Vikrant Rona Making: ಕಿಚ್ಚ ಸುದೀಪ ಅಭಿನಯದ `ವಿಕ್ರಾಂತ್ ರೋಣ` ಮೇಕಿಂಗ್ ವಿಡಿಯೋ ಹೈಲೈಟ್ಸ್
Vikrant Rona: ಇನ್ನೇನೂ ಕೆಲವೇ ದಿನಗಳಲ್ಲಿ ವಿಕ್ರಾಂತ್ ರೋಣ ಬೆಳ್ಳಿ ಪರದೆ ಮೇಲೆ ಅಬ್ಬರಿಸಲಿದೆ. ಈ ಹಿನ್ನೆಲೆ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಬಿಡುಗಡೆಗೆ ಅಭಿಮಾನಿಗಳು ಕಾತುರರಾಗಿದ್ದಾರೆ.
ಇನ್ನೇನೂ ಕೆಲವೇ ದಿನಗಳಲ್ಲಿ ವಿಕ್ರಾಂತ್ ರೋಣ ಬೆಳ್ಳಿ ಪರದೆ ಮೇಲೆ ಅಬ್ಬರಿಸಲಿದೆ. ಈ ಹಿನ್ನೆಲೆ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಬಿಡುಗಡೆಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಸದ್ಯ, ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ವಿಶ್ವಾದ್ಯಂತ ರಿಲೀಸ್ ಆಗಲಿರುವ ಈ ಸಿನಿಮಾದ ಹಾಡುಗಳು ಎಲ್ಲೆಡೆ ಟ್ರೆಂಡ್ ಕ್ರಿಯೇಟ್ ಮಾಡಿದೆ.
ಇದನ್ನೂ ಓದಿ: ಲಂಡನ್‌ನ ಭವ್ಯ ಬಂಗಲೆಯಲ್ಲಿ ಸುಶ್ಮಿತಾ ಸೇನ್ ಜೊತೆ ವಾಸ! ಲಲಿತ್ ಮೋದಿ ಒಟ್ಟು ಆಸ್ತಿ ಮೌಲ್ಯ ಎಷ್ಟು?
ಫೇಸ್‌ಬುಕ್, ಶೇರ್‌ಚಾಟ್, ಇನ್‌ಸ್ಟಾಗ್ರಾಂ ಹೀಗೆ ಯಾವ ಸೋಷಿಯಲ್ ಮೀಡಿಯಾ ತೆರೆದರು ವಿಕ್ರಾಂತ್ ರೋಣನದ್ದೇ ಹವಾ. ಇದೀಗ ವಿಕ್ರಾಂತ್ ರೋಣಾ ಮೇಕಿಂಗ್ ಗ್ಲಿಂಪ್ಸ್ ಇರುವ ವಿಡಿಯೋವನ್ನು ಸುದೀಪ್ ಹಂಚಿಕೊಂಡಿದ್ದಾರೆ.
ಭುರ್ಜ್ ಖಲೀಫಾದಿಂದ ಶುರುವಾದ ವಿಕ್ರಾಂತ್ ರೋಣನ ಹವಾ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಈಗಾಗಲೇ ರಿಲೀಸ್ ಆದ ಹಾಡು, ಟ್ರೈಲರ್ ಮೂಲಕ ಸಖತ್ ಸದ್ದು ಮಾಡುತ್ತಿದೆ. ಬಾಲಿವುಡ್, ಟಾಲಿವುಡ್ ಸೇರಿದಂತೆ ಭಾರತ ಸಿನಿರಂಗದ ಖ್ಯಾತ ನಾಮರು ವಿಕ್ರಾಂತ್ ರೋಣನಿಗೆ ಸಾಥ್ ನೀಡಿದ್ದಾರೆ.
3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಶಾಲಿನಿ ಆರ್ಟ್ಸ್ ಬ್ಯಾನರ್ ಅಡಿ ಜಾಕ್ ಮಂಜು ಚಿತ್ರ ನಿರ್ಮಾಣ ಮಾಡಿದ್ದು, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಪಕರಾಗಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾ ಮೂಲಕ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಡುತ್ತಿದ್ದಾರೆ. ರಕೇಲ್ ಡಿಕೋಸ್ಟ ಉರ್ಫ್ ಗಡಂಗ್ ರಕ್ಕಮ್ಮನಾಗಿ ತೆರೆ ಮೇಲೆ ಅವರು ಕಾಣಿಸಿಕೊಂಡಿದ್ದಾರೆ. ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: Vikrant Rona: ರಾ ರಾ ರಕ್ಕಮ್ಮ ಹುಕ್ ಸ್ಟೆಪ್ ಹಿಂದಿನ ಮಾಸ್ಟರ್ ಇವರೇ ನೋಡಿ..
ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಸುದೀಪ್ ಅವರೇ ಡಬ್ ಮಾಡಿದ್ದಾರೆ. ಇಷ್ಟೆಲ್ಲ ವಿಶೇಷತೆ ಹೊಂದಿರುವ ಈ ಸಿನಿಮಾ ಸದ್ಯ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಸಹ ಸ್ಥಾನ ಪಡೆದುಕೊಂಡಿದೆ. ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ರಿಲೀಸ್ ಆಗಲು ಸಿದ್ಧವಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.