ಉತ್ತಮ ಸಂದೇಶ ಹೊತ್ತು ಬರುತ್ತಿದೆ ಕರಾವಳಿ ಭಾಗದ ಮತ್ತೊಂದು ಚಿತ್ರ

"ಕುದ್ರು" ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ಚಿತ್ರದ ಕಥೆ ಸಾಗುತ್ತದೆ. 

Written by - Zee Kannada News Desk | Last Updated : Dec 7, 2022, 05:35 PM IST
  • "ಕುದ್ರು" ದ್ವೀಪದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ಚಿತ್ರದ ಕಥೆ ಸಾಗುತ್ತದೆ.
ಉತ್ತಮ ಸಂದೇಶ ಹೊತ್ತು ಬರುತ್ತಿದೆ ಕರಾವಳಿ ಭಾಗದ ಮತ್ತೊಂದು ಚಿತ್ರ title=
Kudru kannada film

ಬೆಂಗಳೂರು : ಇತ್ತೀಚಿಗೆ ದಕ್ಷಿಣ ಕನ್ನಡದ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. "ಕುದ್ರು" ಸಹ ಅದೇ ಸುಂದರ ಪರಿಸರದಲ್ಲಿ  ನಡೆಯವ ಕಥೆ.  ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಈ ಚಿತ್ರದ ಕುರಿತಾದ ಮಾಹಿತಿ ನೀಡಿದ್ದಾರೆ. 

ಈ ಚಿತ್ರದ ಬಗ್ಗೆ ನಿರ್ಮಾಪಕ ಹಾಗೂ ಕಥೆಗಾರ ಭಾಸ್ಕರ್ ನಾಯಕ್ ಮಾಹಿತಿ ಹಂಚಿಕೊಂಡಿದ್ದಾರೆ. ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ "ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದು, ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ ಎಂದು ಹೇಳಿದ್ದಾರೆ. "ಕುದ್ರು" ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ  ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರದ ಚಿತ್ರೀಕರಣ  ನಡೆದಿದೆ. 

ಇದನ್ನೂ ಓದಿ : Google's Most Searched Movies: 2022ರಲ್ಲಿ ಗೂಗಲ್‌ನಲ್ಲಿ ಅತಿಹೆಚ್ಚು ಹುಡುಕಿದ ಸಿನಿಮಾಗಳು ಇವೇ ನೋಡಿ

ಅಭಿಮಾನ್ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ.   ದೆಹಲಿಯಿಂದ ಬಂದಿರುವ ನಟಿ ನಮ್ರತಾ ಮಲ್ಲ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. 

ಇನ್ನು ಸಿನಿಮಾದ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ "ಕುದ್ರು" ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು  ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು "ಕುದ್ರು" ಚಿತ್ರದಲ್ಲಿ ತೋರಿಸುತ್ತಿದ್ದೇವೆ ಎಂದಿದ್ದಾರೆ. 

 ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೂವರು ನಾಯಕರು ನಮ್ರತಾ ಅವರೊಂದಿಗೆ  ಅಭಿನಯಿಸುತ್ತಿರುವ ಈ ಹಾಡಿನ ಚಿತ್ರೀಕರಣದೊಂದಿಗೆ  ಚಿತ್ರದ ಚಿತ್ರೀಕರಣ ಮುಕ್ತಾಯವಾಗಲಿದೆ.‌ 
 
 ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಹಾಗೂ ದೀಪು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.  ಎಪ್ಪತ್ತಕ್ಕೂ ಅಧಿಕ ಭಾಗದ ಚಿತ್ರೀಕರಣ ರೈನ್ ಎಫೆಕ್ಟ್ ನಲ್ಲೇ ನಡೆದಿರುವುದು ಚಿತ್ರದ ವಿಶೇಷ. 

ಇದನ್ನೂ ಓದಿ : Viral Video: ಬೆಡ್ ರೂಮ್ ಸೀಕ್ರೆಟ್ಸ್ ಕುರಿತು ಕೇಳಿದ ಪ್ರಶ್ನೆಗೆ ಉರ್ಫಿಯ ಶಾಕಿಂಗ್ ಉತ್ತರ

ನಾನು ಈ ಚಿತ್ರದಲ್ಲಿ ತುಂಟ ಮುಸ್ಲಿಂ ಸಮುದಾಯದ ಹುಡುಗಿಯಾಗಿ  ಸಕಲೇಶಪುರದ ಡೈನ ಡಿಸೋಜ, ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನ ಪಾತ್ರಧಾರಿ ಗಾಡ್ವಿನ್ ಹಾಗೂ ಮುಸ್ಲಿಂ ಹುಡುಗನ ಪಾತ್ರದಲ್ಲಿ ಅಭಿನಯಿಸಿರುವ ಫರ್ಹಾನ್ ಹಾಗೂ ಚಿತ್ರದಲ್ಲಿ ಬ್ರಾಹ್ಮಣ ಹುಡುಗಿ ಪಾತ್ರಧಾರಿ ನಾಯಕಿ ಪ್ರಿಯಾ ಹೆಗ್ಡೆ ಕೂಡಾ ತಮ್ಮ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News