ಸ್ಟಾರ್ ಸುವರ್ಣದಲ್ಲಿ ಬರ್ತಿದೆ ʻಲಕ್ಷ್ಮಿ ಟಿಫನ್ ರೂಮ್ʼ.. ಕನಸುಗಳನ್ನು ಹೊತ್ತ ವರಲಕ್ಷ್ಮಿಯ ಕಥೆ!

Lakshmi Tiffin Room Serial: ವಿಭಿನ್ನ ಕಥೆಯ ವಿನೂತನ ಧಾರಾವಾಹಿ ಕನ್ನಡಿಗರನ್ನು ರಂಜಿಸಲು ಬರುತ್ತಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ "ಲಕ್ಷ್ಮಿ ಟಿಫನ್ ರೂಮ್" ಎಂಬ ಹೊಸ ಧಾರಾವಾಹಿ ಪ್ರಸಾರವಾಗಲಿದೆ. 

Written by - Chetana Devarmani | Last Updated : Feb 29, 2024, 01:49 PM IST
  • ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ
  • ಸ್ಟಾರ್ ಸುವರ್ಣದಲ್ಲಿ ಬರ್ತಿದೆ ʻಲಕ್ಷ್ಮಿ ಟಿಫನ್ ರೂಮ್ʼ
  • ವಿಶೇಷ ಪಾತ್ರದಲ್ಲಿ ಟೆನ್ನಿಸ್ ಕೃಷ್ಣ ಅಭಿನಯಿಸಿರುವ ಸೀರಿಯಲ್‌
ಸ್ಟಾರ್ ಸುವರ್ಣದಲ್ಲಿ ಬರ್ತಿದೆ ʻಲಕ್ಷ್ಮಿ ಟಿಫನ್ ರೂಮ್ʼ.. ಕನಸುಗಳನ್ನು ಹೊತ್ತ ವರಲಕ್ಷ್ಮಿಯ ಕಥೆ! title=

Lakshmi Tiffin Room : ಲಕ್ಷ್ಮಿ ಟಿಫನ್ ರೂಮ್ ಸೀರಿಯಲ್‌ನ ಕಥಾ ನಾಯಕಿ ವರಲಕ್ಷ್ಮಿ ನೇರ ನುಡಿಯ, ನ್ಯಾಯದ ಪರ ನಿಲ್ಲುವ ಗಟ್ಟಿಗಿತ್ತಿ. ಐಎಎಸ್ ಮಾಡಬೇಕೆಂಬ ಕನಸನ್ನು ಕಂಡ ಈ ಯುವತಿ, ಪರಿಸ್ಥಿತಿಯ ಕೈಗೊಂಬೆಯಾಗಿ, ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಸೀಮಿತ ಎಂಬ ಮನಸ್ಥಿತಿಯಿರುವ ಮನೆತನಕ್ಕೆ ಸೊಸೆಯಾಗಿ ಹೋಗುತ್ತಾಳೆ. ಆ ಮನೆಯ ರೀತಿ ರಿವಾಜುಗಳು, ಕಟ್ಟುಪಾಡುಗಳನ್ನು ಭೇಧಿಸಿ ತನ್ನ ಗಂಡನ ಮನೆಯಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಿ, ವರಲಕ್ಷ್ಮಿ ತನ್ನ ಐಎಎಸ್ ಕನಸನ್ನು ನನಸಾಗಿಸುತ್ತಾಳಾ? ಈ ಮೂರು ಗಂಟಿನ ಬಂಧ, ವರು ಕನಸುಗಳನ್ನು ಕಟ್ಟಿಹಾಕುತ್ತಾ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಹೆಣ್ಣೊಬ್ಬಳು ಕೂಡು ಕುಟುಂಬಕ್ಕೆ ಸೊಸೆಯಾಗಿ ಹೋದಾಗ ತನ್ನ ಕನಸನ್ನು ನನಸಾಗಿಸಲು ಏನೆಲ್ಲಾ ಕಷ್ಟಗಳನ್ನು ಎದುರಿಸಬೇಕಾಗುತ್ತೆ ಎಂಬುದನ್ನು ಈ ಕಥೆಯಲ್ಲಿ ಅತ್ಯದ್ಭುತವಾಗಿ ತೋರಿಸಲಾಗಿದೆ.

ಇದನ್ನೂ ಓದಿ: 500 ಸಂಚಿಕೆಗಳನ್ನ‌ ಯಶಸ್ವಿಯಾಗಿ ಪೂರೈಸಿರುವ ʼʼಜನನಿʼʼ ಸೀರಿಯಲ್! 

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ವಿಶೇಷ ಪಾತ್ರದಲ್ಲಿ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೊತೆಗೆ ಸುನೇತ್ರ ಪಂಡಿತ್, ಅನಂತವೇಲು, ವಚನ್, ಮಧುಮಿತಾ, ವಿಜಯಲತಾ, ಕಾವ್ಯ, ಪ್ರೀತಮ್ ಮಕ್ಕಿಹಾಳಿ, ಭಗತ್ ಸೇರಿದಂತೆ ಇನ್ನು ಅನೇಕ ಕಲಾವಿದರು ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.  

ಶುರುವಾಗ್ತಿದೆ ಪ್ರೀತಿ, ಆಕಾಂಕ್ಷೆಯನ್ನೊಳಗೊಂಡ ವರಲಕ್ಷ್ಮಿಯ ಕಥೆ "ಲಕ್ಷ್ಮಿ ಟಿಫನ್ ರೂಮ್" ಇದೇ ಸೋಮವಾರದಿಂದ ಸಂಜೆ 6.30 ಕ್ಕೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

ಇದನ್ನೂ ಓದಿ:  ನಟಿ ಆಶಿಕಾ ರಂಗನಾಥ್ ಮನೆಗೆ ಹೊಸ ಅಳಿಯನ ಆಗಮನ.! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News