Dwarakish Passes Away LIVE UPDATES: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ನಾಳೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Dwarakish Passes Away Live Updates : ಸ್ಯಾಂಡಲ್‌ವುಡ್‌ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶರಾಗಿದ್ದಾರೆ. ಏಪ್ರಿಲ್‌ 16 ರಂದು ಚಂದನವನದ ಪ್ರಚಂಡ ಕುಳ್ಳ ಇಹಲೋಕ ತ್ಯಜಿಸಿದ್ದಾರೆ.  

Written by - Chetana Devarmani | Last Updated : Apr 16, 2024, 06:20 PM IST
Dwarakish Passes Away LIVE UPDATES: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ನಾಳೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ
Live Blog

Dwarakish Passes Away Live Updates : ಸ್ಯಾಂಡಲ್ ವುಡ್‌ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ. ​ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದವರು. 81 ವರ್ಷದ ದ್ವಾರಕೀಶ್ ಅವರ ಅಗಲಿಕೆಗೆ ಚಿತ್ರರಂಗ ಕಂಬನಿ ಮಿಡಿದಿದೆ. ಹಿರಿಯ ನಟ ದ್ವಾರಕೀಶ್‌ ಹೃದಯಾಘಾತ ದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ ಅವರ ಅಭಿಮಾನಿಗಳಿಗೆ ಶಾಕ್‌ ನೀಡಿದೆ. ದ್ವಾರಕೀಶ್‌ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅನೇಕ ದಿಗ್ಗಜ ನಟರ ಜೊತೆ ಸ್ಕ್ರೀನ್‌ ಶೇರ್‌ ಮಾಡಿದ್ದ ದ್ವಾರಕೀಶ್‌ ಇದೀಗ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. 

16 April, 2024

  • 18:19 PM

    Dwarakish Death: ಶಿವರಾಜ್‌ಕುಮಾರ್- ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ನಟ ಶಿವರಾಜ್‌ಕುಮಾರ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮ ನಗುಮುಖವನ್ನೇ ಸದಾ ನೆನೆಯುತ್ತ ಬೀಳ್ಕೊಡುವೆ. ಹೋಗಿ ಬನ್ನಿ ದ್ವಾರಕೀಶ್ ಮಾಮ. Om Shanthiʼ ಎಂದು ಹೇಳಿದ್ದಾರೆ. 
     

  • 18:13 PM

    Dwarakish Death: ಅನಿಲ್‌ ಕುಂಬ್ಳೆ ಸಂತಾಪ- ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಸರ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವರು ನಾವು. ಚಿತ್ರರಂಗಕ್ಕೆ ಅವರ ಕೊಡುಗೆ ಸದಾ ಸ್ಮರಣೀಯʼವೆಂದು ಹೇಳಿದ್ದಾರೆ.

  • 18:11 PM

    Dwarakish Death: ರಕ್ಷಿತ್‌ ಶೆಟ್ಟಿ ಸಂತಾಪ- ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ‌ನಟ ರಕ್ಷಿತ್‌ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼನಮ್ಮ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರ ಕೊಡುಗೆ ಅವಿಸ್ಮರಣೀಯ! ನೀವು ಬಿಟ್ಟು ಹೋದ ಪರಂಪರೆಯ ಮೂಲಕ ನೀವು ಎಂದೆಂದಿಗೂ ನೆನಪಿನಲ್ಲಿ ಉಳಿಯುತ್ತೀರಿ ಸರ್... ಶಾಂತಿಯಿಂದ ವಿಶ್ರಾಂತಿ ಪಡೆಯಿರಿ. ಓಂ ಶಾಂತಿ.ʼ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. 

  • 18:10 PM

    Dwarakish Death: ಕಿಚ್ಚ ಸುದೀಪ್ ಸಂತಾಪ- ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ‌ನಟ ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು. ಅವರ ಕುಟುಂಬಕ್ಕೆ ತೀವ್ರವಾದ ಸಂತಾಪಗಳು. ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಕೋರುತ್ತಾʼ ಎಂದು ಸಂತಾಪ ಸೂಚಿಸಿದ್ದಾರೆ.

