ ಲೋಕದಲ್ಲಿದ್ದೆ. ನನಗೂ ಇದು ಅರ್ಥವಾಗಿರಲಿಲ್ಲ. ಆದ್ರೆ ಅದನ್ನು ಸ್ವತಃ ನಾನೇ ನೋಡಿದಾಗ, ಅನುಭವಿಸಿದಾಗ ತುಂಬಾನೇ ಖುಷಿ ಪಟ್ಟೆ. ತುಂಬಾನೇ ಅದ್ಭುತ ಕೆಲಸವನ್ನು ಈ ತಂಡ ಮಾಡಿದೆ. ಖಂಡಿತ ಎಲ್ಲರಿಗೂ ಇಂತಹದ್ದೇ ಒಂದು ಒಳ್ಳೆಯ ಅನುಭವವನ್ನು ಇದು ನೀಡಲಿದೆ ಎಂಬ ಭರವಸೆ ಇದೆ" ಎಂದು ನಟ ಕಿಚ್ಚ ಸುದೀಪ ಕಿಚ್ಚ ವರ್ಸ್ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. 

ಕಿಚ್ಚ ವರ್ಸ್ ಕಿಚ್ಚನ ಜಗತ್ತಾಗಿದ್ದು ಈ ಲೋಕದಲ್ಲಿ ನೀವು ಕಿಚ್ಚನ ಜೊತೆ ಮಾತನಾಡಬಹುದು. ಅವರ ಜೊತೆ ಸಮಯ ಕಳೆಯಬಹುದು. ಹೀಗೆ ನಿಮ್ಮ ನೆಚ್ಚಿನ ನಟನೊಂದಿಗೆ ಕಾಲ ಕಳೆಯಲು ಕಿಚ್ಚ ವರ್ಸ್ ಅವಕಾಶ ಮಾಡಲಿದ್ದು, ಕಿಚ್ಚನ ಅಭಿಮಾನಿಗಳಿಗೆ ಇದು ತುಂಬಾನೇ ಖುಷಿ ಕೊಡಲಿದೆ. ಕಿಚ್ಚ ವರ್ಸ್ ಲೋಕವನ್ನು ಪ್ರವೇಶಿಸಲು ಎನ್‌ಎಫ್‌ಟಿ ಮೆಂಬರ್ ಶಿಪ್ ಕಾರ್ಡ್ ಪ್ರತಿಯೊಬ್ಬರು ಹೊಂದಿರಬೇಕು ಎಂದು ಕಾಫಿ ಆಂಡ್ ಬನ್ ಇನೋವೇಷನ್ಸ್ ಸಂಸ್ಥೆ ಸ್ಥಾಪಕಿ ಪ್ರಿಯಾ ಸುದೀಪ್ ಕಿಚ್ಚ ವರ್ಸ್ ಬಗ್ಗೆ ತಿಳಿಸಿದ್ದಾರೆ.

ಜುಲೈ 17 ಅಂದ್ರೆ ನಿನ್ನೆಯಿಂದ ಎನ್‌ಎಫ್‌ಟಿ ಸ್ಕೆಚ್ ಕಾಂಪಿಟೇಶನ್ ಆರಂಭವಾಗಿದ್ದು ವಿಕ್ರಾಂತ್ ರೋಣ ಚಿತ್ರದ ಅದ್ಭುತ ಸ್ಕೆಚ್ ಮಾಡಿದವರಿಗೆ ಎನ್‌ಎಫ್‌ಟಿ ಮೆಂಬರ್ ಶಿಪ್ ನೀಡಲಾಗುವುದು. ಇದಕ್ಕಾಗಿ ನೀವು ಮಾಡಬೇಕಾಗಿರೋದು ಇಷ್ಟೇ. ವಿಕ್ರಾಂತ್ ರೋಣ ಚಿತ್ರದ ಸ್ಕೆಚ್ ಬಿಡಿಸಿ kichchaverse.ioನಲ್ಲಿ ಅಪ್ ಲೋಡ್ ಮಾಡಬೇಕು. ಎನ್‌ಎಫ್‌ಟಿ ಡ್ರಾಪ್ ಕೂಡ ಜುಲೈ 24ರಿಂದ ನಡೆಯಲಿದೆ.  ಹೀಗೆ ಎನ್‌ಎಫ್‌ಟಿಯ ಕಿಚ್ಚ ವರ್ಸ್ ಹಲವಾರು ಇವೆಂಟ್‌ಗಳನ್ನು ಹೊಂದಿದ್ದು ಈ ಮೂಲಕ ತಮ್ಮ ನೆಚ್ಚಿನ ನಟನೊಂದಿಗೆ ಆತ್ಮೀಯವಾಗಿ ಕಾಲ ಕಳೆಯಲು ಅವಕಾಶ ಮಾಡಿಕೊಡಲಿದೆ. 

ಇದನ್ನೂ ಓದಿ: ಟೆಕ್ ದೈತ್ಯರಿಂದ ಸುದ್ದಿ ಪ್ರಕಾಶಕರಿಗೆ ನ್ಯಾಯಯುತ ಆದಾಯ ಒದಗಿಸಲು ಸರ್ಕಾರದ ಕ್ರಮ!

ಮತ್ತೊಂದು ಹೆಮ್ಮೆಯ ಸಂಗತಿಯಂದ್ರೆ, ಜಗತ್ತಿನಲ್ಲೇ ಮೊದಲ ಬಾರಿ ವಿಕ್ರಾಂತ್ ರೋಣ ಸಿನಿಮಾವನ್ನು ಎನ್‌ಎಫ್‌ಟಿ ಪ್ರೀಮಿಯರ್ ಶೋ ನಡೆಸುತ್ತಿದೆ. ಹೊರ ದೇಶಗಳಲ್ಲಿ ಕನ್ನಡ ಸಿನಿಮಾವನ್ನು ಪ್ರೀಮಿಯರ್ ಶೋ ನಡೆಸುತ್ತಿರೋದು ಇದೇ ಮೊದಲು. ಇದು ವಿಕ್ರಾಂತ್ ರೋಣ ಸಿನಿಮಾದ ಹೆಗ್ಗಳಿಕೆ. ಜುಲೈ 27ಕ್ಕೆ ದುಬೈನಲ್ಲಿ ಈ ಪ್ರೀಮಿಯರ್ ಶೋ ನಡೆಯಲಿದೆ. ಇದೆಲ್ಲದಕ್ಕೂ ಎನ್‌ಎಫ್‌ಟಿ ಮೆಂಬರ್‌ಶಿಪ್ ಅಗತ್ಯವಿದೆ ಎಂದು ಕಾಫಿ ಆಂಡ್ ಬನ್ ಇನೋವೇಷನ್ಸ್ ಸಂಸ್ಥೆ ಸಿಇಓ ಜಾಕೀರ್ ಹುಸೇನ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು, ಸುದೀಪ್ ಪತ್ನಿ ಪ್ರಿಯಾ ಸುದೀಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News