ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ

                              

Written by - Yashaswini V | Last Updated : Oct 29, 2021, 08:21 PM IST
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ
Live Blog

ಬೆಂಗಳೂರು: ಇಂದು ಬೆಳಿಗ್ಗೆ ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (46) ವಿಧಿವಶ ರಾಗಿದ್ದಾರೆ.

ಇಂದು ಬೆಳಿಗ್ಗೆ ಎದೆನೋವಿನಿಂದಾಗಿ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದ ಹಿನ್ನಲೆಯಲ್ಲಿ ಅವರನ್ನು ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು.

 

 

29 October, 2021

  • 17:10 PM

    ಇಂದು ರಾಜ್ಯಾದ್ಯಂತ ‘ಭಜರಂಗಿ-2’ ಸಿನಿಮಾ ರಿಲೀಸ್ ಹಿನ್ನೆಲೆ ನಟ ಪುನೀತ್ ರಾಜ್ ಕುಮಾರ್ ಟ್ವೀಟ್ ಮಾಡುವ ಮೂಲಕ ಸಹೋದರ ಶಿವಣ್ಣನಿಗೆ ಶುಭ ಹಾರೈಸಿದ್ದರು. ಇದೇ ಪುನೀತ್ ಅವರ ಕೊನೆಯ ಟ್ವೀಟ್ ಆಗಿದೆ.

  • 17:07 PM

    ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಮನೆಯಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಕುಟುಂಬದ ಮೂಲಗಳ ಪ್ರಕಾರ ಭಾನುವಾರವೇ ಪುನೀತ್ ಅವರ ಅಂತ್ಯಕ್ರಿಯೆ ನೆರವೇರಲಿದೆ.

  • 17:06 PM

    ನಟ ಪುನೀತ್ ನಿಧನದಿಂದ ‘ದೊಡ್ಮನೆ’ ತವರೂರು 'ದೊಡ್ಡಗಾಜನೂರಿ'ನಲ್ಲಿ ನೀರವ ಮೌನ ಆವರಿಸಿದೆ. ಪುನೀತ್ ಅಭಿಮಾನಿಗಳು ಕಣ್ಣೀರಿಟ್ಟು ಗೋಳಾಡುತ್ತಿದ್ದಾರೆ.  

  • 17:04 PM

    ನಟ ಪುನೀತ್ ನಿಧನದಿಂದ ‘ದೊಡ್ಮನೆ’ ತವರೂರು ದೊಡ್ಡಗಾಜನೂರಿನಲ್ಲಿ ನೀರವ ಮೌನ ಆವರಿಸಿದೆ. ಪುನೀತ್ ಅಭಿಮಾನಿಗಳು ಕಣ್ಣೀರಿಟ್ಟು ಗೋಳಾಡುತ್ತಿದ್ದಾರೆ.  

  • 17:01 PM

    ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಯಾವುದೇ ಅಹಿತಕ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಂತಿಮ ದರ್ಶನಕ್ಕೆ ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

  • 16:57 PM

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಬೆಂಗಳೂರಿನಲ್ಲಿ 3 ದಿನ ಮದ್ಯಮರಾಟವನ್ನು ನಿಷೇಧಿಸಲಾಗಿದೆ. ಅ.31ರವರೆಗೆ ನಗರದಲ್ಲಿ ಮದ್ಯಮಾರಾಟ ಮಾಡದಂತೆ ಸೂಚಿಸಲಾಗಿದೆ.

  • 16:50 PM

    ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.

  • 16:45 PM

    ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ತಿಳಿದು ಅಮೆರಿಕದಿಂದ ವಾಪಸ್ ಆಗುತ್ತಿರುವ ಪುತ್ರಿ ಧೃತಿ. 2 ತಿಂಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದ ಪುತ್ರಿ ಧೃತಿ ಅಮೆರಿಕದಿಂದ ಭಾರತಕ್ಕೆ ಆಗಮಿಸುತ್ತಿದ್ದಾರೆ.  

  • 16:44 PM

    ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.      

