ಮೆಗಾಸ್ಟಾರ್ ಚಿರಂಜೀವಿಗೆ ಕರೊನಾ..!
ಈ ಕುರಿತಂತೆ ಟ್ವಿಟ್ ಮಾಡಿರುವ ಮೆಗಾಸ್ಟಾರ್ ಚಿರಂಜೀವಿ ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲದೇ ಇದ್ದರೂ, ನನಗೆ ಕೊರೋನಾ ಸೋಂಕು ಪತ್ತೆಯಾಗಿದ್ದು ಪರೀಕ್ಷೆಯ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಎಂದೇ ಖ್ಯಾತಿ ಪಡೆದಿರುವಂತ ನಟ ಚಿರಂಜೀವಿ ಅವರಿಗೆ ಕೊರೋನಾ ಪಾಸಿಟಿವ್ (Corona positive) ಆಗಿರುವುದು ದೃಢಪಟ್ಟಿದೆ. ಹೀಗಾಗಿ ಅವರ ತಮ್ಮ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಚಿತ್ರದಿಂದ ತ್ರಿಶಾ ಹೊರನಡೆಯಲು ಕಾರಣವೇನು ಗೊತ್ತೇ?
ಈ ಕುರಿತಂತೆ ಟ್ವಿಟ್ ಮಾಡಿರುವ ಮೆಗಾಸ್ಟಾರ್ ಚಿರಂಜೀವಿ (Chiranjeevi) ಯವರು, 'ಆಚಾರ್ಯ' ಚಿತ್ರದ ಶೂಟಿಂಗ್ (shooting) ನಲ್ಲಿ ಭಾಗವಹಿಸುವುದಕ್ಕಿಂತ ಮೊದಲು ನಾನು ಕೊರೋನಾ ಟೆಸ್ಟ್ ಗೆ ಒಳಪಟ್ಟಿದೆ. ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲದೇ ಇದ್ದರೂ, ನನಗೆ ಕೊರೋನಾ ಸೋಂಕು ಪತ್ತೆಯಾಗಿದ್ದು ಪರೀಕ್ಷೆಯ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಾನು ಸ್ವಯಂ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಅಮಿತಾಬ್ ಬಚ್ಚನ್ ಗೂ ಡೋಂಟ್ ಕೇರ್ ಎಂದಿದ್ದ ಚಿರಂಜೀವಿ, ರಜನಿಕಾಂತ್..!
ಇನ್ನು ಕಳೆದ 5 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರಿಗೂ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿರುವ ಚಿರಂಜೀವಿ ಒಂದು ವೇಳೆ ಸೋಂಕಿನ ಲಕ್ಷಣಗಳಿದ್ದರೇ ತಪ್ಪದೇ ಪರೀಕ್ಷೆಗೆ ಒಳಪಟ್ಟು ಚಿಕಿತ್ಸೆ ಪಡೆಯುವಂತೆ ಕೋರಿದ್ದಾರೆ. ಅವರ ಚಿಕಿತ್ಸೆ ಹಾಗೂ ಆರೋಗ್ಯದ ಸ್ಥಿತಿಗತಿ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುವುದಾಗಿಯೂ ತಿಳಿಸಿದ್ದಾರೆ.