ಬಹುನಿರೀಕ್ಷಿತ ಕೋಟಿ ಸಿನಿಮಾದ 'ಮನ ಮನ' ಲಿರಿಕಲ್ ವಿಡಿಯೋ ಬಿಡುಗಡೆ: ಭರ್ಜರಿ ಪ್ರತಿಕ್ರಿಯೆ

ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ.

Written by - YASHODHA POOJARI | Last Updated : Jun 12, 2024, 08:36 PM IST
    • ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ
    • ಇದೇ ಶುಕ್ರವಾರ 'ಕೋಟಿ' ಸಿನಿಮಾ ಬಿಡುಗಡೆಯಾಗಲಿದೆ
    • ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ
ಬಹುನಿರೀಕ್ಷಿತ ಕೋಟಿ ಸಿನಿಮಾದ 'ಮನ ಮನ' ಲಿರಿಕಲ್ ವಿಡಿಯೋ ಬಿಡುಗಡೆ: ಭರ್ಜರಿ ಪ್ರತಿಕ್ರಿಯೆ title=
Mana Mana Lyrical Video

Sandalwood Cinema Update: ಇದೇ ಶುಕ್ರವಾರ 'ಕೋಟಿ' ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರದ 'ಮನ ಮನ' ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ. ಥ್ರಿಲ್ಲರ್ ಡ್ರಾಮ ಜಾನರ್’ನ ಈ ಸಿನಿಮಾದಲ್ಲಿ ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ.

ಇದನ್ನೂ ಓದಿ: ಅನುಷ್ಕಾಗೂ ಮುನ್ನ ವಿರಾಟ್’ನ್ನು ಹುಚ್ಚರಂತೆ ಪ್ರೀತಿಸುತ್ತಿದ್ದಳು ಈ ನಟಿ! ಕೊಹ್ಲಿ ಸ್ಟೈಲ್’ಗೆ ಫಿದಾ ಆಗಿದ್ದ ಆಕೆ ಯಾರು ಗೊತ್ತಾ?

'ಮನ ಮನ' ಹಾಡಿನ ಲಿರಿಕಲ್ ವಿಡಿಯೋದಲ್ಲಿ ಬರುವ ವಿಡಿಯೋ ತುಣುಕು ಇನ್ಸ್ಟಾಗ್ರಾಮ್ ರೀಲ್, ವಾಟ್ಸಾಪ್ ಸ್ಟೋರಿಯಾಗಿ ಎಲ್ಲೆಡೆ ಓಡಾಡ್ತಾ ಇದೆ. ಇಬ್ಬರ ನಡುವೆ ಪ್ರೀತಿ ಅರಳಿ ನಿಂತಾಗ ಬಹುವಚನದಿಂದ ಏಕವಚನಕ್ಕೆ ಬರುವ ಒಂದು ಸಂದರ್ಭ ಬಂದೇ ಬರುತ್ತದೆ. 'ನೀವು' ಅಂತ ಕರೆಯುತ್ತಿದ್ದವರು 'ನೀನು' ಅಂತ ಕರೆಯುವ ಸಮಯವದು. ಕೋಟಿಯ ಲೈಫಲ್ಲಿ ಬಂದ ಆ ಸಮಯ ಈ ವಿಡಿಯೋದಲ್ಲಿದೆ. ಎಲ್ಲರ ಲೈಫಲ್ಲೂ ಅಗಿರಬಹುದಾದ ಈ ಸಣ್ಣ ಕ್ಯೂಟ್ ಘಟನೆ ಇದೇ ಕಾರಣಕ್ಕೆ ಈ ಹಾಡಿನಲ್ಲಿ ಎಲ್ಲರಿಗೂ ಕನೆಕ್ಟ್ ಆಗುತ್ತಿದೆ.

ಕೋಟಿಯ ಬರಹಗಾರ ಮತ್ತು ನಿರ್ದೇಶಕರಾದ ಪರಮ್ ಅವರು "ಹುಡುಗಿಯೊಬ್ಬಳು ನೀವು ಅಂತ ಕರೆಯಬೇಡ ಅಂತ ತಾಕೀತು ಮಾಡಿದಾಗ ಸಾಮಾನ್ಯ ಹುಡುಗನೊಬ್ಬ ಎದುರಿಸಬಹುದಾದ ಸಂಕೋಚವನ್ನು ಧನಂಜಯ ಅಭಿನಯಿಸಿರುವ ರೀತಿ ನಿಮಗೆ ಇಷ್ಟ ಆಗಬಹುದು" ಎಂದು ಹೇಳಿದರು.

ಕೋಟಿಯ ಬುಕಿಂಗ್ಸ್ ಈಗ ಓಪನ್ ಆಗಿದ್ದು ಇಂದು ಸಂಜೆ ಟಿವಿ ಮತ್ತು ಸಿನಿಮಾ ತಾರೆಗಳಿಗೆ ಪ್ರೀಮಿಯರ್ ಶೋ ನಡೆಯಲಿದೆ. ಅದರ ಜತೆ ಸಾರ್ವಜನಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳಿವೆ. ನಾಳೆ ಮೈಸೂರಿನಲ್ಲೂ ಪೇಯ್ಡ್ ಪ್ರೀಮಿಯರ್ ಶೋಗಳು ಆಗಲಿದ್ದು ಧನಂಜಯ್ ಮತ್ತು ಸಿನಿಮಾತಂಡ ಮೈಸೂರಿನ ಸಿನಿಪ್ರೇಮಿಗಳ ಜತೆ 'ಕೋಟಿ' ನೋಡಲಿದೆ. ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 'ಕೋಟಿ' ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.

ಸಾಕಷ್ಟು ಸದ್ದು‌ ಮಾಡುತ್ತಿರುವ ಅಪ್ಪಟ ಕನ್ನಡ ಮಣ್ಣಿನ ಕತೆಯಾದ 'ಕೋಟಿ' ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಗೆಲ್ಲುವ ಭರವಸೆಯಾಗಿ ಕಂಡಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಾಮನ್.

ಇದನ್ನೂ ಓದಿ: Kangana Ranaut : ಸಂಸದೆಯಾಗಿ ಗೆದ್ದ ನಂತರ ಸದ್ಗುರುಗಳ ಆಶೀರ್ವಾದ ಪಡೆದ ಕಂಗನಾ, ಫೋಟೋಸ್ ವೈರಲ್!

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರ ಶುಕ್ರವಾರ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News