ನೆನಪಿರಲಿ ಪ್ರೇಮ್ ಪಾತ್ರಗಳ ಆಯ್ಕೆಯಲ್ಲಿ ವಿಭಿನ್ನವಾಗಿ ಕಾಣಿಸ್ತಾರೆ. ಬರೋ ಎಲ್ಲಾ ಪಾತ್ರಗಳನ್ನೂ ಅವರು ಒಪ್ಪಿಕೊಳ್ಳುವುದಿಲ್ಲ. ಅಳೆದು ತೂಗಿ ಪ್ರೇಕ್ಷಕರಿಗೆ ಇಷ್ಟವಾಗುವ ಸಿನಿಮಾಗಳನ್ನೇ ಮಾಡುತ್ತಾ ಬಂದಿದ್ದಾರೆ. ಈಗ ಪ್ರೇಮ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ ಸ್ಪಾರ್ಕ್ ಚಿತ್ರಕ್ಕೆ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ.
ಇದನ್ನೂ ಓದಿ: 'ಹುಡುಗರು' ಸಿನಿಮಾ ನಟಿಯ ಅದ್ಧೂರಿ ಮದುವೆ... ಇಲ್ಲಿವೆ ನೋಡಿ ಫೋಟೋಸ್
ಸ್ಪಾರ್ಕ್ ಚಿತ್ರದಲ್ಲಿ ನಿರಂಜನ್ ಹೀರೋ. ಹಾಗಿದ್ದರೇ ಪ್ರೇಮ್ ಪಾತ್ರವೇನು? ಗೆಸ್ಟ್ ರೋಲ್‌ನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರಾ? ಅಲ್ಲ. ಬದಲಾಗಿ ಒಂದು ವಿಶಿಷ್ಟ ಪಾತ್ರದಲ್ಲಿ ನೆನಪಿರಲಿ ಪ್ರೇಮ್ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಲವ್ಲಿ ಸ್ಟಾರ್ ಗೊಂದು ಸ್ಪೆಷಲ್ ಪಾತ್ರ ಡಿಸೈನ್ ಮಾಡಿದ್ದಾರೆ. ಹಿಂದೆಂದೂ ಕಾಣದ ಲುಕ್ ನಲ್ಲಿ ಪ್ರೇಮ್ ನಿಮಗೆ ಕಾಣಿಸ್ತಾರೆ. ಸ್ಪೆಷಲ್ ಪಾತ್ರವನ್ನು ಅವರಿಗಾಗಿ ಮಹಾಂತೇಶ್ ಹೆಣೆದಿದ್ದು, ಹೀಗಾಗಿ ಪ್ರೇಮ್ ಕೂಡ ಇಷ್ಟಪಟ್ಟು ಚಿತ್ರ ಮಾಡಲು ಮುಂದಾಗಿದ್ದಾರೆ. ತಮ್ಮ ಇಷ್ಟುವರ್ಷದ ಪಯಣದ ಅನುಭವಗಳನ್ನು ಇಟ್ಟುಕೊಂಡು ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಎಲ್ಲರ ಪಾತ್ರಗಳನ್ನು ವಿಶೇಷವಾಗಿ ರೂಪಿಸಿದ್ದಾರೆ.
ಜೇಮ್ಸ್, ಭರಾಟೆ, ಕನಕ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ದುಡಿದಿರುವ ಡಿ.ಮಹಾಂತೇಶ್ ಹಂದ್ರಾಳ್ ಸ್ಪಾರ್ಕ್ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚಿತ್ರದಲ್ಲಿ ನಿರಂಜನ್ ಸುಧೀಂದ್ರ ಪತ್ರಕರ್ತನಾಗಿ ನಟಿಸುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ.
ಇದನ್ನೂ ಓದಿ: ರಾತ್ರಿ ಹೊತ್ತು ಊಟದಲ್ಲಿ ಈ ತರಕಾರಿ ತಿಂದರೆ ಸಾಕು.. ಬೆಳಗಾಗುವಷ್ಟರಲ್ಲೇ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್ !
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಪಾರ್ಕ್ ಚಿತ್ರ ಡಾ.ಗರಿಮಾ ಅವಿನಾಶ್ ವಸಿಷ್ಠ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಮಧು ಸಂಕಲನ ಈ ಚಿತ್ರಕ್ಕಿದೆ. ಸದ್ಯ ಸ್ಪಾರ್ಕ್ ಶೂಟಿಂಗ್ ಭರದಿಂದ ಸಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.