Lakshmi Tiffin Room : ಲಕ್ಷ್ಮಿ ಟಿಫನ್ ರೂಮ್ ಸೀರಿಯಲ್‌ನ ಕಥಾ ನಾಯಕಿ ವರಲಕ್ಷ್ಮಿ ನೇರ ನುಡಿಯ, ನ್ಯಾಯದ ಪರ ನಿಲ್ಲುವ ಗಟ್ಟಿಗಿತ್ತಿ. ಐಎಎಸ್ ಮಾಡಬೇಕೆಂಬ ಕನಸನ್ನು ಕಂಡ ಈ ಯುವತಿ, ಪರಿಸ್ಥಿತಿಯ ಕೈಗೊಂಬೆಯಾಗಿ, ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಸೀಮಿತ ಎಂಬ ಮನಸ್ಥಿತಿಯಿರುವ ಮನೆತನಕ್ಕೆ ಸೊಸೆಯಾಗಿ ಹೋಗುತ್ತಾಳೆ. ಆ ಮನೆಯ ರೀತಿ ರಿವಾಜುಗಳು, ಕಟ್ಟುಪಾಡುಗಳನ್ನು ಭೇಧಿಸಿ ತನ್ನ ಗಂಡನ ಮನೆಯಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಿ, ವರಲಕ್ಷ್ಮಿ ತನ್ನ ಐಎಎಸ್ ಕನಸನ್ನು ನನಸಾಗಿಸುತ್ತಾಳಾ? ಈ ಮೂರು ಗಂಟಿನ ಬಂಧ, ವರು ಕನಸುಗಳನ್ನು ಕಟ್ಟಿಹಾಕುತ್ತಾ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.


COMMERCIAL BREAK
SCROLL TO CONTINUE READING

ಹೆಣ್ಣೊಬ್ಬಳು ಕೂಡು ಕುಟುಂಬಕ್ಕೆ ಸೊಸೆಯಾಗಿ ಹೋದಾಗ ತನ್ನ ಕನಸನ್ನು ನನಸಾಗಿಸಲು ಏನೆಲ್ಲಾ ಕಷ್ಟಗಳನ್ನು ಎದುರಿಸಬೇಕಾಗುತ್ತೆ ಎಂಬುದನ್ನು ಈ ಕಥೆಯಲ್ಲಿ ಅತ್ಯದ್ಭುತವಾಗಿ ತೋರಿಸಲಾಗಿದೆ.


ಇದನ್ನೂ ಓದಿ: 500 ಸಂಚಿಕೆಗಳನ್ನ‌ ಯಶಸ್ವಿಯಾಗಿ ಪೂರೈಸಿರುವ ʼʼಜನನಿʼʼ ಸೀರಿಯಲ್! 


ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ವಿಶೇಷ ಪಾತ್ರದಲ್ಲಿ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೊತೆಗೆ ಸುನೇತ್ರ ಪಂಡಿತ್, ಅನಂತವೇಲು, ವಚನ್, ಮಧುಮಿತಾ, ವಿಜಯಲತಾ, ಕಾವ್ಯ, ಪ್ರೀತಮ್ ಮಕ್ಕಿಹಾಳಿ, ಭಗತ್ ಸೇರಿದಂತೆ ಇನ್ನು ಅನೇಕ ಕಲಾವಿದರು ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.  


ಶುರುವಾಗ್ತಿದೆ ಪ್ರೀತಿ, ಆಕಾಂಕ್ಷೆಯನ್ನೊಳಗೊಂಡ ವರಲಕ್ಷ್ಮಿಯ ಕಥೆ "ಲಕ್ಷ್ಮಿ ಟಿಫನ್ ರೂಮ್" ಇದೇ ಸೋಮವಾರದಿಂದ ಸಂಜೆ 6.30 ಕ್ಕೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.


ಇದನ್ನೂ ಓದಿ:  ನಟಿ ಆಶಿಕಾ ರಂಗನಾಥ್ ಮನೆಗೆ ಹೊಸ ಅಳಿಯನ ಆಗಮನ.! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.