ಮಂಸೋರೆ ನಿರ್ದೇಶನದ ‘19.20.21’ ತೆರೆಗೆ ಬರಲು ಸಜ್ಜು.. ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್

ಉತ್ತಮ ಸಂದೇಶವುಳ್ಳ ಕಥೆಗಳ ಮೂಲಕ ಪ್ರೇಕ್ಷಕರನ್ನು ಎದುರುಗೊಳ್ಳುವ ಮಂಸೋರೆ ಬಹು ನಿರೀಕ್ಷಿತ ಸಿನಿಮಾ ‘19.20.21’. 

Written by - YASHODHA POOJARI | Edited by - Chetana Devarmani | Last Updated : Oct 31, 2022, 06:03 PM IST
  • ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ
  • ಮಂಸೋರೆ ನಿರ್ದೇಶನದ ‘19.20.21’ ತೆರೆಗೆ ಬರಲು ಸಜ್ಜು
  • ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್
ಮಂಸೋರೆ ನಿರ್ದೇಶನದ ‘19.20.21’ ತೆರೆಗೆ ಬರಲು ಸಜ್ಜು.. ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ title=
ಮಂಸೋರೆ

'ಹರಿವು', 'ನಾತಿಚರಾಮಿ', 'ಆಕ್ಟ್ 1978' ಹೀಗೆ ತಮ್ಮ ವಿಭಿನ್ನ ಸಬ್ಜೆಕ್ಟ್ ಸಿನಿಮಾಗಳ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತ ಬಂದಿರುವ ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ. ವಿಶೇಷವಾದ, ಉತ್ತಮ ಸಂದೇಶವುಳ್ಳ ಕಥೆಗಳ ಮೂಲಕ ಪ್ರೇಕ್ಷಕರನ್ನು ಎದುರುಗೊಳ್ಳುವ ಮಂಸೋರೆ ಬಹು ನಿರೀಕ್ಷಿತ ಸಿನಿಮಾ ‘19.20.21’. ಶೀರ್ಷಿಕೆ ಮೂಲಕವೇ ಸಾಕಷ್ಟು ಕ್ಯೂರಿಯಾಸಿಟಿಯನ್ನು ಮೂಡಿಸಿರುವ ಈ ಸಿನಿಮಾ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ.

ಇದನ್ನೂ ಓದಿ : Kannada Rajyotsava Award 2022 : ಚಂದನವನದ ಮೂವರು ದಿಗ್ಗಜರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಹೊಸ ಪೋಸ್ಟರ್ ಗಳ ಮೂಲಕ ಗಮನ ಸೆಳೆದಿರುವ '19.20.21' ಪ್ರೇಕ್ಷಕರಲ್ಲಿ ಕುತೂಹಲವನ್ನೂ ಹುಟ್ಟು ಹಾಕಿದೆ. ಮಂಸೋರೆ ಅವರ ಹಿಂದಿನ ಸಿನಿಮಾಗಳಂತೆ ಈ ಚಿತ್ರ ಕೂಡ ಭಿನ್ನವಾಗಿರುತ್ತೆ ಅನ್ನೋದಕ್ಕೆ ಚಿತ್ರದ ಪೋಸ್ಟರ್ ಗಳು ಸಾಕ್ಷಿಯಾಗಿವೆ. ಪ್ರತಿ ಪೋಸ್ಟರ್ ಗಳು ಈ ಚಿತ್ರದ ಮೂಲಕ ನಿರ್ದೇಶಕರು ಸಮಾಜಕ್ಕೆ ಹೊಸದೊಂದು ಗಟ್ಟಿತನದ ಸಂದೇಶವನ್ನು ಹೇಳ ಹೊರಟಿದ್ದಾರೆ ಎನ್ನುವ ಸುಳಿವನ್ನು ನೀಡಿದೆ. ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೆಣೆದ ಕಥೆ ಚಿತ್ರದಲ್ಲಿದ್ದು, ಸೋಶಿಯಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಚಿತ್ರೀಕರಣ ಮುಗಿಸಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಸಿನಿಮಾ ಬಿಡುಗಡೆಗೂ ತಯಾರಿ ನಡೆಸುತ್ತಿದ್ದು ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ 19.20.21 ಚಿತ್ರತಂಡ. 

ಇದನ್ನೂ ಓದಿ : ವಿರಾಟ್‌ ಕೊಹ್ಲಿ ಬೆಡ್‌ ರೂಂ ವಿಡಿಯೋ ಲೀಕ್‌ ಬಗ್ಗೆ ಅನುಷ್ಕಾ ಅಸಮಾಧಾನ

ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ  ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ 19.20.21 ಚಿತ್ರವನ್ನು ನಿರ್ಮಾಣ ಮಾಡಿದ್ದು ಶ್ರೀಘ್ರದಲ್ಲೇ ಪ್ರೇಕ್ಷರನ್ನು ರಂಜಿಸಲು ಸಿನಿಮಾ ತೆರೆಗೆ ಬರ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News