ಬೆಂಗಳೂರು : ಕೊರೋನ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಬಿಡುಗಡೆಯಾದ ಚಿತ್ರ ಲೂಸ್ ಮಾದ ಯೋಗಿ ಅಭಿನಯದ "ಲಂಕೆ". ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷಗಳನ್ನೇ ಪೂರೈಸಿದೆ. ಚಿತ್ರ 365 ದಿನಗಳನ್ನು ಪೂರೈಸಿರುವ ಸಂತಸದಲ್ಲಿದೆ ಚಿತ್ರ ತಂಡ.  ಈ ಸಂಭ್ರಮವನ್ನು ಹಂಚಿಕೊಳ್ಳಲು ಸಿನಿ ತಂದ ಕಾರ್ಯಕ್ರಮವನ್ನು ಆಯೋಜಿಸಿತ್ತು.  


COMMERCIAL BREAK
SCROLL TO CONTINUE READING

ಕಾರ್ಯಕ್ರಮದಲ್ಲಿ ಮಾತನಾಡಿದ ನಾಯಕ ಲೂಸ್ ಮಾದ ಯೋಗಿ, ಇಲ್ಲಿವರೆಗೆ ನನ್ನ ಮನೆಯಲ್ಲಿ ಐವತ್ತು, ನೂರು, ನೂರೈವತ್ತು ದಿನಗಳ ಫಲಕಗಳಿತ್ತು. 365 ದಿನಗಳ ಫಲಕ ಪಡೆಯುತ್ತಿರುವುದು ಇದೇ ಮೊದಲು. ಈ ಯಶಸ್ಸಿನ ಬಹುಪಾಲು  ನಿರ್ದೇಶಕ ರಾಮ್ ಪ್ರಾಸಾದ್ ಅವರಿಗೆ ಸಲ್ಲಬೇಕು ಎಂದಿದ್ದಾರೆ. ಒಳ್ಳೆಯ ಸಿನಿಮಾದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. 


ಇದನ್ನೂ ಓದಿ : Emraan Hashmi: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ


ಚಿತ್ರಕ್ಕೆ ನೀಡಿರುವ ಬೆಂಬಲಕ್ಕಾಗಿ ಪ್ರೇಕ್ಷಕರಿಗೆ ನಿರ್ದೇಶಕ ರಾಮ್ ಪ್ರಸಾದ್ ಎಂ.ಡಿ ರು ಧನ್ಯವಾದ ತಿಳಿಸಿದ್ದಾರೆ. ಇದು ನನ್ನೊಬ್ಬನ ಗೆಲುವಲ್ಲ. ತಂಡದ ಗೆಲುವು ಎಂದಿದ್ದಾರೆ.  ಚಿತ್ರ ಒಂದು ವರ್ಷ ಪ್ರದರ್ಶನ ಕಾಣಲು ವಿತರಕ ಮಾರ್ಸ್ ಸುರೇಶ್ ಅವರೇ ಪ್ರಮುಖ ಕಾರಣ ಎಂದು ಅಭಿನಂದನೆ ಸಲ್ಲಿಸಿದರು. ಈ ಗೆಲುವನ್ನು ಚಿತ್ರದಲ್ಲಿ ನಟಿಸಿರುವ ಸಂಚಾರಿ ವಿಜಯ್ ಅವರಿಗೆ ಅರ್ಪಿಸುವುದಾಗಿ ಹೇಳಿದರು.


ನಾಯಕಿ ಕೃಷಿ ತಾಪಂಡ, ಚಿತ್ರದಲ್ಲಿ ನಟಿಸಿರುವ ಎಸ್ತರ್ ನರೋನ,  ಡ್ಯಾನಿಯಲ್ ಕುಟ್ಟಪ್ಪ, ಸಂಗಮೇಶ್ ಉಪಾಸೆ, ಮಹಂತೇಶ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು "ಲಂಕೆ" ಯ ಗೆಲುವನ್ನು ಹಂಚಿಕೊಂಡರು. 


ಇದು ಒಂದೇ ಚಿತ್ರಮಂದಿರದಲ್ಲಿ ಒಂದು ವರ್ಷ ಓಡಿಲ್ಲ. ಕರ್ನಾಟಕದ ಹಲವು ಕಡೆ ಒಂದು ವರ್ಷದಿಂದ ಪ್ರದರ್ಶನವಾಗುತ್ತಿದೆ. ಇದಕ್ಕೆ ಕಾರಣ ರಾಮ್ ಪ್ರಸಾದ್ ಅವರಿಗೆ ಸಿನಿಮಾ ಮೇಲಿರುವ ಪ್ರೀತಿ ಎಂದು ವಿತರಕ ಮಾರ್ಸ್ ಸುರೇಶ್ ತಿಳಿಸಿದರು.


ಇದನ್ನೂ ಓದಿ : ಮಾತಿನಮನೆಯಲ್ಲಿ "ಉಪಾಧ್ಯಕ್ಷ"


 



ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.