ಮುಂಬೈ: ಇಂದು ಮುಂಜಾನೆ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆಯನ್ನು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಂಜೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರಕ್ಕೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು.ಲತಾ ಮಂಗೇಶ್ಕರ್ ಅವರ ಸಹೋದರ ಹೃದಯನಾಥ್ ಮಂಗೇಶ್ಕರ್ ಅವರು ಗಾಯನ ದಂತಕಥೆಯ ಅಂತ್ಯಕ್ರಿಯೆಯ ಚಿತಾಗಾರವನ್ನು ಬೆಳಗಿಸಿದರು.
ಇದನ್ನೂ ಓದಿ: ಬೆಳ್ಳನೆ ಬೆಳಗಾಯಿತು' ಹಾಡಿನ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಲತಾ ಮಂಗೇಶ್ಕರ್..!
ಗಾಯಕಿಗೆ ಅಂತಿಮ ನಮನ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಶಿವಾಜಿ ಪಾರ್ಕ್‌ಗೆ ಭೇಟಿ ನೀಡಿ ಮಂಗೇಶ್ಕರ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಅಂತ್ಯಕ್ರಿಯೆಗೂ ಮುನ್ನ ಸ್ಥಳದಿಂದ ನಿರ್ಗಮಿಸಿದರು.ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಡೆಸಲಾಯಿತು.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮೆಗಾಸ್ಟಾರ್ ಶಾರುಖ್ ಖಾನ್, ಸಾಹಿತಿ ಜಾವೇದ್ ಅಖ್ತರ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದರು.
ಇದನ್ನೂ ಓದಿ: ಗಾನಕೋಗಿಲೆ ಲತಾ ಮಂಗೇಶ್ಕರ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ
ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳಿಗೆ ಭಾಜನರಾದ ಲತಾ ಮಂಗೇಶ್ಕರ್ ಅವರು ಹಿಂದಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಿನ್ನಲೆ ಗಾಯನ ನೀಡುವುದರ ಮೂಲಕ ಭಾರತದ ಗಾನಕೋಗಿಲೆ ಎಂದೇ ಖ್ಯಾತಿ ಪಡೆದಿದ್ದರು. ಲತಾ ಮಂಗೇಶ್ಕರ್ ಅವರು 1941 ರಲ್ಲಿ ರೇಡಿಯೊಗೆ ಪಾದಾರ್ಪಣೆ ಮಾಡಿದಾಗಿನಿಂದ 14 ಭಾಷೆಗಳಲ್ಲಿ 50,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
ಲತಾ ಅವರ ನಿಧನದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಎರಡು ದಿನಗಳ “ರಾಜ್ಯ ಶೋಕಾಚರಣೆ” ಘೋಷಿಸಿದೆ. ಫೆಬ್ರವರಿ 6 ರಿಂದ ಫೆಬ್ರವರಿ 7 ರವರೆಗೆ ಭಾರತದಾದ್ಯಂತ ರಾಷ್ಟ್ರಧ್ವಜವು ಅರ್ಧದಷ್ಟು ಹಾರಲಿದೆ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.