Karnataka Lok Sabha Election Results 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಅವರು ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಎದುರು ಸ್ಪರ್ಧಿಸಿದ್ದ ಗೀತಾ ಶಿವರಾಜ್‌ಕುಮಾರ್‌ ಅವರು ಬರೋಬ್ಬರಿ 2,43,715 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.


COMMERCIAL BREAK
SCROLL TO CONTINUE READING

ಬಿ.ವೈ.ರಾಘವೇಂದ್ರ 7,78,721 ಮತಗಳನ್ನು ಗಳಿಸಿದ್ದರೆ, ಗೀತಾ ಶಿವರಾಜ್‌ಕುಮಾರ್‌ ಸಖತ್‌ ಪೈಪೋಟಿ ನೀಡಿ 5,35,006 ಮತಗಳನ್ನು ಪಡೆದುಕೊಂಡಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.


ಇದನ್ನೂ ಓದಿ: Allu arjun : ಇವರೇ ನೋಡಿ ʼಪುಷ್ಪರಾಜ್‌ʼ ನಟ ಅಲ್ಲು ಅರ್ಜುನ್ ಎರಡನೇ ಹೆಂಡತಿ..!


ಗೀತಾರ ಪರ ಸ್ವತಃ ಶಿವಣ್ಣ ಸೇರಿದಂತೆ ಸಿನಿಮಾ ತಾರೆಯರು ರೋಡ್‌ಗಿಳಿದು ಪ್ರಚಾರ ನಡೆಸಿದರೂ ಪ್ರಯೋಜನವಾಗಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಪತ್ನಿ ಸೋಲು ಕಂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿರುವ ನಟ ಶಿವರಾಜ್‌ಕುಮಾರ್‌ ಸೋಷಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. 


ಶಿವಣ್ಣ, ʼಫಲಿತಾಂಶ ನಮ್ಮ ಕಡೆಯಾಗದಿದ್ದರೂ ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ವಿಶ್ವಾಸವಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ಧನ್ಯವಾದಗಳು' ಎಂದು ಹೇಳಿದ್ದಾರೆ.


ಇದನ್ನೂ ಓದಿ: Kalki 2898 AD : ಪ್ರಭಾಸ್‌ ಅಭಿಮಾನಿಗಳಿಗೆ ಖುಷಿ ಸುದ್ದಿ..! ಕಲ್ಕಿ ಟ್ರೇಲರ್‌ ರಿಲೀಸ್‌ಗೆ ಡೇಟ್‌ ಫಿಕ್ಸ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.