ಜಸ್ಟ್ ಪಾಸ್ ಆಗಲು ಹೊರಟ ನಟ ಶ್ರೀ - ತರ್ಲೆ ವಿಲೇಜ್ ಖ್ಯಾತಿಯ ಕೆ.ಎಂ ರಘು ನಿರ್ದೇಶನದ ನೂತನ ಚಿತ್ರ

ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ 'ಇರುವುದೆಲ್ಲವ ಬಿಟ್ಟು', 'ಗಜಾನನ ಗ್ಯಾಂಗ್' ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ.   

Written by - YASHODHA POOJARI | Edited by - Ranjitha R K | Last Updated : Dec 8, 2022, 01:39 PM IST
  • ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ಕೆ.ಎಂ.ರಘು ರೆಡಿ
  • ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ.
  • ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ.
ಜಸ್ಟ್ ಪಾಸ್  ಆಗಲು ಹೊರಟ ನಟ ಶ್ರೀ - ತರ್ಲೆ ವಿಲೇಜ್ ಖ್ಯಾತಿಯ ಕೆ.ಎಂ ರಘು ನಿರ್ದೇಶನದ ನೂತನ ಚಿತ್ರ title=

ಬೆಂಗಳೂರು : ‘ತರ್ಲೆ ವಿಲೇಜ್’,‘ಪರಸಂಗ’, ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೆಣೆದು ನಿರ್ದೇಶನಕ್ಕೆ ಕೆ.ಎಂ ರಘು ಸಜ್ಜಾಗಿದ್ದಾರೆ. ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ.

ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ 'ಇರುವುದೆಲ್ಲವ ಬಿಟ್ಟು', 'ಗಜಾನನ ಗ್ಯಾಂಗ್' ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿ  ಯಾರು ಎನ್ನುವುದು ಇನ್ನೂ ಫೈನಲ್ ಆಗಿಲ್ಲ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ. 

ಇದನ್ನೂ ಓದಿ : Namra Qadri Videos: ಬಂಧನದ ಬಳಿಕ ಭಾರಿ ಟ್ರೆಂಡ್ ಆದ ನಮ್ರಾ ಕಾದಿರ್ ಹಾಟ್ ವಿಡಿಯೋಗಳು, ನೋಡಿದ್ರೆ ಶಾಕ್ ಆಗ್ತಿರಾ

ಕೆ.ಎಂ ರಘು. ನಿರ್ದೇಶನದ 'ದೊಡ್ಡಹಟ್ಟಿ ಬೋರೇಗೌಡ' ಸಿನಿಮಾ ಈ ಬಾರಿಯ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ ಮೊದಲ ಬಾರಿಗೆ ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಶೇರ್ ಮಾಡಿಕೊಳ್ಳಲಿದೆ ಚಿತ್ರತಂಡ. 

ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ 'ಜಸ್ಟ್ ಪಾಸ್' ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ ಮೊದಲಾದವರ ತಾರಾಬಳಗ ಸಿನಿಮಾದಲ್ಲಿದೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ.

ಇದನ್ನೂ ಓದಿ : Alia Bhatt: "ನಾನು ರಣಬೀರ್ ಹಾಸಿಗೆಯ ಮೇಲೆ..." ಬೆಡ್‌ರೂಮ್‌ ರಹಸ್ಯ ಬಿಚ್ಚಿಟ್ಟ ಆಲಿಯಾ!

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News