  • 16:42 PM

    ನಾಳೇ(ಅ.30) ಇಡೀ ದಿನ ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರವನ್ನು ಅಭಿಮಾನಿಗಳ ದರ್ಶನಕ್ಕೆ ಇಡಲಾಗುವುದು. ಭಾನುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಟನ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

  • 16:41 PM

    ಕೆಲ ಹೊತ್ತಿನಲ್ಲಿಯೇ ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ನಟ ಪುನೀತ್ ರಾಜ್ ಕುಮಾರ್ ಮೃತದೇಹವನ್ನು ಕಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರಿಸುವ ಸಾಧ್ಯತೆ.

  • 16:35 PM

    ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನನಗೆ ಶಾಕ್ ಆಗಿದೆ ಎಂದ ಚಿತ್ರನಟಿ ರಮ್ಯಾ. ಪುನೀತ್ ಎಂದಿಗೂ ವರ್ಕೌಟ್ ಮಿಸ್ ಮಾಡುತ್ತಿರಲಿಲ್ಲ. ನನಗೂ ವರ್ಕೌಟ್ ಮಾಡುವಂತೆ ಹೇಳುತ್ತಿದ್ದರು.

  • 15:56 PM

    ಪುನೀತ್ ರಾಜ್ ಕುಮಾರ್ ಅವರ ಸದಾಶಿವ ನಗರ ನಿವಾಸಕ್ಕೆ ಪಾರ್ಥೀವ ಶರೀರ

    * ಪುನೀತ್ ಅಂತಿಮ ದರ್ಶನಕ್ಕಾಗಿ ಆಗಮಿಸಿದ ಸಿದ್ದು, ಹೆಚ್ಡಿಡಿ

    * ಕಂಠೀರವ ಕ್ರೀಡಾಂಗಣದಲ್ಲಿ ಸಂಜೆ 5 ಗಂಟೆಯಿಂದ ನಟ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

  • 15:51 PM

    ಅಪ್ಪು ಪಾರ್ಥೀವ ಶರೀರವನ್ನು ಹೊತ್ತೊಯ್ದ ಯಶ್.

    ಪತಿಯ ಪಾರ್ಥೀವ ಶರೀರ ಅಪ್ಪಿಕೊಂಡು ಕಣ್ಣೀರು ಹಾಕಿದ ಪುನೀತ್ ಪತ್ನಿ
     

  • 15:44 PM

    ನಾಳೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

    ಅಂತ್ಯ ಕ್ರಿಯೆ ಜಾಗದ ಬಗ್ಗೆ ಕುಟುಂಬ ಸದಸ್ಯರು ನಿರ್ಧರಿಸಲಿದ್ದಾರೆ- ಕಂದಾಯ ಸಚಿವ ಆರ್. ಅಶೋಕ್

  • 15:37 PM

    * ಪುನೀತ್ ತಮ್ಮ ತಂದೆಯಂತೆಯೇ ಗುಣಗಳನ್ನು ಅಳವಡಿಸಿಕೊಂಡಿದ್ದರು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಅವರು ನಮ್ಮನ್ನಗಲಿರುವುದು ದುಃಖದ ಸಂಗತಿ.

    * ಇಂದು ಮತ್ತು ನಾಳೆ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

    * ಇಂದು ಸಂಜೆ 5 ಗಂಟೆಯಿಂದ ಅಂತಿಮದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

    * ಕುಟುಂಬಸ್ಥರ ಜೊತೆ ಚರ್ಚಿಸಿ ಅವರು ಹೇಳಿದಂತೆ ಅಂತಿಮ ವಿಧಿ ನೆರವೇರಿಸಲಾಗುವುದು. 

    * ಸಕಲ ಸರ್ಕಾರಿ ಗೌರವದೊಂದಿಗೆ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅಂತಿಮ ನಮನ- ವಿಕ್ರಂ ಆಸ್ಪತ್ರೆಯ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

  • 15:33 PM

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ: ಇಂದು-ನಾಳೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ- ಸಿಎಂ ಬಸವರಾಜ ಬೊಮ್ಮಾಯಿ

    ಡಾ. ರಾಜ್‌ಕುಮಾರ್ ಅವರಂತೆಯೇ ಎಲ್ಲರಿಗೂ ಮಾದರಿಯಾದ ವ್ಯಕ್ತಿತ್ವ ಪುನೀತ್ ರಾಜ್‌ಕುಮಾರ್ ಅವರದ್ದು- ಸಿಎಂ ಬಸವರಾಜ ಬೊಮ್ಮಾಯಿ

