ಬೋಲ್ಡ್ ಹುಡುಗಿಯಾಗಿ ʼBADʼ ಸಿನಿಮಾಗೆ ಎಂಟ್ರಿಕೊಟ್ಟ ಮಾನ್ವಿತಾ ಕಾಮತ್..!
BAD Kannada movie : ಶಿವಣ್ಣ ನಟನೆಯ ʼಟಗರುʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಮಾನ್ವಿತ ಕಾಮತ್, ಪ್ರಸ್ತುತ ʼBADʼ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ `BAD` ಚಿತ್ರ ಫಸ್ಟ್ ಲುಕ್ ಮೂಲಕ ಜನರ ಮನ ಗೆದ್ದಿದೆ.
Manvita Kamath in BAD movie : ಮಾನ್ವಿತಾ ಕಾಮತ್ ಸ್ಯಾಂಡಲ್‌ವುಡ್‌ನ ಸ್ಟಾರ್ ನಟಿಯರಲ್ಲಿ ಒಬ್ಬರು. ʼಟಗರುʼ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ತಮ್ಮ ನಟನೆ ಮತ್ತು ಸೌಂದರ್ಯದ ಮೂಲಕ ಸಿನಿ ಪ್ರೇಕ್ಷಕರಿಗೆ ಹತ್ತಿರವಾದ ಸುಂದರಿ. ಪ್ರಸ್ತುತ ಮಾನ್ವಿತಾ ಪಿ.ಸಿ ಶೇಖರ್ ನಿರ್ದೇಶನದ "BAD" ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಈಗಾಗಲೇ ಬ್ಯಾಡ್ ಚಿತ್ರ ಫಸ್ಟ್ ಲುಕ್ ಮೂಲಕ ಜನರ ಮನ ಗೆದ್ದಿದೆ. ಪ್ರಮುಖ ಪಾತ್ರಧಾರಿ ನಕುಲ್ ಗೌಡ ಅವರ ಲುಕ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಮಾನ್ವಿತ ಕಾಮತ್ ಅವರ ಪಾತ್ರದ ಕುರಿತು ಮಾತನಾಡಿರುವ ನಿರ್ದೇಶಕ ಪಿ.ಸಿ.ಶೇಖರ್, ಈ ಚಿತ್ರದಲ್ಲಿ ಮಾನ್ವಿತ ಅವರ ಪಾತ್ರದ ಹೆಸರು ಪವಿತ್ರ (ಪವಿ). ತುಂಬಾ ಬೋಲ್ಡ್ ಕ್ಯಾರೆಕ್ಟರ್ ಅವರದು. ವಿಲೇಜ್ ಬ್ಯಾಕ್ ಡ್ರಾಪ್ ನಲ್ಲಿ ಅವರ ಸ್ಟೋರಿ ಸಾಗುತ್ತಾ ಹೋಗುತ್ತದೆ. ನಾನು ಮುಂಚೆ ತಿಳಿಸಿದ ಹಾಗೆ ಕಾಮ, ಕ್ರೋಧ ಸೇರಿದಂತೆ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ನಮ್ಮ ಚಿತ್ರದಲ್ಲಿದೆ. ಈ ಆರು ಪಾತ್ರಗಳಲ್ಲದೆ ಇನ್ನೊಂದು ಪಾತ್ರ ಕೂಡ ಇದೆ ಎಂದು. ಆ ಪಾತ್ರದಲ್ಲಿ ಮಾನ್ವಿತ ಅಭಿನಯಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ: ಮಂತ್ರಾಲಯ ಸನ್ನಿಧಿ-ಬಳ್ಳಾರಿ ಜಾತ್ರೆಯಲ್ಲಿ "ಉಸಿರೇ ಉಸಿರೇ" ಟೀಸರ್ ರಿಲೀಸ್
ನನಗೆ "BAD" ಚಿತ್ರದ ಪಾತ್ರ ಬಹಳ ಇಷ್ಟವಾಯಿತು. ಪವಿತ್ರ ನನ್ನ ಪಾತ್ರದ ಹೆಸರು. ಯಾವುದಕ್ಕೂ ಅಂಜದ, ಬೋಲ್ಡ್ ಹುಡುಗಿಯ ಪಾತ್ರ ನನ್ನದು. ಈ ಹಿಂದೆ ನಿರ್ದೇಶಕ ಸೂರಿ ಅವರು ಕಾಸ್ಟ್ಯೂಮ್ಸ್ ಇದೇ ರೀತಿ ಇರಬೇಕು ಎಂದು ಆಸಕ್ತಿ ತೋರಿಸುತ್ತಿದ್ದರು. ಅದೇ ರೀತಿ ಪಿ.ಸಿ.ಶೇಖರ್ ಅವರು ಕೂಡ ಕಾಸ್ಟ್ಯೂಮ್ಸ್ ಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದೇನೆ ಎಂದು ನಟಿ ಮಾನ್ವಿತ ಕಾಮತ್ ತಿಳಿಸಿದ್ದಾರೆ.
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ "BAD" ಚಿತ್ರಕ್ಕಿದೆ. ʼಪ್ರೀತಿಯ ರಾಯಭಾರಿʼ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.