Kiran Raj starrer Bharjari Gandu Movie: ಪ್ರಸಿದ್ಧ ನಿರ್ದೇಶನದ ಈ ಚಿತ್ರಕ್ಕಾಗಿ ಡಾ.ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ʻಹುಯ್ಯೋ ಹುಯ್ಯೋ ಮಳೆರಾಯʼ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ಗಾಯಕ ರಘು ದೀಕ್ಷಿತ್ ಈ ಹಾಡನ್ನು ಹಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.


COMMERCIAL BREAK
SCROLL TO CONTINUE READING

ಎಲ್ಲಾ ಕಡೆ ಬಿಸಿಲು ಹೆಚ್ಚಾಗಿದ್ದು‌, ನೀರಿನ ಬವಣೆ ಹೆಚ್ಚಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ಬವಣೆ ದೂರವಾಗಲಿ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ.


ಇದನ್ನೂ ಓದಿ: ಸೆಟ್ಟೇರಿತು ‘ಕರ್ನಾಟಕ Love’s ಕೇರಳ’.. ಹೀರೋ ಆದ ಬಸ್ ಮೆಕಾನಿಕಲ್.!


ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ "ಭರ್ಜರಿ ಗಂಡು" ಏಪ್ರಿಲ್ 5 ಕ್ಕೆ ಚಿತ್ರಮಂದಿರಗಳಿಗೆ ಬರಲಿದ್ದಾನೆ. ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ಗುಮ್ಮಿನೇನಿ‌ ವಿಜಯ್ ಸಂಗೀತ ಸಂಯೋಜನೆ,  ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ‌ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.


ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್ ನಾಗೇಶ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


ಇದನ್ನೂ ಓದಿ: ಪೃಥ್ವಿರಾಜ್‌ ಸುಕುಮಾರನ್ ಅಭಿನಯದ ನೈಜಕಥೆ ಆಧಾರಿತ 'ಆಡು ಜೀವಿತಂ' ರಿಲೀಸ್‌ ಡೇಟ್‌ ಫಿಕ್ಸ್‌ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.