Manchu lakshmi troll : ತೆಲುಗು ಹಿರಿಯ ನಟ ಕಲೆಕ್ಷನ್ ಕಿಂಗ್ ಮೋಹನ್ ಬಾಬು ಅವರ ಮಗಳು ಮಂಚು ಲಕ್ಷ್ಮಿ ಟಾಲಿವುಡ್ ಖ್ಯಾತ ನಟಿಯರಲ್ಲಿ ಒಬ್ಬರು. ನಿರ್ಮಾಪಕಿಯಾಗಿಯೂ ಸಹ ಉತ್ತಮ ಹೆಸರು ಗಳಿಸಿದ್ದಾರೆ. ಸದ್ಯ ಸಿನಿಮಾಗಳತ್ತ ಗಮನ ಹರಿಸುತ್ತಿರುವ ಲಕ್ಷ್ಮಿ ವೆಬ್ ಸೀರಿಸ್ ಗಳಲ್ಲೂ ನಟಿಸುತ್ತಿದ್ದಾರೆ. ಇತ್ತೀಚೆಗೆ ಮಂಚು ಲಕ್ಷ್ಮಿಗೆ ಸಂಬಂಧಿಸಿದ ವಿಡಿಯೋವೊಂದು ಸಖತ್‌ ವೈರಲ್ ಆಗಿದೆ. 


COMMERCIAL BREAK
SCROLL TO CONTINUE READING

ಹೌದು.. ಕೆಲ ದಿನಗಳ ಹಿಂದೆ ದುಬೈನಲ್ಲಿ ಸೈಮಾ ಅವಾರ್ಡ್ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ದಕ್ಷಿಣ ಭಾರತದ ಹಲವು ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು. ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಮಂಚು ಲಕ್ಷ್ಮಿ ಕೂಡ ಭಾಗವಹಿಸಿದ್ದರು. ಈ ವೇಳೆ ಅವರು ವೇದಿಕೆಯ ಹೊರಗೆ ಸಂದರ್ಶಕಿಯೊಂದಿಗೆ ಮಾತನಾಡುತ್ತಿದ್ದಾಗ, ಒಬ್ಬ ವ್ಯಕ್ತಿ ಕ್ಯಾಮರಾಗೆ ಅಡ್ಡಲಾಗಿ ನಡೆದು ಹೋದ. ಇದರಿಂದ ಕೋಪಗೊಂಡು ನಟಿ ಆ ವ್ಯಕ್ತಿಯ ಬೆನ್ನಿಗೆ ಹೊಡೆದಿದ್ದಾಳೆ, ಆ ಬಳಿಕ ಮತ್ತೆ ಕ್ಯಾಮೆರಾಗೆ ಅಡ್ಡ ಬಂದ ಮತ್ತೊಬ್ಬ ವ್ಯಕ್ತಿಗೆ ಬೈದಿದ್ದಾರೆ.


ಕೊನೆಗೂ ಮದುವೆ ಬಗ್ಗೆ ಮೌನ ಮುರಿದ ನಟಿ ತ್ರಿಷಾ..! ಟ್ಟಿಟ್‌ ಮಾಡಿ ವಾರ್ನಿಂಗ್‌ ನೀಡಿದ್ದು ಯಾರಿಗೆ 


ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋಗೆ ನೆಟಿಜನ್‌ಗಳು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಇಂತಹ ಸಣ್ಣ ವಿಚಾರಕ್ಕೆ ಲಕ್ಷ್ಮಿ ಓವರ್ ಆ್ಯಕ್ಟ್ ಮಾಡುವ ಅಗತ್ಯವಿಲ್ಲ ಎಂದು ಹಲವರು ಟ್ರೋಲ್ ಮಾಡುತ್ತಿದ್ದಾರೆ. 


ಸಧ್ಯ ಮಂಚು ಲಕ್ಷ್ಮಿ 'ಅಗ್ನಿ ನಕ್ಷತ್ರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಂಚು ಎಂಟರ್‌ಟೈನ್‌ಮೆಂಟ್ ಮತ್ತು ಶ್ರೀ ಲಕ್ಷ್ಮಿ ಪ್ರಸನ್ನ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಮೋಹನ್ ಬಾಬು ಮತ್ತು ಮಂಚು ಲಕ್ಷ್ಮಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದರಲ್ಲಿ ಲಕ್ಷ್ಮಿ ಪವರ್ ಫುಲ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮೋಹನ್ ಬಾಬು ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.