ಕಿರಣ್ ರಾಜ್ ಅಭಿನಯದ ಭರ್ಜರಿ ಗಂಡು ಚಿತ್ರದ ಹೊಸ ಹಾಡು ರಿಲೀಸ್‌

Kiran Raj Movie: ಖ್ಯಾತ ಗಾಯಕ ರಘು ದೀಕ್ಷಿತ್ ಈ ಹಾಡನ್ನು ಹಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.  

Written by - YASHODHA POOJARI | Last Updated : Mar 25, 2024, 03:58 PM IST
  • ಕಿರಣ್ ರಾಜ್ ಅಭಿನಯದ ಭರ್ಜರಿ ಗಂಡು ಚಿತ್ರದ ಹಾಡು ರಿಲೀಸ್‌
  • ಬಿಡುಗಡೆಯಾಯಿತು ಮತ್ತೊಂದು ಸುಮಧುರ ಹಾಡು
  • ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್
ಕಿರಣ್ ರಾಜ್ ಅಭಿನಯದ ಭರ್ಜರಿ ಗಂಡು ಚಿತ್ರದ ಹೊಸ ಹಾಡು ರಿಲೀಸ್‌  title=

Kiran Raj starrer Bharjari Gandu Movie: ಪ್ರಸಿದ್ಧ ನಿರ್ದೇಶನದ ಈ ಚಿತ್ರಕ್ಕಾಗಿ ಡಾ.ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ʻಹುಯ್ಯೋ ಹುಯ್ಯೋ ಮಳೆರಾಯʼ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ಗಾಯಕ ರಘು ದೀಕ್ಷಿತ್ ಈ ಹಾಡನ್ನು ಹಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಎಲ್ಲಾ ಕಡೆ ಬಿಸಿಲು ಹೆಚ್ಚಾಗಿದ್ದು‌, ನೀರಿನ ಬವಣೆ ಹೆಚ್ಚಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ಬವಣೆ ದೂರವಾಗಲಿ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಸೆಟ್ಟೇರಿತು ‘ಕರ್ನಾಟಕ Love’s ಕೇರಳ’.. ಹೀರೋ ಆದ ಬಸ್ ಮೆಕಾನಿಕಲ್.!

ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ "ಭರ್ಜರಿ ಗಂಡು" ಏಪ್ರಿಲ್ 5 ಕ್ಕೆ ಚಿತ್ರಮಂದಿರಗಳಿಗೆ ಬರಲಿದ್ದಾನೆ. ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ಗುಮ್ಮಿನೇನಿ‌ ವಿಜಯ್ ಸಂಗೀತ ಸಂಯೋಜನೆ,  ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ‌ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.

ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್ ನಾಗೇಶ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಪೃಥ್ವಿರಾಜ್‌ ಸುಕುಮಾರನ್ ಅಭಿನಯದ ನೈಜಕಥೆ ಆಧಾರಿತ 'ಆಡು ಜೀವಿತಂ' ರಿಲೀಸ್‌ ಡೇಟ್‌ ಫಿಕ್ಸ್‌ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News