Kona kannada movie : ತಮ್ಮ ಸಹಜ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ಅಭಿನಯದ ʼಕೋಣʼ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಇತ್ತಿಚೆಗೆ ಅನಾವರಣವಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ.


COMMERCIAL BREAK
SCROLL TO CONTINUE READING

ಡಾರ್ಕ್ ಕಾಮಿಡಿ ಜಾನರ್ ಇರುವ ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅವರು ಅಭಿನಯಿಸಿದ್ದ "8 MM" ಚಿತ್ರವನ್ನು ನಿರ್ದೇಶಿಸಿದ್ದ ಎಸ್ ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ  ಚಿತ್ರವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಅಭಿನಯಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 


ಇದನ್ನೂ ಓದಿ: ಪಿಂಕ್ ಡ್ರೆಸ್‌ನಲ್ಲಿ ಪೂಜಾ ಹಾಟ್‌ನೆಸ್‌ ನೋಡಿ ವಾಹ್‌..! ಎಂದ ಫ್ಯಾನ್ಸ್‌


ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ "ಕೋಣ"(ಪ್ರಾಣಿ) ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಹರಿಕೃಷ್ಣ ಎಸ್ ತಿಳಿಸಿದ್ದಾರೆ. 


ತೇಜ್ವಿನ್ ಪ್ರೊಡಕ್ಷನ್ ಲಾಂಛನದಲ್ಲಿ ವಿನೋದ್ ಕುಮಾರ್ ಹಾಗೂ ಸೆಲ್ವನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಕುಮಾರ್ ಬಿ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಅವರ ಸಂಕಲನವಿರುವ ಈ ಚಿತ್ರಕ್ಕಿದೆ. ಸಂಜಯ್ ಹಾಗೂ ಉತ್ತಮ್ ಸ್ವರೂಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.