Sandalwood: ಮತ್ತೊಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡ ಕಿಚ್ಚ ಸುದೀಪ್
ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆ ದತ್ತು ತೆಗೆದುಕೊಂಡ ಕಿಚ್ಚ ಸುದೀಪ್.
ಬೆಂಗಳೂರು: ನಟ ಕಿಚ್ಚ ಸುದೀಪ್ ಮತ್ತೊಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡಿದ್ದಾರೆ. ನಟನೆಯ ಜೊತೆ ಜೊತೆಗೆ ಅನೇಕ ಸಾಮಾಜಿಕ ಕಾರ್ಯಗಳಿಗೆ ಕೈಜೋಡಿಸುತ್ತಿರುವ ಕಿಚ್ಚ ಸುದೀಪ್(Kiccha Sudeep) ತಮ್ಮ ತವರು ಜಿಲ್ಲೆ ಶಿವಮೊಗ್ಗದ ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡಿದ್ದಾರೆ.
ವಿಶೇಷವೆಂದರೆ ಈ ಶಾಲೆ(Government School)ಗೆ ಬರೋಬ್ಬರಿ 133 ವರ್ಷಗಳ ಇತಿಹಾಸವಿದೆ. ಕಿಚ್ಚ ಸುದೀಪ್(Kiccha Sudeep)ಅವರ ಈ ಸಾಮಾಜಿಕ ಕಾಳಜಿ(Social Work)ಗೆ ಶಾಲೆಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದತ್ತು ತೆಗೆದುಕೊಂಡಿರುವ ಶಾಲೆಗೆ ಸುದೀಪ್ ಅವರು ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಸಹಕಾರಿಯಾಗುವಂತೆ ನಟ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಲಿದ್ದಾರೆ. ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸ್ಯಾಂಡಲ್ ವುಡ್ ನಟ ಕೊಡುಗೆ ನೀಡುತ್ತಿರುವುದು ಅಲ್ಲಿನ ವಿದ್ಯಾರ್ಥಿಗಳಿಗೆ ಖುಷಿ ತಂದಿದೆ.
ಇದನ್ನೂ ಓದಿ: Jeh Ali Khans first photo : ಹೀಗಿದೆ ನೋಡಿ ಕರಿನಾ ಕಪೂರ್ ಖಾನ್ ಎರಡನೇ ಮಗು
ಸುದೀಪ್ ಅವರು ಸರ್ಕಾರಿ ಶಾಲೆಯನ್ನು ದತ್ತು(School adoption)ತೆಗೆದುಕೊಳ್ಳುತ್ತಿರುವುದು ಇದೇ ಮೊದಲ ಬಾರಿಯಲ್ಲ. ಕಳೆದ ವರ್ಷದ ಜುಲೈನಲ್ಲಿ ಅವರು ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡಿದ್ದರು. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಆ ಶಾಲೆಗೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ವಿದ್ಯಾರ್ಥಿಗಳ ಓದಿಗೆ ಸಹಕಾರಿಯಾಗುವ ಎಲ್ಲ ಸೌಲಭ್ಯಗಳನ್ನು ಕಿಚ್ಚ ಸುದೀಪ್ ಒದಗಿಸುತ್ತಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ (Vikrant Rona)ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಚಿತ್ರತಂಡ ಪೂರ್ಣಗೊಳಿಸಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರದ ವಿಶೇಷ ಹಾಡಿಗೆ ಕಿಚ್ಚ ಸುದೀಪ್ ಜೊತೆ ಹೆಜ್ಜೆ ಹಾಕಿದ್ದರು. ಈಗಾಗಲೇ ಟೀಸರ್, ಪೋಸ್ಟರ್ ಗಳಿಂದ ಸಖತ್ ಸೌಂಡ್ ಮಾಡುತ್ತಿರುವ ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಇದನ್ನೂ ಓದಿ: ಸಾಕ್ಷ್ಯನಾಶ ಹಿನ್ನೆಲೆ ನಟಿ ಶಿಲ್ಪಾ ಶೆಟ್ಟಿ ಪತಿ ಬಂಧನ: ಹೈಕೋರ್ಟ್ ಗೆ ಮುಂಬೈ ಪೊಲೀಸರ ಹೇಳಿಕೆ
ದುಬೈನ ಬುರ್ಜ್ ಖಲೀಫಾದಲ್ಲಿ ‘ವಿಕ್ರಾಂತ್ ರೋಣ’ (Vikrant Rona)ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿತ್ತು. 3D ರೂಪದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಹೈದರಾಬಾದ್, ಬೆಂಗಳೂರು, ಕೇರಳ ಸೇರಿದಂತೆ ಅನೇಕ ಸ್ಥಳಗಳಲ್ಲಿ ಸಿನಿಮಾದ ಶೂಟಿಂಗ್ ನಡೆದಿದೆ. ಕಿಚ್ಚ ಸುದೀಪ್, ಜಾಕ್ವೆಲಿನ್ ಅಲ್ಲದೆ ನಿರೂಪ್ ಭಂಡಾರಿ, ನೀತಾ ಅಶೋಕ್ ಮುಂತಾದವರು ಅಭಿನಯಿಸಿದ್ದಾರೆ. ಶಾಲಿನಿ ಜ್ಯಾಕ್ ಮಂಜು ಮತ್ತು ಅಲಂಕಾರ್ ಪಾಂಡಿಯನ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಮಾಹಿತಿಗಳ ಪ್ರಕಾರ ಆಗಸ್ಟ್ ತಿಂಗಳಿನಲ್ಲಿ ‘ವಿಕ್ರಾಂತ್ ರೋಣ’ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