ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯಿಸುತ್ತಿರುವ ಬಹುನಿರೀಕ್ಷಿತ ಚಿತ್ರ 'ದರ್ಬಾರ್' ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.


COMMERCIAL BREAK
SCROLL TO CONTINUE READING

ರಜಿನಿ ನಟನೆಯ 167 ನೇ ತಮಿಳು ಸಿನಿಮಾ ಇದಾಗಿದ್ದು, ಇದೇ ಮೊದಲ ಬಾರಿಗೆ ಖಡಕ್ ಐಪಿಎಸ್ ಅಧಿಕಾರಿ ಹಾಗೂ ಸಮಾಜ ಸೇವಕನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಚಿತ್ರದ ನಿರ್ದೇಶಕ ಮುರುಗದಾಸ್ ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ



LYCA Productions ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಗೆ ನಯನತಾರ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಶೂಟಿಂಗ್ ಏಪ್ರಿಲ್ 10 ರಿಂದ ಶುರುವಾಗಲಿದ್ದು 2020ರ ಸಂಕ್ರಾಂತಿಗೆ ತೆರೆ ಕಾಣಲಿದೆ.