ಮುಂಬೈ: ದೀರ್ಘ ಕಾಲದಿಂದ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದ ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನರಾಗಿದ್ದಾರೆ. ನಿನ್ನೆಯಷ್ಟೇ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಅವಾನ್ನು ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯ ICU ವಾರ್ಡ್ ನಲ್ಲಿ ದಾಖಲಿಸಲಾಗಿತ್ತು. 


COMMERCIAL BREAK
SCROLL TO CONTINUE READING

ನವದೆಹಲಿ: ದೀರ್ಘ ಕಾಲದಿಂದ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದ ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನರಾಗಿದ್ದಾರೆ. ನಿನ್ನೆಯಷ್ಟೇ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಅವಾನ್ನು ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯ ICU ವಾರ್ಡ್ ನಲ್ಲಿ ದಾಖಲಿಸಲಾಗಿತ್ತು. 


ಇರ್ಫಾನ್ ಅವರ ಆರೋಗ್ಯಸ್ಥಿತಿ ಭಾರಿ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಸದ್ಯ ಅವರು ಜೀವನದ ಜೋತೆಗಿನ ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ ಎಂಬ ಸಂಗತಿ ತಿಳಿದುಬಂದಿದೆ. ಇರ್ಫಾನ್ ಅವರ ಸಾವಿನ ಕುರಿತಾದ ಸುದ್ದಿಯನ್ನು ಚಿತ್ರ ನಿರ್ಮಾಪಕ ಸೂಜಿತ್ ಸರ್ಕಾರ್ ದೃಢಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸೂಜಿತ್ ಸರ್ಕಾರ್ ದೇವರು ಇರ್ಫಾನ್ ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.ಇರ್ಫಾನ್ ಅವರ ನಿಧಾನಕ್ಕೆ ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.


ಇನ್ನೊಂದೆಡೆ  ಇರ್ಫಾನ್ ಅವರ ಸಾವಿನ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್, "ಇರ್ಫಾನ್ ಅವರ ನಿಧನದ ಸುದ್ದಿ ನಿಜಕ್ಕೂ ಆಘಾತ ತಂದಿದೆ, ಬಾಲಿವುಡ್ ಮತ್ತು ಇತರೆ ಚಿತ್ರರಂಗಗಳು ಕಂಡ ಅತ್ಯದ್ಭುತ ನಟ ಇರ್ಫಾನ್. ಅವರು ಸಲ್ಲಿಸಿರುವ ಸೇವೆ ನಿಜಕ್ಕೂ ಅವಿಸ್ಮರಣೀಯ. ದೇವರ ಅವರ ಆತ್ಮಕ್ಕೆ ಶಾಂತಿ ಕೋರಲಿ" ಎಂದು ಹೇಳಿದ್ದಾರೆ.