Nayanatara-Vignesh Shivan: ಮದುವೆಯಾದ ನಾಲ್ಕೇ ತಿಂಗಳಲ್ಲಿ ಅವಳಿ ಮಕ್ಕಳ ತಾಯಿಯಾದ ಲೇಡಿ ಸೂಪರ್ ಸ್ಟಾರ್ ನಯನತಾರಾ!

“ನಯನ ಮತ್ತು ನಾನು ಅಮ್ಮ-ಅಪ್ಪ ಆಗಿದ್ದೇವೆ. ನಾವು ಧನ್ಯರು. ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಎಲ್ಲಾ ಪ್ರಾರ್ಥನೆಗಳು, ನಮ್ಮ ಪೂರ್ವಜರ ಆಶೀರ್ವಾದಗಳು ನಮ್ಮನ್ನು ಹಾರೈಸಿವೆ. ನಮ್ಮ ಮಕ್ಕಳಾದ ಉಯಿರ್ ಮತ್ತು ಉಲಗಮ್ ಗೆ ನಿಮ್ಮೆಲ್ಲರ ಆಶೀರ್ವಾದ ಬೇಕು" ಎಂದು ಶಿವನ್ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.

Written by - Bhavishya Shetty | Last Updated : Oct 9, 2022, 10:09 PM IST
    • ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವಳಿ ಗಂಡು ಮಕ್ಕಳ ಪೋಷಕರಾಗಿದ್ದಾರೆ
    • ಇದೇ ವರ್ಷ ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿ
    • ಕಂದಮ್ಮಗಳ ಪಾದಕ್ಕೆ ಮುತ್ತಿಡುವ ಫೋಟೋ ಹಂಚಿಕೊಂಡ ನಿರ್ದೇಶಕ ವಿಘ್ನೇಶ್ ಶಿವನ್
Nayanatara-Vignesh Shivan: ಮದುವೆಯಾದ ನಾಲ್ಕೇ ತಿಂಗಳಲ್ಲಿ ಅವಳಿ ಮಕ್ಕಳ ತಾಯಿಯಾದ ಲೇಡಿ ಸೂಪರ್ ಸ್ಟಾರ್ ನಯನತಾರಾ!  title=
Nayantara

ಇದೇ ವರ್ಷ ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವಳಿ ಗಂಡು ಮಕ್ಕಳ ಪೋಷಕರಾಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಶಿವನ್ ಕಂದಮ್ಮಗಳ ಪಾದಕ್ಕೆ ಮುತ್ತಿಡುವ ಫೋಟೋ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ: ಎಲ್ಲಾ ಸ್ಟಾರ್‌ಗಳಿಂತ ವಿಭಿನ್ನ ಧನುಷ್ಯ-ಐಶ್ವರ್ಯ : ಡೈವೋರ್ಸ್‌ ನಿರ್ಧಾರ ಕೈಬಿಟ್ಟ ದಂಪತಿ..!

“ನಯನ ಮತ್ತು ನಾನು ಅಮ್ಮ-ಅಪ್ಪ ಆಗಿದ್ದೇವೆ. ನಾವು ಧನ್ಯರು. ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಎಲ್ಲಾ ಪ್ರಾರ್ಥನೆಗಳು, ನಮ್ಮ ಪೂರ್ವಜರ ಆಶೀರ್ವಾದಗಳು ನಮ್ಮನ್ನು ಹಾರೈಸಿವೆ. ನಮ್ಮ ಮಕ್ಕಳಾದ ಉಯಿರ್ ಮತ್ತು ಉಲಗಮ್ ಗೆ ನಿಮ್ಮೆಲ್ಲರ ಆಶೀರ್ವಾದ ಬೇಕು" ಎಂದು ಶಿವನ್ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.

 

 

ಉಯಿರ್ ಎಂದರೆ ಜೀವನ ಎಂದರ್ಥ. ಉಲಗಮ್ ಎಂದರೆ ಪ್ರಪಂಚ ಎಂಬ ಅರ್ಥವನ್ನು ನೀಡುತ್ತದೆ.

2022ರ ಜೂನ್ 9 ರಂದು ನಯನತಾರಾ ಮತ್ತು ಶಿವನ್ ತಮಿಳುನಾಡಿನ ಮಹಾಬಲಿಪುರಂನ ಪಂಚತಾರಾ ಹೋಟೆಲ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತಾರಾ ದಂಪತಿ ಮದುವೆಯಾದ ಕೇವಲ ನಾಲ್ಕು ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ಕುಟುಂಬಕ್ಕೆ ಪುಟ್ಟ ಕಂದಮ್ಮಗಳನ್ನು ಬರಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಿಂಹಾಸನದ ಮೇಲೆ ಚಪ್ಪಲಿ, ಮಚ್ಚು..: ಧ್ರುವಾ ಫ್ಯಾನ್ಸ್‌ ತಲೆಗೆ ಹುಳ ಬಿಟ್ಟ ಡೈರೆಕ್ಟರ್‌ ಪ್ರೇಮ್‌..!

ಇವರ ವಿವಾಹದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟ ನಟಿಯರು ಆಗಮಿಸಿ ಶುಭ ಹಾರೈಸಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News