    ಇಂದು ಪುನೀತ್ ರಾಜ್ ಕುಮಾರ್ ಅವರೊಂದಿಗೆ ಭೇಟಿಯಾಗಲು ಸಮಯ ನಿಗದಿ ಆಗಿತ್ತು- ವಿಕ್ರಂ ಆಸ್ಪತ್ರೆಯ ಬಳಿ ಸಿಎಂ ಬೊಮ್ಮಾಯಿ ಹೇಳಿಕೆ

     

  • 15:27 PM

    ಪುನೀತ್ ರಾಜ್ ಕುಮಾರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ

     

     

  • 15:19 PM

    ಯುವರತ್ನನ ನಿಧನಕ್ಕೆ ಕ್ರಿಕೆಟ್ ದಿಗ್ಗಜರ ಸಂತಾಪ:

     

  • 15:18 PM

    ಪುನೀತ್ ಅವರಿಗೆ ಯಾವುದೇ ಕೆಟ್ಟ ಅಭ್ಯಾಸ ಇರಲಿಲ್ಲ. ಅವರನ್ನು ನಾವು ರಾಜಕೀಯಕ್ಕೆ ಎಳೆತರಲು ಬಯಸಿದ್ದೆವು. ಆದರೆ ಅವರು ರಾಜಕೀಯಕ್ಕೆ ಬರಲು ಸಿದ್ದರಿರಲಿಲ್ಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
     

  • 15:13 PM

    ನಟ ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್:
    ಪ್ರಕಾಶಮಾನವಾದ ನಕ್ಷತ್ರ. ಅವರು ಮುಂದೆ ದೀರ್ಘ ಭರವಸೆಯ ವೃತ್ತಿಜೀವನವನ್ನು ಹೊಂದಿದ್ದರು. ಅವರ ಕುಟುಂಬಕ್ಕೆ, ಅವರ ಅಸಂಖ್ಯಾತ ಅಭಿಮಾನಿಗಳಿಗೆ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

  • 15:10 PM

    ನಟ ಪುನೀತ್ ನಿಧನಕ್ಕೆ ಸಚಿವರ ತೀವ್ರ ಸಂತಾಪ:
    ಪುನೀತ್ ಅವರು ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದ್ದರು. ನಾಡು-ನುಡಿ ಮತ್ತು ಸಮಾಜದ ಬಗ್ಗೆ ಅಪಾರ ಕಳಕಳಿ ಹೊಂದಿದ್ದ ಅವರನ್ನು ಕಳೆದುಕೊಂಡಿರುವುದರಿಂದ ಕನ್ನಡ ನಾಡು ಅಕ್ಷರಶಃ ಬಡವಾಗಿದೆ- ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಸಂತಾಪ

  • 15:00 PM

    ಪುನೀತ್ ರಾಜ್ ಕುಮಾರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ

     

  • 14:59 PM

    ಪುನೀತ್ ನಿಧಾನಕ್ಕೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಂತಾಪ

  • 14:58 PM

    ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ

  • 14:53 PM

    ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು
     

    ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. 

    ಅವರು ನಟಿಸಿದ್ದ ಪೃಥ್ವಿ  ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯ ವಾಗಿದೆ 

  • 14:43 PM

    ಪುನೀತ್ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಸಂತಾಪ
    >> ಮಾಧ್ಯಮ ಪ್ರಕಟಣೆ ಮೂಲಕ ಸಂತಾಪ ಸೂಚಿಸಿರುವ ಎಸ್. ಎಂ. ಕೃಷ್ಣ
    >> ಪುನೀತ್ ನಮ್ಮನ್ನು ಅಗಲಿರುವುದು ಅತ್ಯಂತ ದುಃಖದ ವಿಷಯ 
    >> ಸರಳ, ಸಜ್ಜನಿಕೆಗೆ ಹೆಸರುವಾಸಿ ಆಗಿದ್ದ ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ

  • 14:43 PM

    ಪುನೀತ್ ವಿಧಿವಶ; ಡಿ.ಕೆ. ಶಿವಕುಮಾರ್ ಕಂಬನಿ
    ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೋಯ್ದ ವಿಧಿ ಬಹಳ ಕ್ರೂರಿ ಎಂದು ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.