  • 18:05 PM

    Dwarakish Death: ಮಲ್ಲಿಕಾರ್ಜುನ್‌ ಖರ್ಗೆ ಸಂತಾಪ- ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಕನ್ನಡದ ದಿಗ್ಗಜ ನಟ, ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ನನ್ನ ತೀವ್ರ ಸಂತಾಪಗಳು. ಅವರ ಸಾವಿನಿಂದ ಚಿತ್ರರಂಗ ಮತ್ತು ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಕಲೆ ಮತ್ತು ಚಲನಚಿತ್ರಗಳೊಂದಿಗೆ ಅವರ ಆರು ದಶಕಗಳ ಸುದೀರ್ಘ ಒಡನಾಟವು ಕ್ಷೇತ್ರವನ್ನು ನಿಜವಾಗಿಯೂ ಶ್ರೀಮಂತಗೊಳಿಸಿತು. ಅವರ ನಿಧನದಿಂದ ದುಃಖತಪ್ತರಾದ ಅವರ ಕುಟುಂಬ ಮತ್ತು ಅಸಂಖ್ಯಾತ ಜನರಿಗಾಗಿ ನನ್ನ ಪ್ರಾರ್ಥನೆಗಳುʼ ಎಂದು ಸಂತಾಪ ಸೂಚಿಸಿದ್ದಾರೆ. 

  • 18:02 PM

    Dwarakish Death: ಎಚ್.ಡಿ.ದೇವೇಗೌಡ ಸಂತಾಪ- ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀ ದ್ವಾರಕೀಶ್ ಅವರು ನಿಧನರಾದ ವಿಷಯ ತಿಳಿದು ಅತ್ಯಂತ ನೋವುಂಟಾಯಿತು. ಅವರ ಸಾವಿನ ನೋವನ್ನು ಸಹಿಸುವ ಶಕ್ತಿ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಸಿಗಲಿ ಹಾಗು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಹೇಳಿದ್ದಾರೆ.

  • 17:47 PM

    Dwarakish Death news:- ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸಂತಾಪ: ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ 🙏🏾 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿʼ ಎಂದು ಹೇಳಿದ್ದಾರೆ. 

  • 17:39 PM

    Dwarakish Death news: ಹಿರಿಯ ನಟ ದ್ವಾರಕೀಶ್‌ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ದ್ವಾರಕೀಶ್‌ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತನು ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ...ʼ ಎಂದು ಹೇಳಿದ್ದಾರೆ.  

  • 17:37 PM

    Dwarakish Death news: ಹಿರಿಯ ನಟ ದ್ವಾರಕೀಶ್‌ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯನವರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ.ರಾಜ್‌ಕುಮಾರ್ ಮತ್ತು ಡಾ.ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆʼ ಎಂದು ಹೇಳಿದ್ದಾರೆ. 

  • 17:19 PM

    Dwarakish Death news: ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʼಕನ್ನಡದ ಹಿರಿಯ ನಟರಾದ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ. ವರನಟ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌, ಅಂಬರೀಶ್‌ರಂಥ ದಿಗ್ಗಜರ ಜೊತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಆಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಹೇಳಿದ್ದಾರೆ.

  • 17:10 PM

    Dwarakish Death News: ನಾಳೆ ಒಂದು ಶೋ ಬಂದ್‌! ನಾಳೆ ಬೆಳಗ್ಗೆ 10.30ರ ಶೋ ಬಂದ್‌ಗೆ ಕನ್ನಡ ಚಿತ್ರೋದ್ಯಮ ನಿರ್ಧರಿಸಿದೆ. ಸಿಂಗಲ್‌ ಸ್ಕ್ರೀನ್‌, ಮಲ್ಟಿಫ್ಲೆಕ್ಸ್‌ನಲ್ಲೂ ಒಂದು ಶೋ ಬಂದ್‌ ಮಾಡಲಾಗುತ್ತಿದೆ. ಈ ಬಗ್ಗೆ ಪ್ರದರ್ಶಕರ ವಲಯದಿಂದ ಮಾಹಿತಿ ಬಂದಿದೆ. ಮಧ್ಯಾಹ್ನ 1 ಗಂಟೆಯ ನಂತರ ಮತ್ತೆ ಶೋ ಆರಂಭವಾಗಲಿದೆ. 

