ಮುಂಬೈ: ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಬಿಡುಗಡೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಚಿತ್ರ ರಿಲೀಸ್ ಮಾಡಲಾಗ್ತಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ 21 ವರ್ಷದ ತ್ರಿವೇಣಿ ಬಳ್ಳಾರಿ ಮೇಯರ್ ಆಗಿ ಆಯ್ಕೆ!


ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಸಿನಿಮಾ ಮೂಡಿಬಂದಿದ್ದು, ಅದಕ್ಕಾಗಿ ಐದು ಎಕರೆ ಜಾಗದಲ್ಲಿ ಹಳ್ಳಿಯೊಂದನ್ನು ರೀ ಕ್ರಿಯೇಟ್ ಮಾಡಿ ಕೋಟ್ಯಾತರ ರೂಪಾಯಿ ಬಜೆಟ್ ನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ.


ಇದನ್ನೂ ಓದಿ: "ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು"-ಯತ್ನಾಳ್ 


70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ. 


ತಾರಾಬಳಗ: ರವಿತೇಜ, ನೂಪುರ್ ಸನೂನ್, ಗಾಯತ್ರಿ ಭಾರದ್ವಾಜ್ ಮತ್ತು ಇತರರು
ಕಥೆ-ನಿರ್ದೇಶನ-ವಂಶಿ
ನಿರ್ಮಾಪಕ: ಅಭಿಷೇಕ್ ಅರ್ಗವಾಲ್
ಬ್ಯಾನರ್: ಅಭಿಷೇಕ್ ಅರ್ಗವಾಲ್ ಆರ್ಟ್ಸ್
ಸಂಭಾಷಣೆ: ಶ್ರೀಕಾಂತ್ ವಿಸಾ
ಸಂಗೀತ ನಿರ್ದೇಶಕ: ಜಿವಿ ಪ್ರಕಾಶ್ ಕುಮಾರ್
ಪಿಆರ್ ಒ: ಹರೀಶ್ ಅರಸುhttps://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.