Shine Tom Chacko in Salaar 2 : ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಸಲಾರ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಎಷ್ಟು ದೊಡ್ಡ ಬ್ಲಾಕ್ ಬಸ್ಟರ್ ಆಯಿತು ಎಂದು ಹೇಳಬೇಕಾಗಿಲ್ಲ. ಈ ಚಿತ್ರದ ಮುಂದುವರಿದ ಭಾಗವಾಗಿ, ಶೀಘ್ರದಲ್ಲೇ ತೆರೆಗೆ ಬರಲಿರುವ ಸಲಾರ್ ಶೌರ್ಯಾಂಗ ಪರ್ವಂ ಮೇಲೆ ನಿರೀಕ್ಷೆಗಳು ಹೆಚ್ಚಾಗುತ್ತಿವೆ. 


COMMERCIAL BREAK
SCROLL TO CONTINUE READING

ಸಲಾರ್ 2 ಚಿತ್ರವು ಸಲಾರ್ ಚಿತ್ರದ ಎರಡನೇ ಭಾಗವಾಗಿದೆ. ಸಲಾರ್‌ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 700 ಕೋಟಿ ಗಳಿಕೆ ಕಂಡಿತ್ತು. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಪ್‌ಡೇಟ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಇದನ್ನೂ ಓದಿ: ಹಾಸಿಗೆಯ ಮೇಲೆ ಬೆಳದಿಂಗಳ ಬಾಲೆ..! ʼಖುಷಿʼ ಫೊಟೋಸ್‌ ನೋಡಿ


ಸಲಾರ್ ಚಿತ್ರದಂತೆಯೇ ಸಲಾರ್ 2 ಚಿತ್ರ ಕೂಡ ಬಹು ತಾರಾ ಬಳಗದೊಂದಿಗೆ ಪ್ರೇಕ್ಷಕರ ಮುಂದೆ ಬರಲಿದೆ. ಇದೀಗ ಈ ಚಿತ್ರತಂಡಕ್ಕೆ ಮತ್ತೊಬ್ಬ ಪ್ಯಾನ್ ಇಂಡಿಯಾ ಸ್ಟಾರ್‌ ಆಯ್ಕೆಯಾಗಿದ್ದಾರೆ. ಅವರು ಬೇರೆ ಯಾರೂ ಅಲ್ಲ ಶೈನ್ ಟಾಮ್ ಚಾಕೋ. ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರು ನಾನಿ ದಸರಾ ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೃು. ಈ ಚಿತ್ರದಲ್ಲಿ ಶೈನ್‌ ಪ್ರಭಾಸ್ ಎದುರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 


ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್‌ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದೆ. ರವಿ ಬಸ್ರೂರು ಸಂಗೀತ ನೀಡುತ್ತಿರುವ ಈ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಬಾಬಿ ಸಿಂಹ, ಜಗಪತಿ ಬಾಬು, ಶ್ರೀಯಾ ರೆಡ್ಡಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.