KL Rahul: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಡಿಸೆಂಬರ್ 26ರಂದು ಆರಂಭವಾಗಲಿರುವ ಬಹು ನಿರೀಕ್ಷಿತ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಈಗಾಗಲೆ ಆಭ್ಯಾಸವನ್ನು ಆರಂಭಿಸಿದ್ದು, ಪ್ರಾಕ್ಟಿಸ್‌ ವೇಳೆ ಭಾರತ ತಂಡದ ಸ್ಟಾರ್‌ ಬ್ಯಾಟರ್‌ ಗಂಭೀರವಾಗಿ ಗಾಯಗೊಂಡಿದ್ದು, ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್‌ ಎದುರಾಗಿದೆ.


COMMERCIAL BREAK
SCROLL TO CONTINUE READING

ಮೆಲ್ಬೋರ್ನ್‌ನಲ್ಲಿ ನಡೆದ ನೆಟ್ ಸೆಷನ್‌ನಲ್ಲಿ ಕೆಎಲ್ ರಾಹುಲ್ ಅವರ ಬಲಗೈಗೆ ಗಾಯವಾಗಿದ್ದು, ವೈರಲ್‌ ಆಘುತ್ತಿರುವ ವಿಡಿಯೋದಲ್ಲಿ ಟೀಂ ಇಂಡಿಯಾ ಆಟಗಾರನಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿರುವುದು ಕಂಡು ಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ವಿಡಿಯೋ ನೋಡಿದ ನಂತರ ಅಭಿಮಾನಿಗಳು ಶಾಕ್‌ ಆಗಿದ್ದಾರೆ. ವರದಿಗಳ ಪ್ರಕಾರ, ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ ಕೆ ಎಲ್‌ ರಾಹುಲ್‌ ಅವರಕೈ ಬೆರಳುಗಳಿಗೆ ಗಾಯವಾಗಿದೆ, ಈ ಕುರಿತು ಅಧಿಕೃತ ಮಾಹಿತಿ ದೊರೆತಿಲ್ಲವಾದರೂ, ವಿಡಿಯೋ ನೋಡುತ್ತಿದ್ದರೆ, ಸ್ಟಾರ್‌ ಬ್ಯಾಟರ್‌ ಪಂದ್ಯದಲ್ಲಿ ಮುಂದುವರೆಯುತ್ತಾರಾ ಅಥವಾ ಇಲ್ವಾ ಎಂಬುದರ ಕುರಿತು ಅನುಮಾನ ಶುರುವಾಗಿದೆ. 


ಟೀಂ ಇಂಡಿಯಾದ ಬೆಸ್ಟ್‌ ಬ್ಯಾಟರ್‌ಗಳಲ್ಲಿ ಕೆ ಎಲ್‌ ರಾಹುಲ್‌ ಕೂಡ ಒಬ್ಬರು. ಆರು ಇನ್ನಿಂಗ್ಸ್‌ನಲ್ಲಿ ಕೆ ಎಲ್‌ ರಾಹುಲ್‌ ಅವರು ಬರೋಬ್ಬರು 235 ರನ್‌ ಗಳಿಸಿದ್ದಾರೆ. ಈ ಮೂಲಕ ಸರಣಿಯಲ್ಲಿ ಅತೀ ಹೆಚ್ಚು ರನ್‌ ಗಳಿಸಿರುವ ಆಟಗಾರ ಎನಿಸಿಕೊಂಡಿದ್ದು, ಇದೀಗ ಇವರು ಗಾಯದ ಕಾರಣದಿಂದ ಟೀಂ ಇಂಡಿಯಾ ಪ್ಲೇಯಿಂಗ್‌ ಇಲೆವೆನ್‌ನಿಂದ ಹೊರ ಬೀಳುತ್ತಾರಾ ಎಂಬ ಅನುಮಾನ ಶುರುವಾಗಿದೆ, ಇದೇ ರೀತಿ ಅವರು ತಂಡದಿಂದ ಹೊರಬಿದ್ದಿದ್ದೆ ಆದಲ್ಲಿ, ಟೀಂ ಇಂಡಿಯಾ ಹಿನ್ನಡೆ ಅನುಭವಿಸಲಿದೆ ಎನ್ನುವ ಬಗ್ಗೆ ಚರ್ಚೆಗಳು ಉಂಟಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.