ಬೆಂಗಳೂರು : ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ಕಣ್ಣಪ್ಪ ಸಿನಿಮಾ.ಈಗಾಗಲೇ ಸರಣಿ ಸ್ಟಾರ್‌ ಕಲಾವಿದರನ್ನೇ ಒಳಗೊಂಡಿರುವ ಕಣ್ಣಪ್ಪ ಸಿನಿಮಾ ಸದ್ಯ ಶೂಟಿಂಗ್‌ ಜತೆಗೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನೂ ಮುಂದುವರಿಸಿದೆ. ಜತೆಗೆ ಈಗಾಗಲೇ ಬಿಡುಗಡೆ ಆಗಿರುವ ಟೀಸರ್‌ ಸಹ ನೋಡುಗರ ಹುಬ್ಬೇರಿಸಿದೆ.ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ವಿಷ್ಣು ಮಂಚು ಕಣ್ಣಪ್ಪನಾಗಿ ತಮ್ಮ ಖದರ್‌ ತೋರಿಸಲಿದ್ದಾರೆ. ಇದೀಗ ಇದೇ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಮಧುಬಾಲ ಅವರ ಲುಕ್‌ ಅನಾವರಣ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ನಟಿ ಮಧುಬಾಲಾ ಕಣ್ಣಪ್ಪ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಈ ಹಿಂದೆಯೇ ಗೊತ್ತಿದ್ದ ವಿಚಾರ.ಆದರೆ,ಅವರ ಪಾತ್ರ ಹೇಗಿರಲಿದೆ ಎಂಬ ಬಗ್ಗೆ ಈ ವರೆಗೂ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿರಲಿಲ್ಲ.ಇದೀಗ ಮಧುಬಾಲ ಅವರ ಪಾತ್ರ ಪರಿಚಯದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.ಕಣ್ಣಪ್ಪ ಚಿತ್ರದಲ್ಲಿ ಪನ್ನಗ ಹೆಸರಿನ ಖಡಕ್‌ ಪಾತ್ರದಲ್ಲಿ ಮಧುಬಾಲ ಮಿಂಚು ಹರಿಸಲಿದ್ದಾರೆ.ಕೈಯಲ್ಲಿ ಕತ್ತಿಹಿಡಿದು ಶತ್ರುಗಳ ಸಂಹಾರಕ್ಕೆ ನಿಂತಂತಿದೆ ಮಧು ಅವರ ಫಸ್ಟ್‌ ಲುಕ್‌.


ಇದನ್ನೂ ಓದಿ :   ಸ್ಟಾರ್ ನಟನ ಮಗನೊಂದಿಗೆ ಜೊತೆ ಪ್ರೀತಿಯಲ್ಲಿ ಬಿದ್ದ ಕೀರ್ತಿ ಸುರೇಶ್! ಸೌತ್‌ ಬ್ಯೂಟಿ ಹೃದಯ ಕದ್ದವರಾರು ಗೊತ್ತೇ?


ಬೇಡ ಕುಲದ ನಾಯಕಿಯಾಗಿ ಮಧು ಅವರ ಪಾತ್ರ ಕಣ್ಣಪ್ಪ ಚಿತ್ರದಲ್ಲಿ ಸಾಗಲಿದೆ. ಮಧುಬಾಲ ಅವರ ಪಾತ್ರ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬುದು ಚಿತ್ರತಂಡ ಭರವಸೆಯ ಮಾತುಗಳು.ಇನ್ನು ಈಗಾಗಲೇ ಕಣ್ಣಪ್ಪ ಚಿತ್ರದ ಟೀಸರ್‌ ಜಾಗತಿಕ ಮಟ್ಟದಲ್ಲಿಯೂ ಕ್ರೇಜ್‌ ಸೃಷ್ಟಿಸಿದೆ.ಇತ್ತೀಚಿನ ಕಾನ್‌ ಸಿನಿಮೋತ್ಸವದಲ್ಲಿ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿ,ಜಾಗತಿಕ ಪ್ರೇಕ್ಷಕರ ಗಮನ ಸೆಳೆದಿತ್ತು. 


ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆ ಎಂದು ಟೀಸರ್‌ ಬಿಡುಗಡೆ ಸಂದರ್ಭದಲ್ಲಿ ವಿಷ್ಣು ಮಂಚು ಹೇಳಿಕೊಂಡಿದ್ದರು. ಹಾಗಾಗಿಯೇ ಕುತೂಹಲ ದುಪ್ಪಟ್ಟಾಗಿದೆ.  


ಇದನ್ನೂ ಓದಿ :   ಗಾಸಿಪ್ ಅಲ್ವೇ ಅಲ್ಲ.. ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ನಟಿ ರಶ್ಮಿಕಾ ಮಂದಣ್ಣ! ಯಾವ ಸಿರೀಯಲ್‌ ಗೊತ್ತಾ?


ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಶರತ್‌ಕುಮಾರ್, ಮಧುಬಾಲ, ಕಾಜಲ್‌ ಅಗರ್‌ವಾಲ್‌ ಸೇರಿ ಬಹು ತಾರಾಗಣವೇ ಇದೆ. ಮಗನ ಚಿತ್ರವನ್ನು ಸ್ವತಃ ತಂದೆ ಮೋಹನ್ ಬಾಬು ನಿರ್ಮಿಸುತ್ತಿರುವ ಈ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಡಿಸೆಂಬರ್‌ನಲ್ಲಿ ಕಣ್ಣಪ್ಪ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡಲು ಪ್ಲಾನ್‌ ಮಾಡಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.