Michael First Look: ಇತ್ತೀಚೆಗಷ್ಟೇ ಈ ಬಳಗಕ್ಕೆ ನಟ, ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ಸೇರ್ಪಡೆಗೊಂಡಿದ್ದರು. ಇದೀಗ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಳ್ಳಲು ಸಜ್ಜಾಗುತ್ತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ರಿಲೀಸ್ ದಿನಾಂಕವನ್ನೂ ಘೋಷಿಸಲಿದೆ. ಅದಕ್ಕೂ ಮುನ್ನ ಇದೀಗ ಈ ಚಿತ್ರದ ಹೊಸದಾದ ಫಸ್ಟ್ ಲುಕ್ ಬಿಡುಗಡೆ ಆಗಿದೆ. 


COMMERCIAL BREAK
SCROLL TO CONTINUE READING

ಸಂದೀಪ್ ಕಿಶನ್, ವಿಜಯ್ ಸೇತುಪತಿ ಮುಖ್ಯಭೂಮಿಕೆಯಲ್ಲಿರುವ ಮೈಕಲ್ ಚಿತ್ರ ಒಂದಿಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಬಳಗಕ್ಕೆ ನಟ, ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ಸೇರ್ಪಡೆಗೊಂಡಿದ್ದರು. ಇದೀಗ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಳ್ಳಲು ಸಜ್ಜಾಗುತ್ತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ  ರಿಲೀಸ್ ದಿನಾಂಕವನ್ನೂ ಘೋಷಿಸಲಿದೆ. ಅದಕ್ಕೂ ಮುನ್ನ ಇದೀಗ ಈ ಚಿತ್ರದ ಹೊಸದಾದ ಫಸ್ಟ್ ಲುಕ್ ಬಿಡುಗಡೆ ಆಗಿದೆ. 


ಇದನ್ನೂ ಓದಿ: ರಸ್ತೆ ಅಪಘಾತ: ‘ಸಿಲ್ಲಿ ಲಲ್ಲಿ’ ಖ್ಯಾತಿಯ ನಟಿ ಸುನೇತ್ರಾ ಪಂಡಿತ್‌ಗೆ ಗಂಭೀರ ಗಾಯ


ಶ್ರೀ ವೆಂಕಟೇಶ್ವರ ಸಿನಿಮಾಸ್​ ಎಲ್ಎಲ್​ಪಿ, ಕರಣ್ ಸಿ ಪ್ರೊಡಕ್ಷನ್ಸ್ ಎಲ್​ಎಲ್​ಪಿ ಬ್ಯಾನರ್​ನಲ್ಲಿ ಭರತ್ ಚೌಧರಿ, ಪುಷ್ಕರ್ ರಾಮ್ ಮೋಹನ್ ರಾವ್ ಮೈಕಲ್ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರವನ್ನು ರಂಜಿತ್ ಜಯೆಕೊಡಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷ ಏನೆಂದರೆ, ಕೇವಲ ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಮಲಯಾಳಂ, ಹಿಂದಿಯಲ್ಲಿಯೂ ಈ ಸಿನಿಮಾ ಸಿದ್ಧವಾಗುತ್ತಿದೆ. 


ಮಾಸ್ ಆ್ಯಕ್ಷನ್ ಮತ್ತು ಕಮರ್ಷಿಯಲ್ ಅಂಶಗಳುಳ್ಳ ಈ ಸಿನಿಮಾ, ಸದ್ಯ ಚಿತ್ರೀಕರಣದಲ್ಲಿ ಬಿಜಿಯಾಗಿದೆ. ಈ ಚಿತ್ರದಲ್ಲಿ ಕಿಶನ್ ಗೆ ನಾಯಕಿಯರಾಗಿ ದಿವ್ಯಾಂಶ ಕೌಶಿಕ್, ವರಲಕ್ಷ್ಮಿ ಶರತ್ ಕುಮಾರ್ ನಟಿಸಿದರೆ‌, ವರುಣ್ ಸಂದೇಶ್ ಪ್ರಮುಖ ಪಾತ್ರದಲ್ಲಿದ್ದಾರೆ. 


ಇದನ್ನೂ ಓದಿ: ರಿಲೀಸ್‌ಗೂ ಮುನ್ನ 'ವಿಕ್ರಾಂತ್ ರೋಣ' ರೆಕಾರ್ಡ್‌! ದಾಖಲೆಯ ಮೊತ್ತಕ್ಕೆ ಮಾರಾಟವಾದ ಮೊದಲ ಕನ್ನಡ ಚಿತ್ರ


ಇನ್ನು ಈವರೆಗೂ ಕಂಟೆಂಟ್ ಬೇಸ್ಡ್​ ಮತ್ತು ಕಮರ್ಷಿಯಲ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ನಟ ಸಂದೀಪ್ ಕಿಶನ್, ಈ ಚಿತ್ರದಲ್ಲಿ ಹಿಂದೆಂದೂ ಕಾಣಿಸದ ಲುಕ್​ನಲ್ಲಿ ಎದುರಾಗುತ್ತಿದ್ದಾರೆ. ಈ ಸಿನಿಮಾದ ಸಲುವಾಗಿ ದೇಹವನ್ನು ಹುರಿಗೊಳಿಸಿದ್ದಾರೆ. ಸಿಕ್ಸ್ ಪ್ಯಾಕ್ ಅವತಾರ, ಖಡಕ್ ಲುಕ್, ಲಾಂಗ್ ಹೇರ್ ನಿಂದಲೇ ಹೊಸ ಸಂದೀಪ್ ಕಿಶನ್ ಮೈಕಲ್ ಸಿನಿಮಾದಲ್ಲಿ ಕಾಣಿಸಲಿದ್ದಾರೆ.. 


ವಿಜಯ್ ಸೇತುಪತಿ, ಗೌತಮ್ ಮೆನನ್ ಜತೆಗೆ ತೆರೆ ಹಂಚಿಕೊಳ್ಳುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.