Love reddy Kannada move : ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಸಿನಿಮಾ ಲವ್ ರೆಡ್ಡಿ. ಟೈಟಲ್ ಹೇಳುವಂತೆ ಇದೊಂದು ಸುಂದರ ಪ್ರೇಮಕಥೆ ಜೊತೆಗೆ ಫ್ಯಾಮಿಲಿ ಎಮೋಷನಲ್ ಡ್ರಾಮಾ. ಈ ಸಿನಿಮಾ ಮೂಲಕ ಗಡಿನಾಡ ಪ್ರತಿಭೆ ಅಂಜನ್ ರಾಮಚಂದ್ರ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದು, ನಾಯಕಿಯಾಗಿ ಶ್ರಾವಣಿ ನಟಿಸಿದ್ದಾರೆ. ಈ ಹಿಂದೆ ಲವ್ ರೆಡ್ಡಿ ಸಿನಿಮಾದ ಫಸ್ಟ್ ಲುಕ್ ನ್ನು ನಟಸಿಂಹ ಬಾಲಯ್ಯ ಬಿಡುಗಡೆ ಮಾಡಿದ್ದರು. ಇದೀಗ ಫಸ್ಟ್ ಝಲಕ್ನ್ನು ಶಾಸಕ ಪ್ರದೀಪ್ ಈಶ್ವರ್ ಅನಾವರಣ ಮಾಡಿ ತಮ್ಮೂರಿನ ಸಿನಿಮೋತ್ಸಾಹಿಗಳಿಗೆ ಸಾಥ್ ಕೊಟ್ಟಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ಆಯೋಜಿಸಿತ್ತು. ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಅಂಜನ್ ರಾಮಚಂದ್ರ ನಮ್ಮ ಜಿಲ್ಲೆಯ ಹುಡುಗ. ಇನ್ಫೋಸಿಸ್ ನಾರಾಯಣ್ ಮೂರ್ತಿಯವರಿಗೆ ಜನ್ಮ ಕೊಟ್ಟ ಜಿಲ್ಲೆ ನಮ್ಮದು. ಎರಡು ಭಾರತ ರತ್ನ, ಎರಡು ಪದ್ಮಶ್ರೀ, ಒಂದು ಪದ್ಮಭೂಷಣ ಪಡೆದ ಜಿಲ್ಲೆ ನಮ್ಮದು. ಆರ್ ಆರ್ ಆರ್ ಸೇರಿದಂತೆ ದೊಡ್ಡ ದೊಡ್ಡ ಸಿನಿಮಾಗಳಿಗೆ ಸಾಹಿತ್ಯ ಬರೆಯುವ ವರದರಾಜು ಚಿಕ್ಕಬಳ್ಳಾಪುರ ಇದ್ದಾರೆ. ಇಂತಹ ಜಿಲ್ಲೆಯಿಂದ ಅಂಜನ್ ರಾಮಚಂದ್ರ ಹೀರೋ ಆಗಿ ಬರ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಈ ಸಿನಿಮಾವನ್ನು ಮಾಡಲಾಗಿದೆ. ಕನ್ನಡಿಗರು ಈ ಚಿತ್ರವನ್ನು ಆರಾಧಿಸಬೇಕು. ಹಾರೈಸಬೇಕು ಎಂದರು.
ಇದನ್ನೂ ಓದಿ: 90ರ ದಶಕದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟಿ ಯಾರು ಗೊತ್ತಾ..! ಇಂದು ಅವರ ತಂಗಿ ಬಿಗ್ಸ್ಟಾರ್
ನಾಯಕ ಅಂಜನ್ ಮಾತನಾಡಿ, ಈ ಸಿನಿಮಾ ಶುರುವಾಗುವ ಮೊದಲು ನಾನು ನಮ್ಮ ಡೈರೆಕ್ಟರ್ ಸಾಕಷ್ಟು ಸ್ಟ್ರಗಲ್ ಮಾಡಿದ್ದೇವೆ. ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇವೆ. ಕಷ್ಟಪಟ್ಟು ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ತುಂಬಾ ಜನ ಈ ಚಿತ್ರಕ್ಕೆ ಬೆಂಬಲ ಕೊಟ್ಟಿದ್ದಾರೆ. ಈ ಸಿನಿಮಾ ಮೂಲಕ ತುಂಬಾ ಜನ ಇಂಡಸ್ಟ್ರೀಗೆ ಮೊದಲ ಹೆಜ್ಜೆ ಇಡುತ್ತಿದ್ದಾರೆ ಎಂದರು.