  • 17:05 PM

    Dwarakish Death news:- ದ್ವಾರಕೀಶ್ ನನ್ನ ಗುರು-ಅನ್ನದಾತ: ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಹಿರಿಯ ನಿರ್ದೇಶಕ ಭಾರ್ಗವ್ ಸಂತಾಪ ವ್ಯಕ್ತಪಡಿಸಿದ್ದಾರೆ. ದ್ವಾರಕೀಶ್ ಸಂಬಂಧಿಯೂ ಆಗಿರುವ ಭಾರ್ಗವ್, ಅಗಲಿದ ಸ್ನೇಹಿತನನ್ನು ನೆನೆದು ಭಾವುಕರಾಗಿದ್ದರು. ನಾನು ಮತ್ತು ದ್ವಾರಕೀಶ್ ಬಾಲ್ಯದ ಸ್ನೇಹಿತರು. ಸ್ಕೂಲ್-ಕಾಲೇಜು ಶಿಕ್ಷಣ ಒಟ್ಟಿಗೆ ಮುಗಿಸಿದ್ದೇವೆ. ಕಾಲೇಜು ದಿನಗಳಿಂದಲೇ ದ್ವಾರಕೀಶ್‌ಗೆ ನಟನೆಯ ಬಗ್ಗೆ ತೀವ್ರ ಆಸಕ್ತಿ ಇತ್ತು. ಅವರ ಅಣ್ಣ ಮೈಸೂರಿನಲ್ಲಿ ಅಂಗಡಿ ಹಾಕಿ ಕೊಟ್ಟಿದ್ದರು. ಆದರೆ ಆ ಅಂಗಡಿಯನ್ನು ಬಿಟ್ಟು ನಟ ಆಗಲು ಬೆಂಗಳೂರಿಗೆ ಬಂದರು. ಚಿತ್ರರಂಗದಲ್ಲಿ 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ನನಗೆ ಅವನೇ ಅನ್ನದಾತ, ಆತನಿಂದಲೇ ನಾನು ಚಿತ್ರರಂಗಕ್ಕೆ ಬಂದೆ. ದ್ವಾರಕೀಶ್ ನನ್ನ ಗುರು ಮತ್ತು ಅನ್ನದಾತ ಎಂದು ಅವರು ಭಾವುಕರಾದರು. 

  • 17:00 PM

    Dwarakish Death news:- ದ್ವಾರಕೀಶ್ ಚಿತ್ರರಂಗದ ದೊಡ್ಡ ಆಸ್ತಿ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ, ಹಿರಿಯ ನಟ ದ್ವಾರಕೀಶ್ ಅವರು ಚಿತ್ರರಂಗದ ದೊಡ್ಡ ಆಸ್ತಿ. ಅವರ ಅಗಲಿಕೆ ಎಲ್ಲರಿಗೂ ತುಂಬಾ ನೋವುಂಟು ಮಾಡಿದೆ. ಅವರು ಕೇವಲ ನಟರಲ್ಲ ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹೀಗಾಗಿ ನಾಳೆ ಚಿತ್ರರಂಗದ ಚಟುವಟಿಕೆಗಳನ್ನು ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಅಂತಾ ನಾನು ಸಹ ಮನಡಿ ಮಾಡಿಕೊಳ್ಳುತ್ತೇನೆ. ಅವರ ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಜೊತೆ ಮಾತನಾಡುತ್ತಿದ್ದೇವೆ ಎಂದು ಹೇಳಿದ್ದಾರೆ.   

