Margaret Lover of Ramachari : ಯುವ ಪ್ರತಿಭೆ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.


COMMERCIAL BREAK
SCROLL TO CONTINUE READING

ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಷ್, ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.


ಇದನ್ನೂ ಓದಿ: ಹೊಸ ಕಾರು ಖರೀದಿಸಿದ ನಟ ನಾಗಾರ್ಜುನ..! ಬೆಲೆ ಕೇಳಿದ್ರೆ ತಲೆ ತಿರುಗುತ್ತೆ


ಅಭಿಲಾಷ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂಥೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಜಹಾಂಗೀರ್, ಸುಮನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.


ವನಿತಾ ಎಚ್.ಎನ್. ಹಾಗೂ ಹರೀಶ್ ‘ನಿಹಾಂತ್ ಪ್ರೊಡಕ್ಷನ್ಸ್’ ಮೂಲಕ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಆದಷ್ಟು ಬೇಗ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಆರಂಭಿಸಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.