Gaushala: ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ತಾಯಿಯಂತೆ ನಮ್ಮನ್ನು ಪೊರೆಯುವ ಗೋಮಾತೆಯ ಋಣವನ್ನು ತೀರಿಸಲು ಖಂಡಿತಾ ಸಾಧ್ಯ ಎನ್ನುತ್ತಾರೆ ಬೆಂಗಳೂರಿನ ವಿಜಯನಗರ ಮಾರುತಿ ಮೆಡಿಕಲ್ಸ್‌ನ ಗೋಸೇವಕ ಮಹೇಂದ್ರ ಮನ್ನೋತ್.
ತಮ್ಮ ವ್ಯಾಪಾರದಲ್ಲಿ ಸಂಗ್ರಹಿಸಿದ ಬಹುಪಾಲು ಹಣವನ್ನು ಗೋವುಗಳ ರಕ್ಷಣೆಗೆ ಪಾಲನೆಗಾಗಿ ವ್ಯಯಿಸುತ್ತಿರುವ ಕುಟುಂಬವೆಂದರೆ ಅದು ಈ ಮಹೇಂದ್ರ ಮನ್ನೋತ್ ರವರ ಕುಟುಂಬ.
ಕಳೆದ ಹದಿನಾಲ್ಕು ವರ್ಷಗಳಿಂದ ಪ್ರತೀ ವರ್ಷ ಗೋಶಾಲೆಗಳಿಗೆ ಲಕ್ಷಾಂತರ ರೂಪಾಯಿಗಳನ್ನು ದೇಣಿಗೆ ನೀಡುತ್ತಾರೆ. ಈ ವರ್ಷ ಅವರು ನಾಡಿನ ವಿವಿಧ ಗೋಶಾಲೆಗಳಿಗೆ 51 ಲಕ್ಷ ರೂಪಾಯಿಗಳನ್ನು ದಾನ ಮಾಡಿದ್ದಾರೆ.
ಇದನ್ನೂ ಓದಿ: ಶ್ರೀವಾರಿ ದೇವಸ್ಥಾನದಲ್ಲಿ ಶ್ರೀಲೀಲಾ ಕೆನ್ನೆ ಮುಟ್ಟಿದ ಖ್ಯಾತ ಗಾಯಕ.. ನೆಟ್ಟಿಗರಿಂದ ಟ್ರೋಲ್
ಗೋಶಾಲೆಗಳಿಗೆ ಅಗತ್ಯಗಳ ತಕ್ಕಂತೆ ಹಣವನ್ನು ಒದಗಿಸಲಾಗಿದೆ. ಇದರ ಹಿಂದಿನ ಕುತೂಹಲಕಾರಿ ಅಂಶವೆಂದರೆ ನಾಡಿನಲ್ಲಿ ಅಕ್ರಮವಾಗಿ ಸಾಗಿಸಲ್ಪಡುವ ಗೋವುಗಳನ್ನು ಕಾನೂನಾತ್ಮಕವಾಗಿ ರಕ್ಷಿಸಿದ ನಂತರ ಆ ಗೋವುಗಳನ್ನು ಈ ಗೋಶಾಲೆಗಳಿಗೆ ತಂದು ಬಿಡಲಾಗುತ್ತದೆ.
ಅಂತಹ ಗೋವುಗಳನ್ನು ಪೊರೆಯಲು ಗೋಶಾಲೆಗಳಿಗೆ ಆರ್ಥಿಕ ಶಕ್ತಿಬೇಕಲ್ಲವೇ ? ಅಂಥ ಶಕ್ತಿಯನ್ನು ತುಂಬವ ಕೆಲಸವನ್ನು ಮಹೇಂದ್ರ ಮುನ್ನೋತ್ ಅವರು ತಮ್ಮ ಮಾತಾಪಿತೃಗಳ ಪುಣ್ಯಸ್ಮರಣೆಯ ಹೆಸರಿನಲ್ಲಿ ಈ ಸೇವೆಯನ್ನು ಈ ಕುಟುಂಬವು ಮಾಡಿಕೊಂಡು ಬಂದಿದೆ.
ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ 20ಕ್ಕೂ ಹೆಚ್ಚು ಗೋಶಾಲೆಯ ಮುಖ್ಯಸ್ಥರನ್ನು ಆಹ್ವಾನಿಸಿ ಅವರಿಗೆ ಚೆಕ್ ರೂಪದಲ್ಲಿ ಹಣವನ್ನು ನೀಡಲಾಗಿದೆ. ಇವರೊಂದಿಗೆ ಮಹೇಂದ್ರ ಅವರ ಧರ್ಮಪತ್ನಿ ಸುರಕ್ಷಾ ಅಲ್ಲದೇ ಇಡೀ ಕುಟುಂಬ ಹಾಜರಿದ್ದು ವೃಕ್ಷಾರೋಹಣ ಹೆಸರಿನಲ್ಲಿ ಗೋಶಾಲೆಯಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರೊಂದಿಗೆ ಗೋಪೂಜೆಯನ್ನೂ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ದರ್ಶನ್ ಜೊತೆ ಈ ಸ್ಟಾರ್ ನಟಿಗೂ ಇತ್ತಾ ಸಂಬಂಧ? ನಿರ್ದೇಶಕ ಓಂ ಪ್ರಕಾಶ್ ರಾವ್ ಬಿಚ್ಚಿಟ್ರು ಆ ಗುಟ್ಟು !
ಈ ಕಾರ್ಯವನ್ನೂದ್ದೇಶಿಸಿ ಮಾತನಾಡಿದ ಮಹೇಂದ್ರ ಮನ್ನೋತ್ "ನಮ್ಮ ತಂದೆತಾಯಿಯ ಋಣವನ್ನು ನಾವುಗಳು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಅಲ್ಲದೇ ಗೋವು ಎಂಬುದು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ.
ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು. ಅಂತಹ ಗೋವನ್ನು ಉಳಿಸಿದರೆ ಬರಿಯ ಗ್ರಾಮ ಮಾತ್ರವಲ್ಲ ಇಡೀ ದೇಶ ಸಂವೃದ್ಧಿ ಸಂಪದ್ಭರಿತ ಭೂಮಿಯಾಗುತ್ತದೆ. ಈ ನಂಬಿಕೆಯನ್ನು ಪ್ರತಿಯೊಬ್ಬ ಭಾರತೀಯನೂ ಅರ್ಥೈಸಿಕೊಳ್ಳಬೇಕಿದೆ" ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.