ನೀನಾಸಂ ಸತೀಶ್ ಹಾಗೂ ರಚಿತಾರಾಮ್ "ಅಯೋಗ್ಯ" ಚಿತ್ರದ ನಂತರ ನಟಿಸಿರುವ ಚಿತ್ರ "ಮ್ಯಾಟ್ನಿ". ಬಹು ನಿರೀಕ್ಷಿತ ಈ ಚಿತ್ರದ " ಬಾರೋ ಬಾರೋ ಬಾಟಲ್ ತಾರೋ" ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ  ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ ಶಿವರಾಜ್ ಕೆ.ಆರ್ ಪೇಟೆ ಹೆಜ್ಜೆ ಹಾಕಿದ್ದಾರೆ. ಹೊಸವರ್ಷದ ಹರುಷವನ್ನು ಹೆಚ್ಚಿಸುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.


ಇದನ್ನೂ ಓದಿ: ಕಾಮಾಕ್ಷಿ ನಿನ್ನ ಕಣ್ಣ ನೋಟ ಬಲು ಡೇಂಜರ್‌..! ಯುವಕರಿಗೆ ನ್ಯೂ ಇಯರ್‌ ಕಿಕ್‌ ಕೊಟ್ಟ ಸುಂದರಿ


F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಪಾರ್ವತಿ ಎಸ್ ಗೌಡ ನಿರ್ಮಿಸಿರುವ, ಮನೋಹರ್ ಕಾಂಪಲ್ಲಿ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.ಸುಧಾಕರ್ ಎಸ್ ರಾಜ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ "ಮ್ಯಾಟ್ನಿ" ಚಿತ್ರಕ್ಕಿದೆ. ನೀನಾಸಂ ಸತೀಶ್, ರಚಿತಾ ರಾಮ್, ಅದಿತಿ  ಪ್ರಭುದೇವ, ನಾಗಭೂಷಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.