Mafia Teaser: ಸಾಲು ಸಾಲು ಸಿನಿಮಾಗಳಲ್ಲಿ ಬಿಸಿಯಾಗಿರುವ ನಟ ಪ್ರಜ್ವಲ್‌ ದೇವರಾಜ್‌ ಹಾಗೂ ನಟಿ ಪ್ರಭುದೇವ ಅಭಿನಯದ ಅಭಿನಯದ ಮಾಫಿಯಾ ಸಿನಿಮಾದ ಅಪ್ಡೇಟ್‌ ಸಿಕ್ಕಿದ್ದು, ಡೈನಾಮಿಕ್‌ ಪ್ರಿನ್ಸ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮಾಫಿಯಾ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೇ ವರ್ಷ ಚಿತ್ರ ತೆರೆಮೇಲೆ ಅಪ್ಪಳಿಸೋಕೆ ಸಜ್ಜಾಗುತ್ತಿದೆ.ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ.


COMMERCIAL BREAK
SCROLL TO CONTINUE READING

ಮಾಫಿಯಾ ಸಿನಿಮಾದ ಟೀಸರ್‌ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದ್ದು, ಇದೇ ನವೆಂಬರ್ 29ಕ್ಕೆ ಚಿತ್ರದ ಟೀಸರ್ ರಿಲೀಸ್ ಬಿಡುಗಡೆಯಾಗಲಿದೆ. ಇದೊಂದು ಡಿಫರೆಂಟ್ ಚಿತ್ರವಾಗಿದ್ದು, ಚಿತ್ರದ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಾಗುತ್ತಿದ್ದು, ಸಿನಿಮಾ ಭಾಗವಾದ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್. ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ  ಅಭಿನಯದ ಚಿತ್ರಕ್ಕೆ ಲೋಹಿತ್ ಹೆಚ್  ಆಕ್ಷನ್‌ ಕಟ್‌ ಹೇಳಿದ್ದಾರೆ.  


ಇದನ್ನೂ ಓದಿ: ಮೊಟ್ಟ ಮೊದಲ ಬಾರಿಗೆ ಲಿಡ್ಕರ್ ಗೆ ಬ್ರ್ಯಾಂಡ್ ಅಂಬಾಸಿಡರ್ ಆದ ಡಾಲಿ ಧನಂಜಯ


ಮಾಫಿಯಾ ಸಿನಿಮಾದ ಶೂಟಿಂಗ್‌ ಪೂರ್ಣಗೊಂಡಿದ್ದು, ಈ ಚಿತ್ರಕ್ಕೆ ನಟ, ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ಸಾಧುಕೋಕಿಲರವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್‌ ಕಾರ್ಯ ಮುಕ್ತಾಯವಾಗಿದೆ.
ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದ್ದು, ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ.  


ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಹಾಗೆಯೇ ಈ ಸಿನಿಮಾದಲ್ಲಿ ನಾಲ್ಕು ಹಾಡುಗಳಿದ್ದು, ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ಹಾಗೂ ಅದಿತಿ ಸೇರಿ ಸಹಕಲಾವಿದರಾಗಿ ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