ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎ ಆರ್ ಸಿ ಚಾನಲ್ ನಲ್ಲಿ ಬಿಡುಗಡೆಯಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗುಡ್‌ ನ್ಯೂಸ್‌ : ಮೊದಲ ಮಗುವಿನ ನಿರೀಕ್ಷೆಯಲ್ಲಿ ನಿವೇದಿತ-ಚಂದನ್‌ ಶೆಟ್ಟಿ..!


ಜೇಮ್ಸ್ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ. ಮಾಧುರ್ಯ ತುಂಬಿದ ಈ ಹಾಡನ್ನು ವಿಶೇಷವಾಗಿ ನಿರ್ಮಿಸಲಾಗಿರುವ ಸೆಟ್ನಲ್ಲಿ ಚಿತ್ರೀಕರಣ ಮಾಡುವುದರ ಜೊತೆಗೆ, ಕುಮಟದ ಸುಂದರ ಪರಿಸರದಲ್ಲಿ ಸೆರೆ ಹಿಡಿಯಲಾಗಿದೆ.


ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದು ಬಿಡುಗಡೆಗೆ ಸಜ್ಜಾಗುತ್ತಿರುವ ಕಡಲ ತೀರದ ಭಾರ್ಗವ ಚಿತ್ರದ ಪ್ರಮೋಷನ್ ಇದೀಗ ಈ ಹಾಡಿನಿಂದ ಪ್ರಾರಂಭವಾಗಿದೆ. ಕಳೆದ ವರ್ಷ ಚಿತ್ರದ ಸಮಯವೇ ಎಂಬ ಲಿರಿಕಲ್ ವೀಡಿಯೋ ಬಿಡುಗಡೆಯಾಗಿತ್ತು. ಈಗ ಮಧುರ ಮಧುರ ಚಿತ್ರದ ವೀಡಿಯೋ ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಯಾಗಲಿದೆ.


ಇದನ್ನೂ ಓದಿ: Viral Video: ಈ ಬಾರಿ ಹಾಟ್ನೆಸ್ ನಿಂದಲ್ಲ ಫಿಟ್ನೆಸ್ನಿಂದ ಅಭಿಮಾನಿಗಳನ್ನು ದಂಗಾಗಿಸಿದ ದಿಶಾ ಪಾಟ್ನಿ, ವಿಡಿಯೋ ನೋಡಿ


‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ನಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.