ʼಒಂಟಿ ಅಲ್ಲ ನಾನೀಗʼ ಲವ್ ಸಿನಿಮಾದ ಎರಡನೇ ಹಾಡು ರಿಲೀಸ್...! ಕೇಳಿ
ಮಹೇಶ ಸಿ ಅಮ್ಮಳ್ಳಿದೊಡ್ಡಿ ನಿರ್ದೇಶನಕ ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಒಂಟಿ ಅಲ್ಲ ನಾನೀಗ ಹಾಡು ಎಂಬ ಮೆಲೋಡಿ ಸಾಂಗ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಸಿನಿ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ.
Love kannada movie : ʼಓʼ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ʼಲವ್ʼ. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ.
ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ ಹಾಕಿದ್ದಾರೆ. ಪ್ರೇಮಿಗಳ ನಡುವಿನ ಮಧುರ ಪ್ರೇಮಗೀತೆಯಾಗಿರುವ ಈ ಹಾಡಿನಲ್ಲಿ ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ‘ಬುಕ್ ಮೈ ಶೋ’ ರೇಟಿಂಗ್ ನಲ್ಲಿ ‘ಹಾಸ್ಟೆಲ್ ಹುಡುಗರಿಗೆʼ ಡಿಮ್ಯಾಂಡೋ ಡಿಮ್ಯಾಂಡ್..
ಶ್ರೀಕಾಲ ಭೈರವೇಶ್ವರ ಮೂವೀ ಮೇಕರ್ಸ್ ನಡಿ ದಿವಾಕರ್.ಎಸ್ ಲವ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಮೂಲಕ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಹಲವರು ಚಿತ್ರದ ಭಾಗವಾಗಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.