ʼಕೋಣʼದೊಂದಿಗೆ ಪ್ಯಾನ್‌ ಇಂಡಿಯಾ ಸುತ್ತಲು ನಟ ಕೋಮಲ್ ರೆಡಿ..!

Komal kumar : ʼ8 MMʼ ಚಿತ್ರವನ್ನು ನಿರ್ದೇಶಿಸಿದ್ದ ಎಸ್ ಹರಿಕೃಷ್ಣ ಅವರು ಕೋಣ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಲಿದ್ದಾರೆ. ಡಾರ್ಕ್ ಕಾಮಿಡಿ ಜಾನರ್ ಇರುವ ಈ ಚಿತ್ರದಲ್ಲಿ ನಾಯಕ ನಟನಾಗಿ ಕೋಮಲ್‌ ಕುಮಾರ್‌ ಕಾಣಿಸಿಕೊಳ್ಳಲಿದ್ದಾರೆ.

Written by - YASHODHA POOJARI | Edited by - Krishna N K | Last Updated : Nov 25, 2023, 08:45 PM IST
  • ಕೋಣʼ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಇತ್ತಿಚೆಗೆ ಅನಾವರಣವಾಯಿತು.
  • ಎಸ್ ಹರಿಕೃಷ್ಣ ಅವರು ಕೋಣ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಲಿದ್ದಾರೆ.
  • ಈ ಚಿತ್ರದಲ್ಲಿ ನಾಯಕ ನಟನಾಗಿ ಕೋಮಲ್‌ ಕುಮಾರ್‌ ಕಾಣಿಸಿಕೊಳ್ಳಲಿದ್ದಾರೆ.
 ʼಕೋಣʼದೊಂದಿಗೆ ಪ್ಯಾನ್‌ ಇಂಡಿಯಾ ಸುತ್ತಲು ನಟ ಕೋಮಲ್ ರೆಡಿ..! title=

Kona kannada movie : ತಮ್ಮ ಸಹಜ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ಅಭಿನಯದ ʼಕೋಣʼ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಇತ್ತಿಚೆಗೆ ಅನಾವರಣವಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ.

ಡಾರ್ಕ್ ಕಾಮಿಡಿ ಜಾನರ್ ಇರುವ ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅವರು ಅಭಿನಯಿಸಿದ್ದ "8 MM" ಚಿತ್ರವನ್ನು ನಿರ್ದೇಶಿಸಿದ್ದ ಎಸ್ ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ  ಚಿತ್ರವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಅಭಿನಯಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ಇದನ್ನೂ ಓದಿ: ಪಿಂಕ್ ಡ್ರೆಸ್‌ನಲ್ಲಿ ಪೂಜಾ ಹಾಟ್‌ನೆಸ್‌ ನೋಡಿ ವಾಹ್‌..! ಎಂದ ಫ್ಯಾನ್ಸ್‌

ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ "ಕೋಣ"(ಪ್ರಾಣಿ) ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಹರಿಕೃಷ್ಣ ಎಸ್ ತಿಳಿಸಿದ್ದಾರೆ. 

ತೇಜ್ವಿನ್ ಪ್ರೊಡಕ್ಷನ್ ಲಾಂಛನದಲ್ಲಿ ವಿನೋದ್ ಕುಮಾರ್ ಹಾಗೂ ಸೆಲ್ವನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಕುಮಾರ್ ಬಿ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಅವರ ಸಂಕಲನವಿರುವ ಈ ಚಿತ್ರಕ್ಕಿದೆ. ಸಂಜಯ್ ಹಾಗೂ ಉತ್ತಮ್ ಸ್ವರೂಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News