Pradeep Raj: `ಕಿರಾತಕ` ಸಿನಿಮಾದಿಂದ ಖ್ಯಾತಿ ಪಡೆದಿದ್ದ ನಿರ್ದೇಶಕ ಪ್ರದೀಪ್ ರಾಜ್ ಇನ್ನಿಲ್ಲ
ಹಲವು ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲ್ತಿದ್ದ ಪ್ರದೀಪ್ ರಾಜ್ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಯಶ್ ಅಭಿನಯದ ಕಿರಾತಕ ಸಿನಿಮಾದಿಂದ ಖ್ಯಾತಿ ಪಡೆದಿದ್ದ ನಿರ್ದೇಶಕ ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಹಲವು ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲ್ತಿದ್ದ ಪ್ರದೀಪ್ ರಾಜ್ ಅವರಿಗೆ ಕೇವಲ 46 ವರ್ಷ.
ನಿರ್ದೇಶಕ ಪ್ರದೀಪ್ ರಾಜ್ (Director Pradeep Raj) ಕಳೆದ 15 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದರು. ಅವರಿಗೆ ಕಳೆದ ಆರು ತಿಂಗಳ ಹಿಂದಷ್ಟೇ ಕರೋನಾ ಸೋಂಕು ತಗುಲಿತ್ತು. ಕರೋನಾದಿಂದ ಚೇತರಿಸಿಕೊಂಡ ಬಳಿಕ ಅವರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿದ್ದವು ಎಂದು ಅವರ ಸಹೋದರ ಪ್ರಶಾಂತ್ ರಾಜ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ- WHO: ಆರೋಗ್ಯವಂತ ಮಕ್ಕಳಿಗೆ ಕರೋನಾ ಬೂಸ್ಟರ್ ಡೋಸ್ ಬೇಕೇ? WHO ಮುಖ್ಯ ವಿಜ್ಞಾನಿ ಹೇಳಿದ್ದೇನು?
ಪ್ರದೀಪ್ ರಾಜ್ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಇದನು ಮಧ್ಯಾಹ್ನ ಪಾಂಡೀಚೆರಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ- Covid-19 Guidelines : ಬೆಂಗಳೂರಿಗರೇ ಎಚ್ಚರ..! ಕೋವಿಡ್ ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್!
ಪ್ರದೀಪ್ ರಾಜ್ ಸ್ಯಾಂಡಲ್‌ವುಡ್‌ನ ಹಲವು ಚಿತ್ರಗಳಲ್ಲಿ ಕೆಲಸ ಮಾಡಿದ್ದರೂ ಯಶ್ (Yash) ಅಭಿನಯದ ಕಿರಾತಕ ಸಿನಿಮಾ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತ್ತು. ಸದ್ಯ ಕಿರಾತಕ -2 ಸಿನಿಮಾ ರಿಲೀಸ್ ಗೆ ರೆಡಿ ಆಗಿದೆ. ಇದಲ್ಲದೆ, ಪ್ರದೀಪ್ ರಾಜ್ ಅವರು ಗಣೇಶ್ ನಟನೆಯ 420, ದುನಿಯಾ ವಿಜಯ್ ನಟನೆಯ ರಜನಿಕಾಂತ್ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.