ನಿರ್ದೇಶಕ ಸ್ಮರಣ್ ರೆಡ್ಡಿ ಮಾತನಾಡಿ, ನಾನು ಮೂಲತಃ ಹೈದ್ರಾಬಾದ್. ಲವ್ ರೆಡ್ಡಿ ಸಿನಿಮಾ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದೆ. ಈ ಚಿತ್ರದ ಮೂಲಕ ನನ್ನ ಕನಸು ನನಸಾಗಿದೆ. ಕಳೆದ ಏಳು ವರ್ಷದಿಂದ ಸಿನಿಮಾ ಇಂಡಸ್ಟ್ರೀಯಲ್ಲಿ ಕೆಲಸ ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ಈ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಬೆಂಬಲ ಕೊಟ್ಟ ಎಲ್ಲರಿಗೂ ಧನ್ಯವಾದ ಎಂದರು.
ಇದನ್ನೂ ಓದಿ: ಇಂದಿನಿಂದ ಶುರುವಾಗ್ತಿದೆ ಬಿಗ್ ಬಾಸ್ ಕನ್ನಡ 10: JioCinema ದಲ್ಲಿವೆ ಹತ್ತು ಹಲವು ವಿಶೇಷಗಳು!
ಲವ್ ರೆಡ್ಡಿ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಇಂಪ್ರೆಸ್ ಆಗಿ ಮೂಡಿಬಂದಿದ್ದು, ಗಾಢವಾದ ಪ್ರೇಮಛಾಯೆ ಕಾಣ್ತಿದೆ. ಲವ್ ಅಟ್ ಫಸ್ಟ್ ಸೈಟ್ ಎನ್ನುವಾಗ ಹಾಗೇ ನಾಯಕಿ ನೋಡಿ ಪ್ರೀತಿಯಲ್ಲಿ ಬೀಳುವ ನಾಯಕ ಲವ್ ರೆಡ್ಡಿ ಝಲಕ್ ಹೈಲೆಟ್. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಮರಣ್ ರೆಡ್ಡಿ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ.
ಅಂಜನ್ ರಾಮಚಂದ್ರ ಒಂದಷ್ಟು ಕಿರುಚಿತ್ರ ಹಾಗೂ ವೆಬ್ ಸೀರೀಸ್ ಗಳಲ್ಲಿ ನಟಿಸಿರುವ ಅನುಭವವಿದೆ. ನಿರ್ದೇಶಕ ಸ್ಮರಣ್ ಜೊತೆಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದು, ಇದೀಗ ನಾಯಕನಾಗಿ ಚೊಚ್ಚಲ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಹೊಸ ಕನಸ್ಸಿನೊಂದಿಗೆ ಅಂಜನ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಲವ್ ರೆಡ್ಡಿ ಸಿನಿಮಾ ಮೂಲಕ ಒಂದಷ್ಟು ಯುವ ಸಿನಿಮೋತ್ಸಾಹಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ̤
ಇದನ್ನೂ ಓದಿ:80-90ರ ದಶಕದಲ್ಲಿ ಖ್ಯಾತಿ ಗಳಿಸಿದ ಭಾರತದ ಟಾಪ್ ಬಾಲಿವುಡ್ ನಟಿ ರೇಖಾ ಆಸ್ತಿ ಇಷ್ಟು ಕೋಟಿಯೇ?
ಚಿಕ್ಕಬಳ್ಳಾಪುರ ಸುತ್ತಮುತ್ತ ಲವ್ ರೆಡ್ಡಿ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಸೆಹೇರಿ ಸ್ಟುಡಿಯೋ, ಎಂಜಿಆರ್ ಫಿಲಂಸ್, ಗೀತಾಂಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುನಂದಾ ಬಿ ರೆಡ್ಡಿ, ಮದನ್ ಗೋಪಾಲ್ ರೆಡ್ಡಿ, ಪ್ರಭಂಜನ್ ರೆಡ್ಡಿ, ಹೇಮಲತಾ ರೆಡ್ಡಿ, ನಾಗರಾಜ್ ಬೀರಪ್ಪ ನಿರ್ಮಾಣ ಮಾಡಿದ್ದಾರೆ. ಪ್ರಿನ್ಸ್ ಹೆನ್ರಿ ಸಂಗೀತ ಸಂಯೋಜನೆ, ಅಷ್ಕರ್ ಅಲಿ ಛಾಯಾಗ್ರಾಹಣ, ಬಾಹುಬಲಿಯ ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಲವ್ ರೆಡ್ಡಿ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.