    ಪುನೀತ್ ಅವರು ನನಗೆ ಆತ್ಮೀಯರಾಗಿದ್ದರು. ಕುಟುಂಬದ ಸ್ನೇಹಿತರಾಗಿದ್ದರು. ನಮ್ಮಿಬ್ಬರ ಕುಟುಂಬ ಸದಸ್ಯರ ನಡುವೆ ಉತ್ತಮ ಒಡನಾಟವಿತ್ತು ಎಂದು ಹೇಳಿಕೆಯಲ್ಲಿ ಸ್ಮರಿಸಿಕೊಂಡಿದ್ದಾರೆ.

  • 14:35 PM

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ
    * ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ ಅಪ್ಪು

    * ಹೃದಯಾಘಾತದಿಂದ ಇಂದು ಬೆಳಿಗ್ಗೆ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್

    * 46ನೇ ವಯಸ್ಸಿನಲ್ಲಿ ಎಲ್ಲರನ್ನು ಅಗಲಿದ ಪುನೀತ್ ರಾಜ್ ಕುಮಾರ್

    * ತಮ್ಮನನ್ನು ಕಳೆದುಕೊಂಡು ದದ್ಗತಿತರಾಗಿರುವ ಶಿವಣ್ಣ
     

  • 14:33 PM

    ಪುನೀತ್ ಸದಾಶಿವನಗರ ನಿವಾಸಕ್ಕೆ ಶಿವಣ್ಣನ ಆಗಮನ

  • 14:19 PM

    ಕ್ಷಣ ಕ್ಷಣಕ್ಕೂ ಬಿಗಡಾಯಿಸುತ್ತಿರುವ ಪುನೀತ್ ರಾಜ್ ಕುಮಾರ್ ಆರೋಗ್ಯ:

    ಆಸ್ಪತ್ರೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

  • 14:17 PM

    ನಟ ಪುನೀತ್ ಅವರ ಸದಾಶಿವ ನಗರ ನಿವಾಸದಲ್ಲಿರುವ ನಟ ಯಶ್

    ಪುನೀತ್ ನಿವಾಸದತ್ತ ಆಗಮಿಸುತ್ತಿರುವ ಚಿತ್ರರಂಗದ ಗಣ್ಯರು

  • 14:16 PM

    ಆಸ್ಪತ್ರೆಯಲ್ಲಿರುವ ನಟ ಯಶ್, ದರ್ಶನ್, ರವಿಚಂದ್ರನ್, ರಾಕ್ ಲೈನ್ವೆಂಕಟೇಶ್, ಗಣೇಶ್, ನೀನಾಸಂ ಸತೀಶ್ ಸೇರಿದಂತೆ ಹಲವು ಕಲಾವಿದರು

  • 14:13 PM

    ಪುನೀತ್ ಆರೋಗ್ಯ ಚಿಂತಾಜನಕ:

    *  ಮುಗಿಲು ಮುಟ್ಟಿದ ಅಭಿಮಾನಿಗಳ ಆಕ್ರಂದನ

    * ಅಪ್ಪು ಚೇತರಿಕೆಗಾಗಿ ಪ್ರಾರ್ಥನೆ ಮಾಡುತ್ತಿರುವ ಅಭಿಮಾನಿಗಳು

     

  • 14:11 PM

    ವಿಕ್ರಂ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್

  • 14:05 PM

    ಪುನೀತ್ ಆರೋಗ್ಯ ಸ್ಥಿತಿ ಚಿಂತಾಜನಕ:

    * ವಿಕ್ರಂ ಆಸ್ಪತ್ರೆಗೆ ಪುನೀತ್ ಪುತ್ರಿ ಆಗಮನ
    * ಪುನೀತ್ ಅವರ ಕಿರಿಯ ಪುತ್ರಿ ಆಸ್ಪತ್ರೆಗೆ ಆಗಮನ 

  • 14:02 PM

    ಪುನೀತ್ ರಾಜ್ ಕುಮಾರ್ ಆರೋಗ್ಯ ಗಂಭೀರವಾಗಿರುವ ಹಿನ್ನಲೆಯಲ್ಲಿ ಬೆಂಗಳೂರಿಗೆ ಬರುವ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
    >> ಇತರ ಭಾಗಗಳಿಂದ ಬೆಂಗಳೂರಿಗೆ ಬರುವ ರಸ್ತೆಗಳಲ್ಲಿ ಭಾರೀ ಬಿಗಿ ಬಂದೋಬಸ್ತ್ ಮಾಡುತ್ತಿರುವ ಪೊಲೀಸರು

