ಆನಂದ್ ನಾ ಕೋಳಿಕೆ ರಂಗ ಇದೇ ನವೆಂಬರ್ 10ಕ್ಕೆ ಬಿಡುಗಡೆ..

Na Kolikke Ranga: ಮಾಸ್ಟರ್ ಆನಂದ್ ಖ್ಯಾತಿಯ ಆನಂದ್ ಹಾಗೂ ರಾಜೇಶ್ವರಿ ಮುಖ್ಯ ಪಾತ್ರದಲ್ಲಿರುವ ಈ ಚಿತ್ರದಲ್ಲಿ ಹೆಚ್ಚಿನ ಸಂಖ್ಯೆಯ ಕಾಮಿಡಿ ಕಿಲಾಡಿ ಕಲಾವಿದರು ನಟಿಸಿರುವುದು ವಿಶೇಷ.

Written by - Yashaswini V | Last Updated : Nov 7, 2023, 07:50 AM IST
  • ಇದು ಕೊರೊನಾ ಸಂಕಷ್ಟಗಳನ್ನು ಎದುರಿಸಿ ನಿಂತಿರುವ ಚಿತ್ರ.
  • ಹಾಗಾಗಿ ಬಿಡುಗಡೆ ಕಾಣುವುದು ತಡವಾಗಿದೆ.
  • ಆದರೂ ಚಿತ್ರ ಗೆಲುವು ಕಾಣುವ ಬಗ್ಗೆ ನಮಗೆ ಯಾವುದೇ ಸಂಶಯವಿಲ್ಲ.
ಆನಂದ್ ನಾ ಕೋಳಿಕೆ ರಂಗ ಇದೇ ನವೆಂಬರ್ 10ಕ್ಕೆ ಬಿಡುಗಡೆ.. title=

Na Kolikke Ranga: ಎಸ್.ಟಿ.ಸೋಮಶೇಖರ್ ನಿರ್ಮಿಸಿ ಗೊರವಾಲೆ ಮಹೇಶ್ ನಿರ್ದೇಶನ ಮಾಡಿರುವ ಗ್ರಾಮೀಣ ಭಾಗದ ಸೊಗಡಿನ ಕಥೆ ಹೇಳುವ 'ನಾ ಕೋಳಿಕೆ ರಂಗ ಇದೇ ನವೆಂಬರ್ 10 ರಂದು ಬಿಡುಗಡೆ ಆಗಲಿದೆ. 

ಮಾಸ್ಟರ್ ಆನಂದ್ ಖ್ಯಾತಿಯ ಆನಂದ್ ಹಾಗೂ ರಾಜೇಶ್ವರಿ ಮುಖ್ಯ ಪಾತ್ರದಲ್ಲಿರುವ ಈ ಚಿತ್ರದಲ್ಲಿ ಹೆಚ್ಚಿನ ಸಂಖ್ಯೆಯ ಕಾಮಿಡಿ ಕಿಲಾಡಿ ಕಲಾವಿದರು ನಟಿಸಿರುವುದು ವಿಶೇಷ.

ಸೋಮವಾರ ನಡೆದ ಚಿತ್ರದ ಬಿಡುಗಡೆ ಪೂರ್ವ ಸುದ್ದಿಗೋಷ್ಠಿಯಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡು ವಿವರಗಳನ್ನು ನೀಡಿದ ಚಿತ್ರತಂಡ, ಇದು ಕೊರೊನಾ ಸಂಕಷ್ಟಗಳನ್ನು ಎದುರಿಸಿ ನಿಂತಿರುವ ಚಿತ್ರ. ಹಾಗಾಗಿ ಬಿಡುಗಡೆ ಕಾಣುವುದು ತಡವಾಗಿದೆ. ಆದರೂ ಚಿತ್ರ ಗೆಲುವು ಕಾಣುವ ಬಗ್ಗೆ ನಮಗೆ ಯಾವುದೇ ಸಂಶಯವಿಲ್ಲ. ಏಕೆಂದರೆ ಚಿತ್ರ ಎಲ್ಲಿಯೂ ಕೂಡ ಬೋರ್ ಎನಿಸುವುದಿಲ್ಲ ಎಂದರು ನಿರ್ಮಾಪಕ ಎಸ್.ಟಿ.ಸೋಮಶೇಖರ್. 

ನನಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಅತೀವವಾದ ಗೌರವವಿತ್ತು. ಹಾಗಾಗಿ ಅವರ ಬಗ್ಗೆ ಹಠ ತೊಟ್ಟು ಹಾಡು ಮಾಡಿದೆವು. ಕೈಲಾಸ್ ಖೇರ್ ಹಾಡಿರುವ ಆ ಹಾಡು ಅತ್ಯುತ್ತಮವಾಗಿ ಮೂಡಿ ಬಂದಿದೆ. ಮಾತ್ರವಲ್ಲ; ಈಗಾಗಲೇ ಜನಮನ ಗೆದ್ದಿದೆ ಎಂದರು.

