ಬೆಂಗಳೂರು: ನಟ ಯಶ್ ಅಭಿನಯಿಸುತ್ತಿರುವ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಟಾಕ್ಸಿಕ್ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಶಾಕಿಂಗ್‌ಸಂಗತಿಯೊಂದು ಹೊರಬಿದ್ದಿದೆ. ಟಾಕ್ಸಿಕ್ ಚಿತ್ರದ ಸೆಟ್ ಗಾಗಿ ನೂರಾರು ಮರಗಳನ್ನು ಕಡಿದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ಚಿತ್ರತಂಡಕ್ಕೆ ದೊರೆತಿದೆ.
ಯಶ್ ಟಾಕ್ಸಿಕ್ ಚಿತ್ರದ ಶೂಟಿಂಗ್‌ಗಾಗಿ ಸೆಟ್ ಹಾಕಲು HMT ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದಿರುವ ಆರೋಪ ಕೇಳಿಬಂದಿದೆ. ಈ ವಿಚಾರವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮದ ಗುಟ್ಟು ರಟ್ಟಾಗಿದೆ.
"ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ" ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಮ್ಮ X ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ… pic.twitter.com/yrjHhG9kLA
— Eshwar Khandre (@eshwar_khandre) October 29, 2024
ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇದನ್ನೂ ಓದಿ: ಅಕ್ಕಿನೇನಿ ಕುಟುಂಬಕ್ಕೆ ಬಿಗ್ ಶಾಕ್.. ಮದುವೆಗೂ ಮುನ್ನವೇ ಗರ್ಭಿಣಿಯಾದ ನಾಗಚೈತನ್ಯ ಭಾವಿ ಪತ್ನಿ!?
ಟಾಕ್ಸಿಕ್ ಮೂವಿಗೆ ಸಂಕಷ್ಟ ಇದೇ ಮೊದಲಲ್ಲ. ಈ ಹಿಂದೆ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕೆ ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ 20 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದೆ ಎನ್ನಲಾಗಿತ್ತು. ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಸೆಟ್ ನಿರ್ಮಾಣ ಮಾಡಿದ್ದಸರೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಕೋರ್ಟ್ ನಲ್ಲಿ ಕೇಸ್ ಹಾಕಿದ್ದರು. ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಟಾಕ್ಸಿಕ್ ಸಿನಿಮಾ ನಿರ್ಮಾಣ ಮಾಡುತ್ತಿರುವ ಕೆವಿಎನ್ ಪ್ರೊಡಕ್ಷನ್ ಮತ್ತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ಜಾರಿ ಮಾಡಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.