ಸಾಲುಮರದ ತಿಮ್ಮಕ್ಕ ಅವರಿಂದ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ  

Kuladalli Keelyavudo movie : ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 

Written by - Krishna N K | Last Updated : Apr 26, 2025, 11:09 AM IST
    • ಮಡೆನೂರ್ ಮನು ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ.
    • ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ‌ ಅವರಿಂದ ಹಾಡು ರಿಲೀಸ್‌
    • ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರ
ಸಾಲುಮರದ ತಿಮ್ಮಕ್ಕ ಅವರಿಂದ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ  

Entertainment News : "ಕುಲದಲ್ಲಿ ಕೀಳ್ಯಾವುದೋ" ಸರ್ವಕಾಲಿಕ ಜನಪ್ರಿಯ ಗೀತೆ.‌ ಇಂತಹ ಜನಪ್ರಿಯ ಗೀತೆಯ ಸಾಲನಿಟ್ಟುಕೊಂಡು ಹಾಡು ಬರೆಯುವುದು ಅಷ್ಟು ಸುಲಭದ ಮಾತಲ್ಲ. ಈ ಹಾಡನ್ನು ಯೋಗರಾಜ್ ಭಟ್ ಅವರ ಹತ್ತಿರ ಬರೆಸುವುದು ಅಂತ ನಿರ್ಧಾರವಾಯಿತು. ಆದರೆ ಅವರು "ಮನದ ಕಡಲು" ಚಿತ್ರದ ಬಿಡುಗಡೆಯ ಬ್ಯುಸಿಯಲ್ಲಿದ್ದರು. ಹಾಗಾಗಿ ಅವರೆ ನನಗೆ ಈ ಹಾಡನ್ನು ಬರೆಯುವಂತೆ ಹೇಳಿದರು. ಆನಂತರ ನಾನೇ ಈ ಹಾಡು ಬರೆದೆ. ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೂ ಈ ಹಾಡು ಇಷ್ಟವಾಯಿತು. ಚೇತನ್ ಅವರು ಹಾಡಿರುವ ಈ ಶೀರ್ಷಿಕೆಗೀತೆಯಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಮಾಪಕರು ಯಾವುದೇ ಕೊರತೆ ಬಾರೆದ ಹಾಗೆ ನಿರ್ಮಾಣ‌ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೇ 23 ರಂದು ನಿಮ್ಮ ಮುಂದೆ ಬರೆಲಿದೆ ಎಂದು ನಿರ್ದೇಶಕ ರಾಮ್ ನಾರಾಯಣ್ ತಿಳಿಸಿದರು.

Add Zee News as a Preferred Source

ಡಾ||ರಾಜಕುಮಾರ್ ಅವರ ಜನ್ಮದಿನದಂದು ಹಿರಿಯರಾದ ಸಾಲುಮರದ ತಿಮ್ಮಕ್ಕ ಅವರು ಈ ಹಾಡನ್ನು ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಅವರಿಗೆ ವಿಶೇಷ ಧನ್ಯವಾದ ಎಂದು ಮಾತನಾಡಿದ ಯೋಗರಾಜ್ ಭಟ್, ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಅವರ ಸೂಪರ್ ಹಿಟ್ ಗೀತೆಯನ್ನೇ ಶೀರ್ಷಿಕೆಯಾಗಿ ಹೊಂದಿರುವ ಈ ಚಿತ್ರದ ಟೈಟಲ್ ಸಾಂಗ್ ಇಂದು ಬಿಡುಗಡೆಯಾಗಿದೆ. ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರು ಏನು ಹೇಳಿದಾರೊ ಅದನ್ನು ಮಾಡಿದ್ದೇನೆ. ಇತ್ತೀಚೆಗೆ ಈ ಚಿತ್ರವನ್ನು ನೋಡಿದಾಗ ಎಲ್ಲಾ ಕಲಾವಿದರ ಅಭಿನಯ ಮನಸ್ಸಿಗೆ ಹತ್ತಿರವಾಯಿತು. ತಂತ್ರಜ್ಞರ ಕಾರ್ಯವೈಖರಿಯೂ ಇಷ್ಟವಾಯಿತು. ರಾಮ್ ನಾರಾಯಣ್ ಅವರ ನಿರ್ದೇಶನದ ಬಗ್ಗೆ ಹೇಳುವ ಹಾಗೆ ಇಲ್ಲ. ಇನ್ನೂ, ಗ್ರಾಮೀಣ ಪ್ರತಿಭೆ ಮಡೆನೂರ್ ಮನು. ಆತನನ್ನು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿರುವ ನಿರ್ಮಾಪಕರಾದ‌ ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ಎಂದರು.

ಇದನ್ನೂ ಓದಿ:ಚಿತ್ರರಂಗಕ್ಕೆ ಬಿಗ್‌ಶಾಕ್‌.. ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್‌ ವೇಳೆ ಅಪಘಾತ! ಸೆಟ್‌ನಲ್ಲೇ ಜೀವ ಬಿಟ್ಟ ಖ್ಯಾತ ಸೆಲೆಬ್ರಿಟಿ..

ಚಿತ್ರ ಆರಂಭದಿಂದಲೂ ನಮಗೆ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರ ಮೇ 23 ತೆರೆಗೆ ಬರಲಿದೆ. ನಿಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಂತೋಷ್ ಕುಮಾರ್.

ಇಂದು ನಮ್ಮ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿದೆ. ಚಿತ್ರ ಮೇ 23 ಬಿಡುಗಡೆಯಾಗಲಿದೆ. ಯೋಗರಾಜ್ ಭಟ್ ಹಾಗೂ ನಿರ್ಮಾಪಕರ ಸಂತೋಷ್ ಕುಮಾರ್ ಅವರಿಗೆ ನಾನು ಆಬಾರಿ.  ನಿರ್ದೇಶಕ ರಾಮ್ ನಾರಾಯಣ್ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಮಡೆನೂರ್ ಮನು. ಅಲ್ಲದೆ, ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಒಂದೊಳ್ಳೆ ಚಿತ್ರದಲ್ಲಿ ಅಭಿನಯಿಸಿರುವ ಖುಷಿಯಿದೆ ಎಂದರು ನಾಯಕಿ ಮೌನ ಗುಡ್ಡಮನೆ.

ಇದನ್ನೂ ಓದಿ:'ಮುಸ್ಲಿಂ ಆಗಿ, ನಾನು ಹಿಂದೂಗಳ..' : ಪಹಲ್ಗಾಮ್ ದಾಳಿಯ ಕುರಿತು ಹಿನಾ ಖಾನ್ ಪೋಸ್ಟ್ ವೈರಲ್‌

ಹಿರಿಯ ನಟರಾದ ಉಮೇಶ್, ಕರಿಸುಬ್ಬು, ಡ್ರ್ಯಾಗನ್‌ ಮಂಜು, ಸೀನ, ಸಂಭಾಷಣೆ ಬರೆದಿರುವ ವಿಜಯಾನಂದ್ ಹಾಗೂ ಹಾಡಿನಲ್ಲಿ ಅಭಿನಯಿಸಿರುವ ನಟಿ ಯಶಸ್ವಿನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡಿದ್ದಾರೆ.  ಮಡೆನೂರ್ ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News