ಇದನ್ನೂ ಓದಿ- ನಟ್ವರ್ ಲಾಲ್‌ನ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ 'ಕಾಂತಾರ' ಗಾಯಕ

ಇನ್ನು ವರನಟ ಡಾ.ರಾಜ್ ಕುಮಾರ್ ಅವರ ಮೇಲೆ ಅತೀವವಾದ ಅಭಿಮಾನ ಹಾಗಾಗಿ ಪುನೀತ್ ಸರ್ ಅವರಿಂದ ಒಂದು ಹಾಡು ಹಾಡಿಸಬೇಕೆಂದು ಮಾಡಿದ ಪ್ರಯತ್ನ ಕೂಡ ಯಶಸ್ಸು ಕಂಡಿತು. ದೇವರ ಮಗ ಅವರು ಮಾಸ್ಟರ್ ಆನಂದ್ ಅವರಿಗೆ ನೀವು ಹಾಡಬೇಕು ಎಂದ ತಕ್ಷಣವೇ ಒಪ್ಪಿ ಹಾಡಿದರು. ಅದು ನನ್ನ ಪುಣ್ಯ ಎಂದು ನಿರ್ಮಾಪಕ ಸೋಮಶೇಖರ್ ತಿಳಿಸಿದರು. 

ಚಿತ್ರವನ್ನು ಕಷ್ಟಪಟ್ಟು ಮಾಡಿದ್ದೇವೆ. ಈಗ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಬರಬೇಕಾಗಿದೆ. ಈಗ ಅದನ್ನು ಎದುರು ನೋಡುತ್ತಿದ್ದೇವೆ ಎಂದರು ನಿರ್ದೇಶಕ ಗೊರವಾಲೆ ಮಹೇಶ್.

ಮುಖ್ಯ ಪಾತ್ರದಲ್ಲಿ ನಟಿಸಿರುವ ರಿಯಾಲಿಟಿ ಶೋನ ಡಾರ್ಲಿಂಗ್ ಮಾಸ್ಟರ್ ಆನಂದ್, ಇದು ತಮಗೆ ದಕ್ಕಿದ ಅಪೂರ್ವ ಅವಕಾಶವಾಗಿದೆ ಎಂದರು. ಈ ಚಿತ್ರ ಮಾಡಿದ್ದು ಆಕಸ್ಮಿಕ. ಕೊರೊನಾ ಸಮಯದಲ್ಲಿ ಆರಂಭವಾದ ಸಿನಿಮಾ ಈಗ ಬಿಡುಗಡೆ ಕಾಣುತ್ತಿದೆ. ನಿರ್ಮಾಪಕರು ಸೇರಿದಂತೆ ತಂಡದ ಎಲ್ಲರೂ ಶ್ರಮಪಟ್ಟಿದ್ದಾರೆ. ನನ್ನ ಜೊತೆ ಕಾಮಿಡಿ ಕಿಲಾಡಿ ತಂಡವು ಪರಿಶ್ರಮ ಪಟ್ಟಿದೆ. ಹಾಗಾಗಿ ನಾನು ಎಲ್ಲರಿಗೂ ಕೃತಜ್ಞತೆ ಹೇಳುವೆ ಎಂದರು.

ಇದನ್ನೂ ಓದಿ- "ಎಲೆಕ್ಟ್ರಾನಿಕ್ ಸಿಟಿ"ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್

ಹಿರಿಯ ನಟಿ ಭವ್ಯ ತಾಯಿ ಪಾತ್ರವನ್ನು ನಿರ್ವಹಿಸಿದ್ದು, ಅವರು ಚಿತ್ರತಂಡದ ಜೊತೆಗಿನ ಅನುಭವಗಳನ್ನು ಹೇಳಿಕೊಂಡರು. ಈ ಚಿತ್ರ ನನ್ನ ವೃತ್ತಿ ಬದುಕಿನ ಮೊದಲ ಚಿತ್ರವಾಗಿರುವುದು ನನ್ನ ಪುಣ್ಯ ಎಂದರು ಸಂಗೀತ ನಿರ್ದೇಶಕ ರಾಜು ಎಮ್ಮಿಗನೂರು. ನಿರ್ಮಾಪಕ ಸೋಮಶೇಖರ್ ಅವರ  ಪುತ್ರಿ ರಾಜೇಶ್ವರಿ ಹಾಗೂ ಅವರ ಹಿರಿಯ ಸಹೋದರ ಮಾತನಾಡಿದಾಗ ಇಡೀ ವಾತಾವರಣ ಭಾವುಕತೆಗೆ ಒಳಪಟ್ಟಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News