‘ಯಶಸ್ಸು, ಆಯಸ್ಸು ನಿನ್ನ ಪಾಲಿಗಿರಲಿ’..; ರಾಘಣ್ಣನ ಹುಟ್ಟುಹಬ್ಬಕ್ಕೆ ಶಿವಣ್ಣನ ಭಾವುಕ ಶುಭಾಶಯ

Raghavendra Rajkumar Birthday: ಮಂಗಳವಾರ ರಾಘವೇಂದ್ರ ರಾಜಕುಮಾರ್ ಅವರು 58ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾಘಣ್ಣನ ಹುಟ್ಟುಹಬ್ಬಕ್ಕೆ ಸಹೋದರ ಶಿವರಾಜಕುಮಾರ್ ಭಾವನಾತ್ಮಕವಾಗಿ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.  

Written by - Puttaraj K Alur | Last Updated : Aug 15, 2023, 01:29 PM IST
  • ಮಂಗಳವಾರ ರಾಘವೇಂದ್ರ ರಾಜಕುಮಾರ್ ಅವರು 58ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ
  • ಯಶಸ್ಸು, ಆಯಸ್ಸು, ಸುಖ, ಸಂತೋಷ, ಎಲ್ಲವೂ ನಿನ್ನ ಪಾಲಿಗಿರಲಿ ರಾಘು
  • ರಾಘಣ್ಣನ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಶಿವಣ್ಣ
‘ಯಶಸ್ಸು, ಆಯಸ್ಸು ನಿನ್ನ ಪಾಲಿಗಿರಲಿ’..; ರಾಘಣ್ಣನ ಹುಟ್ಟುಹಬ್ಬಕ್ಕೆ ಶಿವಣ್ಣನ ಭಾವುಕ ಶುಭಾಶಯ  title=
ರಾಘಣ್ಣನ ಹುಟ್ಟುಹಬ್ಬಕ್ಕೆ ಶಿವಣ್ಣ ಶುಭಾಶಯ

ಬೆಂಗಳೂರು: ಇಡೀ ದೇಶವೇ ಅತ್ಯಂತ ಸಡಗರ-ಸಂಭ್ರಮದಿಂದ 77ನೇ ಸ್ವಾತಂತ್ರೋತ್ಸವವನ್ನು ಆಚರಿಸುತ್ತಿದೆ. ಇದೇ ದಿನ ಹುಟ್ಟಿದವರು ಸಹ ಸ್ವಾತಂತ್ರ್ಯ ದಿನದ ಜೊತೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಡಾ.ರಾಜಕುಮಾರ್ ಅವರ 2ನೇ ಪುತ್ರ ರಾಘವೇಂದ್ರ ರಾಜಕುಮಾರ್ ಸಹ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಮಂಗಳವಾರ ರಾಘವೇಂದ್ರ ರಾಜಕುಮಾರ್ ಅವರು 58ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾಘಣ್ಣನವರ ಹುಟ್ಟುಹಬ್ಬಕ್ಕೆ ಚಿತ್ರರಂಗದ ನಟ-ನಟಿಯರು ಮತ್ತು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅದೇ ರೀತಿ ಸಹೋದರ ಶಿವರಾಜಕುಮಾರ್ ಸಹ ಭಾವನಾತ್ಮಕವಾಗಿ ಟ್ವೀಟ್ ಮಾಡುವ ಮೂಲಕ ರಾಘಣ್ಣನ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.  

ಇದನ್ನೂ ಓದಿ: ಯಶ್ ಫ್ಯಾನ್ಸ್‌ಗೆ ಗುಡ್ ನ್ಯೂಸ್, ಕೆಜಿಎಫ್ 3 ಶೂಟಿಂಗ್‌ ಬಗ್ಗೆ ಬಿಗ್‌ ಅಪ್‌ಡೇಟ್‌ !

ರಾಘಣ್ಣನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ‘ತಮ್ಮನಾಗಿ ನನಗೆ ಎಷ್ಟೋ ಬಾರಿ ಶಕ್ತಿ ತುಂಬಿದ್ದೀಯ. ಕುಟುಂಬದ ಪ್ರತಿಯೊಬ್ಬರ ಜೊತೆಗೂ ಸ್ಫೂರ್ತಿಯಾಗಿ ನಿಂತಿದ್ದೀಯ. ಯಶಸ್ಸು, ಆಯಸ್ಸು, ಸುಖ, ಸಂತೋಷ, ಎಲ್ಲವೂ ನಿನ್ನ ಪಾಲಿಗಿರಲಿ. ಹುಟ್ಟು ಹಬ್ಬದ ಶುಭಾಶಯಗಳು ರಾಘು’ ಹಾರೈಸಿದ್ದಾರೆ.

ತಮ್ಮನ ಹುಟ್ಟುಹಬ್ಬಕ್ಕೆ ಶಿವಣ್ಣ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಕ್ಕೆ ಅವರ ಲಕ್ಷಾಂತರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ನೂರುಕಾಲ ಹೀಗೆ ನಗು-ನಗುತಾ ಇರಿ ಎಂದು ಅವರು ಅಣ್ಣಾವ್ರ ಕುಡಿಗಳಿಗೆ ಶುಭ ಹಾರೈಸಿದ್ದಾರೆ. ಇನ್ನೂ ರಾಘವೇಂದ್ರ ರಾಜಕುಮಾರ್ ಅವರು ಇದುವರೆಗೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅನಾರೋಗ್ಯದ ಬಳಿಕ ಚೇತರಿಸಿಕೊಂಡ ಅವರು ಇದೀಗ ಪೋಷಕ ಪಾತ್ರದಲ್ಲಿ ನಟಿಸುತ್ತಿದ್ದಾರೆ.  

ಇದನ್ನೂ ಓದಿ: Jailer : 'ಜೈಲರ್- 2 ಫಿಕ್ಸ್? ಡ್ರೀಮ್ ಪ್ರಾಜೆಕ್ಟ್ ಬಗ್ಗೆ ನೆಲ್ಸನ್ ಹೇಳಿದ್ದೇನು ಗೊತ್ತಾ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News