Koti Cinema: ಡಾಲಿ‌ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಮೊದಲ‌ ಟಿಕೆಟ್ ಅನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀ-ರಿಲೀಸ್ ಟಿವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ನೆರೆದಿದ್ದ ಜನರ ರಂಜಿಸಿದರು.


COMMERCIAL BREAK
SCROLL TO CONTINUE READING

ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ಟಿಕೆಟ್. ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದ ಕಿಚ್ಚ ನಾಯಕ ನಟ ಧನಂಜಯ್ ಮತ್ತು ನಿರ್ದೇಶಕ  ಪರಮ್ ಅವರಿಗೆ ಯಶಸ್ಸು‌ ಸಿಗಲಿ ಎಂದು ಶುಭ ಕೋರಿದರು.


ಇದನ್ನೂ ಓದಿ: ಟೀಂ ಇಂಡಿಯಾದ ದಿಗ್ಗಜ ಸುರೇಶ್ ರೈನಾ ಪತ್ನಿ ಯಾರು ಗೊತ್ತಾ? ಈಕೆ ಕೋಚ್ ಒಬ್ಬರ ಮಗಳು... ದೇಶದ ಪ್ರಖ್ಯಾತ ಉದ್ಯಮಿಯೂ ಹೌದು


ಈಗಾಗಲೇ 'ಕೋಟಿ' ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ರಂದು ಬಿಡುಗಡೆಯಾಗಲಿದೆ.


ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ 'ಕೋಟಿ' ಗೆಲ್ಲುವ ಭರವಸೆಯಾಗಿ ಕಂಡಿದೆ.


ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.


ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆ ಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌’ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಾಮನ್.


ಇದನ್ನೂ ಓದಿ: ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?


ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.