  • 16:19 PM

    Dwarakish Death news:- ನಾಳೆ ಬೆಳಗ್ಗೆ 7 ಗಂಟೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಹಿರಿಯ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 7 ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಚಾಮರಾಜಪೇಟೆಯ TR ಮಿಲ್‌ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.

  • 15:37 PM

    Rajinikanth condolence : ದ್ವಾರಕೀಶ್ ‌ಅಗಲಿಕೆಗೆ ರಜನಿಕಾಂತ್ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ನೇಹವನ್ನು ನೆನಪಿಸಿಕೊಂಡಿದ್ದಾರೆ. "ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೀಶ್‌ ಅಗಲಿಕೆ ನನಗೆ ಅತೀ ದುಃಖ ತಂದಿದೆ. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ, ದೊಡ್ಡ ನಿರ್ಮಾಪಕ ಹಾಗೂ ನಿರ್ದೇಶಕರಾಗಿ ಬೆಳೆದರು ಹಾಗೂ ಬೆಳೆಸಿದರು. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ರಜನಿಕಾಂತ್ ಬರೆದುಕೊಂಡಿದ್ದಾರೆ.

     

     

  • 15:11 PM

    Actor Dwarakish Wife: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಅಂಬುಜಾ 2021 ರಲ್ಲಿ ಏಪ್ರಿಲ್‌ 16 ರಂದು ನಿಧನರಾಗಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಸ್ವಗೃಹದಲ್ಲೇ ದ್ವಾರಕೀಶ್ ಪತ್ನಿ ವಿಧಿವಶರಾಗಿದ್ದರು. ಇದೀಗ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್‌ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.   
     

  • 14:38 PM

    Dwarakish Death news: ದ್ವಾರಕೀಶ್‌ ನಿಧನದ ಈ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದವರು ಮನೆಯತ್ತ ಬರುತ್ತಿದ್ದಾರೆ. ಆಪ್ತ ಸ್ನೇಹಿತ ಭಾರ್ಗವ ಕೂಡ ದ್ವಾರಕೀಶ್ ಮನೆಯ ಬಳಿ ಬಂದಿದ್ದಾರೆ. ನಾನು ಮೊದಲು ದ್ವಾರಕೀಶ್ ಅವರನ್ನು ನೋಡಬೇಕು ಎನ್ನುತ್ತಲೇ ಮನೆಯೊಳಗೆ ತೆರಳಿದ್ದಾರೆ. 

  • 14:04 PM

    Dwarakish Funeral Live : ದ್ವಾರಕೀಶ ಅವರ ಅಂತ್ಯಕ್ರಿಯೆ ಬುಧವಾರ ಅಂದರೆ ಏಪ್ರಿಲ್‌ 17 ರಂದು ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್‌ನಲ್ಲಿ ನಡೆಯಲಿದೆ. ಬುಧವಾರ ಬೆಳಿಗ್ಗೆ 7.30ರ ನಂತರ ರವೀಂದ್ರ ಕಲಾಕ್ಷೆತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. 

  • 13:51 PM

    ದ್ವಾರಕೀಶ್‌ ಅವರಿಗೆ ನಿನ್ನೆ ರಾತ್ರಿ ಲೂಸ್‌ ಮೋಷನ್‌ ಸಮಸ್ಯೆ ಕಾಡಿತ್ತಂತೆ. ಇದರಿಂದಾಗಿ ನಿದ್ದೆ ಕೂಡ ಸರಿಯಾಗಿ ಮಾಡಿರಲಿಲ್ಲವಂತೆ. ಬೆಳಗ್ಗೆ 2 ಗಂಟೆ ಸುಮಾರಿಗೆ ಕಾಫಿ ಕುಡಿದು ಮಲಗಿದ ದ್ವಾರಕೀಶ್‌ ಮರಳಿ ಎದ್ದೇಳಲಿಲ್ಲ ಎಂದು ದ್ವಾರಕೀಶ್‌ ಪುತ್ರ ತಿಳಿಸಿದ್ದಾರೆ.

Trending News