ವಸಿಷ್ಠ ಸಿಂಹ ಅಭಿನಯದ "Love ಲಿ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ : ಜೂನ್ 14 ರಂದು ಚಿತ್ರ ತೆರೆಗೆ

ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಶ್ವಿನ್ ಕೆನ್ನೆಡಿ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಈ ಸಿನಿಮಾ ನಿರ್ಮಿಸಿದ್ದಾರೆ.   

Written by - Ranjitha R K | Last Updated : Jun 4, 2024, 11:26 AM IST
  • "Love ಲಿ" ಚಿತ್ರದ ಟ್ರೇಲರ್ ಬಿಡುಗಡೆ
  • ಟ್ರೇಲರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ
  • ವಸಿಷ್ಠ ಸಿಂಹ ಅಭಿನಯದ ಸಿನಿಮಾ
ವಸಿಷ್ಠ ಸಿಂಹ ಅಭಿನಯದ "Love ಲಿ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ : ಜೂನ್ 14 ರಂದು ಚಿತ್ರ ತೆರೆಗೆ title=

ಬೆಂಗಳೂರು :ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ "Love ಲಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಬ್  ಶೆಟ್ಟಿ ಟ್ರೇಲರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ ನಾನು "ಗೋಧಿ ಬಣ್ಣ ಸಾಧಾರಣ ಮೈಕಟ್ಟು" ಚಿತ್ರ ನೋಡಿ ವಸಿಷ್ಠ ಅವರ ಅಭಿನಯ ಹಾಗೂ ಕಂಠಕ್ಕೆ ಅಭಿಮಾನಿಯಾಗಿದ್ದೆ‌ ಎಂದು  ಹೇಳಿದ್ದಾರೆ.ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದ್ದು, ಚಿತ್ರ ಕೂಡಾ ಚೆನ್ನಾಗಿರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ : Mirjapur : 'ಮಿರ್ಜಾಪುರ' ಸೀಸನ್ 3 ಬಿಡುಗಡೆ ದಿನಾಂಕ ಘೋಷಣೆ

ಟ್ರೇಲರ್ ನೋಡಿದಾಗ ನಿಮಗೆ ಇದು ಆಕ್ಷನ್ ಚಿತ್ರ ನಾ? ಸೆಂಟಿಮೆಂಟ್ ಚಿತ್ರ ನಾ? ಎಂಬ ಪ್ರಶ್ನೆ ಮೂಡಬಹುದು.ಆದರೆ ಇದನೆಲ್ಲಾ ಟ್ರೇಲರ್ ನಲ್ಲಿ ತೋರಿಸಿದ್ದೇವೆ. ಸಿನಿಮಾದಲ್ಲಿ ಬೇರೆನೇ ಇದೆ. ಚಿತ್ರ ನೋಡುವಾಗ ನಿಮಗೆ ಉತ್ತರ ಸಿಗಲಿದೆ ಎಂದು ನಿರ್ದೇಶಕ ಚೇತನ್ ಕೇಶವ್ ಹೇಳಿದ್ದಾರೆ. ಚಿತ್ರ ಉತ್ತಮವಾಗಿ ಮೂಡಿಬರಲು ಚಿತ್ರತಂಡದ ಸಹಕಾರವೇ ಕಾರಣ ಎಂದು ಹೇಳಿದ್ದಾರೆ. 

"Love ಲಿ" ಚಿತ್ರದ ಆರಂಭದಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ಅದರಲ್ಲೂ ಇಂದು "ಕಾಂತಾರ"ದ ಮೂಲಕ ಇಡೀ ವಿಶ್ವವೇ ಕನ್ನಡದ ಕಡೆ ತಿರುಗಿ ನೋಡುವಂತೆ ಮಾಡಿದ ರಿಷಬ್ ಶೆಟ್ಟಿ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ ಎಂದು  ನಾಯಕ ವಸಿಷ್ಠ ಸಿಂಹ ಹೇಳಿದ್ದಾರೆ. 

ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಶ್ವಿನ್ ಕೆನ್ನೆಡಿ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಈ ಸಿನಿಮಾ ನಿರ್ಮಿಸಿದ್ದಾರೆ. 

ಇದನ್ನೂ ಓದಿ :  ವಿನೋದ್-ಸೋನಲ್ ಪ್ರೇಮಗೀತೆ… ಬಹುನಿರೀಕ್ಷಿತ ಮಾದೇವ ಸಿನಿಮಾದ ಮೊದಲ ಹಾಡು ರಿಲೀಸ್

ನಾಯಕಿ ಸ್ಟೆಫಿ ಪಟೇಲ್ ಸಹ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಹಿರಿಯ ನಟ ದತ್ತಣ್ಣ, ನಟಿ ನಂದು, ಸಮೀಕ್ಷ, ಬೇಬಿ  ವಂಶಿಕ ಹಾಗೂ ವಿತರಕರಾದ ಚಂದನ್ ಸುರೇಶ್, ಪೀಟರ್ (ಓವರ್ ಸೀಸ್) ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News