    >> ಪುನೀತ್ ರಾಜ್ ಕುಮಾರ್ ಅವರ ನಿವಾಸ ಹಾಗೂ ವಿಕ್ರಂ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲೂ ಭಾರೀ ಬಿಗಿ ಭದ್ರತೆ
     

  • 13:55 PM

    ಕೆಲವೇ ಹೊತ್ತಿನಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ:

    * ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

    * ಸುದ್ದಿಗೋಷ್ಠಿಯಲ್ಲಿ ನಟ ಶಿವರಾಜ್ ಕುಮಾರ್ ಉಪಸ್ಥಿತಿ

  • 13:50 PM

    ಇಂದು ಮಧ್ಯಾಹ್ನ 3ಗಂಟೆಗೆ ಸಿಎಂ ಪತ್ರಿಕಾಗೋಷ್ಠಿ:
    ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಟ ಶಿವರಾಜ್‌ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆ ಆವರಣದಲ್ಲಿ ಪತ್ರಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ

  • 13:22 PM

    ಪುನೀತ್ ಆರೋಗ್ಯದ ಬಗ್ಗೆ ಈಗಲೇ ಏನು ಹೇಳಲು ಸಾಧ್ಯವಿಲ್ಲ- ವಿಕ್ರಂ ಆಸ್ಪತ್ರೆಯ ವೈದ್ಯರ ಹೇಳಿಕೆ

    >> ಇಂದು ಬೆಳಿಗ್ಗೆ ಎದೆ ನೋವು ಎಂದು ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ಬಂದಿದ್ದರು

    >> ಬೆಳಿಗ್ಗೆ 11:30ರ ಸುಮಾರಿಗೆ ಪುನೀತ್ ಆಸ್ಪತ್ರೆಗೆ ಆಗಮಿಸಿದ್ದರು

    >> ವಿಕ್ರಂ ಆಸ್ಪತ್ರೆಗೆ ಬರುವಾಗಲೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಕೂಡಲೇ ಅವರಿಗೆ ಚಿಕಿತ್ಸೆ ನೀಡಿದ್ದೇವೆ. ಅವರ ಸ್ಥಿತಿ ತುಂಬಾ ಗಂಭೀರವಾಗಿದೆ. ಅವರ ಆರೋಗ್ಯದ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿಕೆ ನೀಡಿದ್ದಾರೆ.

  • 13:05 PM

    ಜೀವನ್ಮರಣದ ನಡುವೆ ಪುನೀತ್ ರಾಜ್ ಕುಮಾರ್ ಹೋರಾಟ

    ಅಪ್ಪು ಆರೋಗ್ಯ ಸ್ಥಿತಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ  ನೆರೆದಿರುವ ಅಭಿಮಾನಿಗಳು

  • 13:03 PM

    >> ವಿಕ್ರಂ ಆಸ್ಪತ್ರೆಯ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್. 
    >> ಸದಾಶಿವ ನಗರದಲ್ಲಿರುವ ಪುನೀತ್ ನಿವಾಸದ ಬಳಿಯೂ ಬ್ಯಾರಿಕೇಡ್ ಅಳವಡಿಕೆ

  • 12:59 PM

    ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಗಂಭೀರವಾಗಿರುವ ಹಿನ್ನಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  • 12:55 PM

    ನಟ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ನಟ ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಸ್ಯಾಂಡಲ್ ವುಡ್ ತಾರೆಯರು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. 

     

     

  • 12:54 PM

    ಅಪ್ಪು ಆರೋಗ್ಯ ಸ್ಥಿತಿ ತಿಳಿದು ಶಿವಣ್ಣನ ಕಣ್ಣೀರು

  • 12:53 PM

    ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನಲೆ ವಿಕ್ರಂ ಆಸ್ಪತ್ರೆಗೆ ದೌಡಾಯಿಸಿದ ನಟ ಶಿವರಾಜ್ ಕುಮಾರ್

Trending News