ಮರ್ಯಾದೆ ಪ್ರಶ್ನೆ ಸಿನಿಮಾದಿಂದ ಒಂದು ಮಿಡ್ಲ್ ಕ್ಲಾಸ್ ಆಂತೆಮ್
Maryade Prashne Movie: ಮರ್ಯಾದೆ ಪ್ರಶ್ನೆ ಸಿನಿಮಾದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಕಂಪೋಸ್ ಮಾಡಿದ್ದಾರೆ.
ಬೆಂಗಳೂರು: ನವೆಂಬರ್ 22ಕ್ಕೆ ಬಿಡುಗಡೆ ಆಗುತ್ತಿರುವ ಮರ್ಯಾದೆ ಪ್ರಶ್ನೆ ಸಿನಿಮಾದ ಮೊದಲ ಹಾಡನ್ನು ಪ್ರಮೋದ್ ಮರವಂತೆ ಅವರು ಬರೆದು ನಟ ಶರಣ್ ಹೃದಯಾ ಅವರು ಹಾಡಿದ್ದಾರೆ. ಮರ್ಯಾದೆ ಪ್ರಶ್ನೆ ಸಿನಿಮಾದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಜಾನಪದ ಶೈಲಿಯಲ್ಲಿ ಕಂಪೋಸ್ ಮಾಡಿದ್ದಾರೆ.
ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯದ ಜೊತೆ ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜವನ್ನು ಪರಿಚಯಿಸುವ ಸಲುವಾಗಿ ಸಾಂದರ್ಭಿಕವಾಗಿ ಈ ಹಾಡನ್ನು ಬಳಸಲಾಗಿದೆ ಎಂದು ಚಿತ್ರದ ನಿರ್ದೇಶಕ ನಾಗರಾಜ ಸೋಮಯಾಜಿ ತಿಳಿಸಿದ್ದಾರೆ.
ಇದನ್ನೂ ಓದಿ: ಖ್ಯಾತ ಉದ್ಯಮಿಯೊಂದಿಗೆ ಶ್ರದ್ಧಾ ಕಪೂರ್ ಡೇಟಿಂಗ್..! ಶೀಘ್ರದಲ್ಲೇ ಮದುವೆ ಫಿಕ್ಸ್?!
ಈಗಾಗಲೇ ಬಿಡುಗಡೆ ಮಾಡಿರುವ ಕ್ಯಾರೆಕ್ಟರ್ ಪೋಸ್ಟರ್ ನಲ್ಲಿ ರಾಕೇಶ್ ಅಡಿಗ ಅವರು ಒಬ್ಬ ಕಾರ್ಯಕರ್ತನಾಗಿ ಸುನಿಲ್ ರಾವ್ ಅವರು ಒಬ್ಬ ಡೆಲಿವರಿಬಾಯಾಗಿ,ಪೂರ್ಣಚಂದ್ರ ಮೈಸೂರು ಕ್ಯಾಬ್ ಡ್ರೈವರ್ ಆಗಿ, ತೇಜು ಬೆಳ್ವಾಡಿ ಅವರು ಸೇಲ್ಸ್ ಗರ್ಲ್ ಆಗಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿದ್ದಾರೆ.
ಮಧ್ಯಮ ವರ್ಗದ ಬಗ್ಗೆ ಇರುವ ಈ ಕತೆಯಲ್ಲಿ ಈ ಹಾಡು ತುಂಬಾ ಸೊಗಸಾದ ಸಾಹಿತ್ಯವನ್ನು ಒಳಗೊಂಡಿದೆ.ಈ ಹಾಡಿನ ಸಾಹಿತ್ಯದಲ್ಲಿ ಬರುವ ಪ್ರತಿ ಸಾಲುಗಳು ಧನಾತ್ಮಕ ಚಿಂತನೆಗೆ ಕರೆದೊಯ್ಯುತ್ತದೆ. ದಿನ ಬೆಳಗಾದರೆ ಕೇಳುವ ಹಾಡಾಗಿರಬೇಕು ಎಂಬುದು ಈ ಹಾಡಿನ ಮುಖ್ಯ ಉದ್ದೇಶವಾಗಿ ಕಾಣುತ್ತಿದೆ. ಈ ಹಾಡು ಸಕ್ಕತ್ ಸ್ಟುಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಹೊಂದಿದ್ದು ಹಾಡಿಗೆ ಒಳ್ಳೆ ಅಭಿಪ್ರಾಯಗಳು ಮೂಡಿ ಬರುತ್ತಿದೆ.
ಇದನ್ನೂ ಓದಿ: ಖ್ಯಾತ ಕ್ರಿಕೆಟಿಗನನ್ನು ಮದುವೆಯಾಗಲು ಬಯಸಿದ್ದ ʼಈʼ ಸ್ಟಾರ್ ನಟಿ! ಆದ್ರೆ ಆತ ಸಲಿಂಗಕಾಮಿ ಎಂದು ತಿಳಿದಾಗ ಮಾಡಿದ್ದೇನು ಗೊತ್ತೇ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.