ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರಿಂದ ಲೋಕಾರ್ಪಣೆಯಾಯ್ತು ‘ಬ್ಯಾಟೆಮರ’ ಪುಸ್ತಕ
ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರಿಂದ ಲೋಕಾರ್ಪಣೆಯಾಯ್ತು ‘ಬ್ಯಾಟೆಮರ’ ಪುಸ್ತಕ..ಎ ಎಸ್ ಜಿ ಪುಸ್ತಕ ಪ್ರೀತಿಗೆ ಜೊತೆಯಾದ ನಟರಾಜ್ ಬೂದಾಳ್ -ಜಯತೀರ್ಥ
ಬರಹಗಾರನಾಗಿ ಗುರುತಿಸಿಕೊಂಡಿರುವ ಎ ಎಸ್ ಜಿ ಮೊದಲ ಕಥಾಸಂಕಲನವನ್ನು ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕಲಾಗ್ರಾಮದ ಸಂಭಾಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನಟರಾಜ್ ಬುದಾಳ್, ಜಯತೀರ್ಥ ಹಾಗೂ ದಯಾ ಗಂಗನಘಟ್ಟ ವಿಶೇಷ ಅತಿಥಿಗಳಾಗಿ ಆಗಮಿಸಿ ಎ ಎಸ್ ಜಿ ಪುಸ್ತಕ ಪ್ರೀತಿಗೆ ಜೊತೆಯಾದರು.
ಇದನ್ನೂ ಓದಿ: ರಾಜಕಾಲುವೆ, ಕೆರೆ ದುರಸ್ತಿಗೆ ಕೇಂದ್ರದ ಬಳಿ ಅನುದಾನಕ್ಕೆ ಪ್ರಸ್ತಾವನೆ
ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಆಲದಹಳ್ಳಿಯವರಾದ ಎ ಎಸ್ ಜಿ ತನ್ನ ಸುತ್ತಮುತ್ತಲಿನ ಕತೆಗಳನ್ನು ಅಕ್ಷರ ರೂಪಕ್ಕಿಳಿಸಿ ತಯಾರಿಸಿರುವ ಗ್ರಾಮೀಣ ಸೊಗಡಿನ ಕಥೆಗಳ ಗುಚ್ಛವೇ ಬ್ಯಾಟೆಮರ. ಎ ಎಸ್ ಜಿ ಅವರ ಈ ಪುಸ್ತಕ ಪ್ರೀತಿಗೆ ಕಾರಣ ಸಿನಿಮಾರಂಗ..
ಇದನ್ನೂ ಓದಿ: ಬಿಜೆಪಿ ಈಗ ಯಾರಿಗೂ ಬೇಡದ ಅನಾಥ ಶಿಶುವಾಗಿದೆ!: ಕಾಂಗ್ರೆಸ್ ವ್ಯಂಗ್ಯ
ಸಿನಿಮಾವನ್ನೇ ಉಸಿರಾಗಿಸಿಕೊಂಡು ಸಿನಿಮಾಕ್ಕಾಗಿ ತುಡಿಯುತ್ತಿರುವ ಎ ಎಸ್ ಜಿ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುವ ಹುಮ್ಮಸ್ಸಿನಲ್ಲಿದ್ದಾರೆ. ಅದಕ್ಕಾಗಿ ತಮ್ಮಲ್ಲಿನ ಪುಸ್ತಕ ಪ್ರೀತಿಯನ್ನು ತೆರೆದಿಟ್ಟಿದ್ದಾರೆ. ನನ್ನ ಪ್ರಕಾರ, ಸಾಹೇಬ, ತೂತುಮಡಿಕೆ, ಒಂದ್ ಕಥೆ ಹೇಳ್ಲಾ ಸಿನಿಮಾಗಳಿಗೆ ಬರಹಗಾರರಾಗಿ ಕೆಲಸ ಮಾಡಿರುವ ಎ ಎಸ್ ಜಿ ಡೈರೆಕ್ಟರ್ ಕ್ಯಾಪ್ ತೊಡ್ತಿದ್ದಾರೆ. ಈಗಾಗಲೇ ಕಥೆ ಸಿದ್ಧ ಮಾಡಿಕೊಂಡು ನಿರ್ಮಾಪಕರ ಹುಡುಕಾಟದಲ್ಲಿ ತೊಡಗಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಬರಹಗಾರನಾಗಿ ಅನುಭವವಿರುವ ಎ ಎಸ್ ಜಿ ತಮ್ಮ ಇಷ್ಟು ವರ್ಷದ ಪರಿಶ್ರಮವೆಲ್ಲವನ್ನೂ ಹಾಕಿ ಸಿನಿಮಾ ನಿರ್ದೇಶನಕ್ಕಿಳಿಯುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.